ಜಾಗೃತರಾಗದಿದ್ದರೆ ಜುಲೈ-ಆಗಸ್ಟ್‌ನಲ್ಲಿ ಆಪತ್ತು: ಕ್ಯಾ. ಡಾ| ರಾಜೇಂದ್ರ
Team Udayavani, Jul 1, 2020, 4:08 PM IST
ಹುನಗುಂದ: ಕೋವಿಡ್ ವೈರಸ್ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು ಸಾಮಾಜಿಕ ಅಂತರ ಕಾಯ್ದುಕೊಳ್ಳದಿದ್ದರೆ ಹಾಗೂ ಸುಮ್ಮನೆ ಹೊರಗಡೆ ಸಂಚರಿಸುವುದನ್ನು ನಿಲ್ಲಿಸದಿದ್ದರೆ ಜುಲೈ-ಆಗಸ್ಟ್ ತಿಂಗಳಲ್ಲಿ ಬಹು ದೊಡ್ಡ ಆಪತ್ತು ಎದುರಿಸುವ ಸಮಯ ಬರುತ್ತದೆ ಎಂದು ಜಿಲ್ಲಾಧಿಕಾರಿ ಕ್ಯಾಪ್ಟನ್ ಡಾ| ರಾಜೇಂದ್ರ ಕಳವಳ ವ್ಯಕ್ತಪಡಿಸಿದರು.
ಪಟ್ಟಣದ ಬಸವ ಮಂಟಪದಲ್ಲಿ ಜಿಲ್ಲಾಡಳಿತ ಮತ್ತು ತಾಲೂಕಾಡಳಿತದ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಕೋವಿಡ್ ವಾರಿಯರ್ಸ್ ಕಾರ್ಯಾಗಾರದಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಕಳೆದ ನಾಲ್ಕೈದು ವಾರಗಳಿಂದ ಕೋವಿಡ್ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ಸಾಮಾಜಿಕ ಅಂತರ ಕಾಯ್ದುಕೊಳ್ಳದೇ, ಮಾಸ್ಕ್ ಧರಿಸದೇ ಓಡಾಡುವುದು, ಗುಂಪಾಗಿ ನಿಲ್ಲುವುದರಿಂದ ಸಾಕಷ್ಟು ಪ್ರಕರಣಗಳು ಕಂಡು ಬರುತ್ತಿವೆ. ಕಟ್ಟುನಿಟ್ಟಾಗಿ ಸಾಮಾಜಿಕ ಅಂತರ ಕಾಯ್ದುಕೊಂಡು ಕಡ್ಡಾಯವಾಗಿ ಮಾಸ್ಕ್ ಧರಿಸದಿದ್ದರೆ ಮೊತ್ತೂಮ್ಮೆ ಲಾಕ್‌ಡೌನ್ ಆಗುವ ಸಂಭವ ಉಂಟಾದರು ಅಚ್ಚರಿ ಪಡಬೇಕಿಲ್ಲ.
ಕೋವಿಡ್ ನಿಯಂತ್ರಣಕ್ಕಾಗಿ ಹಗಲಿರುಳು ಶ್ರಮಿಸುತ್ತಿರುವ ಆಶಾ-ಅಂಗನವಾಡಿ ಕಾರ್ಯಕರ್ತೆಯರು, ಪುರಸಭೆ ಸಿಬ್ಬಂದಿ, ಆರೋಗ್ಯ ಇಲಾಖೆ ಸಿಬ್ಬಂದಿ, ಗ್ರಾಮ ಲೆಕ್ಕಾ ಕಾರಿಗಳು, ಗ್ರಾಪಂ ಅಭಿವೃದ್ಧಿ ಅಧಿಕಾರಿಗಳು ಮುಂಜಾಗ್ರತೆ ವಹಿಸಿದ್ದರಿಂದ ಬೇರೆ ಜಿಲ್ಲೆಗಳಿಗಿಂತ ನಮ್ಮ ಜಿಲ್ಲೆ ಕೋವಿಡ್ ಪ್ರಕರಣಗಳು ಕಡಿಮೆ. ಈ ಸಂದರ್ಭದಲ್ಲಿ ಮದುವೆ ಸಮಾರಂಭ ಮತ್ತು ಶವದ ಅಂತ್ಯ ಸಂಸ್ಕಾರದಲ್ಲಿ ಹೆಚ್ಚಿಗೆ ಜನ ಸೇರುವುದನ್ನು ನಿಲ್ಲಿಸಬೇಕು. ಮಾರುಕಟ್ಟೆ ಮತ್ತು ಅಂಗಡಿ-ಮುಂಗಟ್ಟುಗಳಲ್ಲಿ ಸಾಮಾಜಿಕ ಅಂತರ ಕಾಯ್ದುಕೊಳ್ಳುವ ಶಿಸ್ತಿನ ಕ್ರಮ ಜರುಗಿಸಬೇಕೆಂದು ತಿಳಿಸಿದರು.
ಈ ವೇಳೆ ಉಪ ವಿಭಾಗಾಧಿಕಾರಿ ಎಂ.ಗಂಗಪ್ಪ, ಎಂಎನ್‌ಸಿ ರಿಯಾಜ್‌ಆಚಾರ್, ತಹಶೀಲ್ದಾರ್ ಬಸವರಾಜ ನಾಗರಾಳ, ಮುಖ್ಯಾಧಿಕಾರಿ ಈರಣ್ಣ ಗುಡದಾರಿ, ಸಿಪಿಐ ಅಯ್ಯನಗೌಡ ಪಾಟೀಲ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Politicss; 1008 ಸಾಧುಸಂತರ ಪಾದಪೂಜೆ ಮೂಲಕ ಕ್ರಾಂತಿವೀರ ಬ್ರಿಗೇಡ್ ಗೆ ಚಾಲನೆ: ಈಶ್ವರಪ್ಪ
India: ಒಂದು ದೇಶ ಒಂದು ಚುನಾವಣೆ ಜಾರಿ ಆಗಲಿ: ಪೇಜಾವರ ಸ್ವಾಮೀಜಿ
Rabkavi Banahatti: ಲೋಕ ಅದಾಲತ್ ನಲ್ಲಿ ಒಂದಾದ ದಂಪತಿಗಳು
ವಿಳಾಸ ಕೇಳುವ ನೆಪದಲ್ಲಿ ವ್ಯಕ್ತಿಯ ಕೊರಳಲ್ಲಿದ್ದ ಚಿನ್ನದ ಚೈನ್ ಕದ್ದ ಅಪರಿಚಿತ ವ್ಯಕ್ತಿ
Mudhol: ಬಸ್ ಗೆ ಡಿಕ್ಕಿ ಹೊಡೆದ ಬೈಕ್… ಸವಾರರಿಗೆ ಗಂಭೀರ ಗಾಯ
MUST WATCH
ಹೊಸ ಸೇರ್ಪಡೆ
Ambedkar row: ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜಕೀಯ ಬಿಟ್ಟು ಹೋಗಲಿ ಎಂದ ಲಾಲು ಪ್ರಸಾದ್
ಹೊಸ ವರ್ಷಕ್ಕೆ ಮಾರ್ಗಸೂಚಿ ಬಿಡುಗಡೆ ಮಾಡಿದ ಪೊಲೀಸರು, ಎಲ್ಲಿ…? ಇಲ್ಲಿದೆ ನೋಡಿ ಮಾಹಿತಿ
Lok Adalat: ಲೋಕ್ ಅದಾಲತ್‌ನಲ್ಲಿ 38.8 ಲಕ್ಷ ವ್ಯಾಜ್ಯ ಇತ್ಯರ್ಥ
Bengaluru: ಒಬಾಮಾ ಭೇಟಿ ವೇಳೆ ಸ್ಫೋಟ ಸಂಚು: ಡಿ.23ಕ್ಕೆ ಶಿಕ್ಷೆ ಪ್ರಕಟ
Fraud: ಸಿಬಿಐ ಸೋಗಿನಲ್ಲಿ ವೃದ್ಧೆಗೆ 1.24 ಕೋಟಿ ರೂ. ವಂಚನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.