ಹೋಂ ಕ್ವಾರಂಟೈನ್‌ಗೆ ಒಳಗಾದವರ ತಪಾಸಣೆ ಮಾಡಿ

Team Udayavani, Jul 1, 2020, 4:57 PM IST

01-July-21

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used

ರಾಯಚೂರು: ಜಿಲ್ಲೆಯಲ್ಲಿ ಹೋಮ್‌ ಕ್ವಾರಂಟೈನ್‌ಗೆ ಒಳಪಟ್ಟವರ ಆರೋಗ್ಯವನ್ನು ನಿತ್ಯ ತಪಾಸಣೆಗೆ ಒಳಪಡಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಎನ್‌. ಎಸ್‌. ಪ್ರಸನ್ನಕುಮಾರ ಸೂಚಿಸಿದರು.

ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸೋಮವಾರ ಕೋವಿಡ್‌-19 ಕುರಿತ ಸಭೆ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಆಶಾ ಕಾರ್ಯಕರ್ತೆಯರು ಕೋವಿಡ್ ಶಂಕಿತರ ಆರೋಗ್ಯದ ಮೇಲ್ವಿಚಾರಣೆ ನಡೆಸಬೇಕು. ಆರೋಗ್ಯ ಕಾರ್ಯಕರ್ತರು ನಿತ್ಯ ಭೇಟಿ ನೀಡಿ ಆರೋಗ್ಯದ ಬಗ್ಗೆ ಮಾಹಿತಿ ಸಂಗ್ರಹಿಸಬೇಕು. 65 ವರ್ಷ ಮೇಲ್ಪಟ್ಟ ಶಂಕಿತ, ಸೋಂಕಿತರ ಆರೋಗ್ಯದ ಮೇಲೆ ವಿಶೇಷ ಕಾಳಜಿ ವಹಿಸಬೇಕು. ವಿಶೇಷ ಆರೋಗ್ಯ ತಂಡ ಕಟ್ಟಿಕೊಂಡು ಮೇಲಿಂದ ಮೇಲೆ ಆರೋಗ್ಯ ತಪಾಸಣೆ ಮಾಡುವಂತೆ ತಿಳಿಸಿದರು.

ತಜ್ಞ ವೈದ್ಯರು ಆ ತಂಡದಲ್ಲಿರಬೇಕು. ತೀವ್ರ ಉಸಿರಾಟದ ತೊಂದರೆ ಇರುವವರು ಕೋವಿಡ್‌-19ಗೆ ಬಲಿಯಾಗುತ್ತಿದ್ದು, ಹಿರಿಯ ನಾಗರಿಕರ ಆರೋಗ್ಯ ತಪಾಸಣೆ ವರದಿಯನ್ನು ಕಳುಹಿಸಬೇಕು. ಜಿಲ್ಲೆಯಲ್ಲಿರುವ ಕಂಟೈನ್ಮೆಂಟ್‌ ವಲಯಗಳಲ್ಲಿ ಪೊಲೀಸರು ಸೂಕ್ತ ಭದ್ರತೆ ಒದಗಿಸಬೇಕು ಎಂದರು. ಜಿಲ್ಲಾ ಆರೋಗ್ಯ ಮತ್ತು ಕಟುಂಬ ಕಲ್ಯಾಣಾಧಿಕಾರಿ ಡಾ| ರಾಮಕೃಷ್ಣ ಮಾತನಾಡಿ, ಜಿಲ್ಲೆಯಲ್ಲಿ 4100 ಕೋವಿಡ್‌ ಬೆಡ್‌ಗಳನ್ನು ಸಿದ್ಧಪಡಿಸಲಾಗಿದೆ. ಪ್ರತಿ ತಾಲೂಕಿನಲ್ಲಿ 5 ವಸತಿ ನಿಲಯಗಳನ್ನು ಗುರುತಿಸಲಾಗಿದೆ ಎಂದು ತಿಳಿಸಿದರು.

ಡಿಸಿ ಆರ್‌. ವೆಂಕಟೇಶಕುಮಾರ ಮಾತನಾಡಿದರು. ಸಹಕಾರಿ ಇಲಾಖೆಯಿಂದ ಜಿಲ್ಲೆಯ 1030 ರೈತರಿಗೆ ಸಾಲ ನೀಡುವ ಪ್ರಕ್ರಿಯೆ ಬಾಕಿ ಉಳಿದಿದ್ದು, ಕೂಡಲೇ ಸಾಲ ಸೌಲಭ್ಯವನ್ನು ಒದಗಿಸಬೇಕು. ಜಿಲ್ಲೆಯ 2.4 ಲಕ್ಷ ಜನರಿಗೆ ಕಿಸಾನ್‌ ಕ್ರೆಡಿಟ್‌ ಕಾರ್ಡ್‌ ವಿತರಿಸಬೇಕಿದ್ದು, 1,07,550 ರೈತರು ನೋಂದಾಯಿಸಿಕೊಂಡಿದ್ದಾರೆ. ಉಳಿದವರನ್ನು ಈ ಯೋಜನೆಯಡಿ ನೋಂದಾಯಿಸಲು ಕ್ರಮ ಕೈಗೊಳ್ಳುವಂತೆ ಸಹಕಾರ ಸಂಘಗಳ ಉಪನಿಬಂಧಕರಿಗೆ ಕಾರ್ಯದರ್ಶಿ ಸೂಚಿಸಿದರು. ಜಿಪಂ ಸಿಇಒ ಲಕ್ಷ್ಮೀಕಾಂತ್‌ ರೆಡ್ಡಿ, ಎಸ್‌ಪಿ ಡಾ| ಸಿ.ಬಿ.ವೇದಮೂರ್ತಿ, ಎಡಿಸಿ ದುರುಗೇಶ, ಲಿಂಗಸುಗೂರು ಎಸಿ ರಾಜಶೇಖರ ಡಂಬಳ ಸೇರಿ ವಿವಿಧ ಇಲಾಖೆ ಅಧಿಕಾರಿಗಳಿದ್ದರು.

ಉಸ್ತುವಾರಿ ಕಾರ್ಯದರ್ಶಿ ನಿವೃತ್ತಿ-ಬೀಳ್ಕೊಡುಗೆ: ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಎನ್‌.ಎಸ್‌. ಪ್ರಸನ್ನಕುಮಾರ ಸೇವೆಯಿಂದ ವಯೋ ನಿವೃತ್ತಿ ಹೊಂದುತ್ತಿರುವ ಪ್ರಯುಕ್ತ ಜಿಲ್ಲಾಡಳಿತದಿಂದ ಸನ್ಮಾನಿಸಿ ಬೀಳ್ಕೊಡಲಾಯಿತು. ಸನ್ಮಾನ ಸ್ವೀಕರಿಸಿ ಮಾತನಾಡಿದ ಪ್ರಸನ್ನಕುಮಾರ, ಕೋವಿಡ್ ವೈರಸ್‌ ಸಮುದಾಯದ ಮಧ್ಯೆ ಹರಡದಂತೆ ತಡೆಯುವಲ್ಲಿ ಜಿಲ್ಲಾಡಳಿತದ ಶ್ರಮ ಶ್ಲಾಘನೀಯ. ಲಾಕ್‌ಡೌನ್‌ ನಿಯಮಗಳನ್ನು ಜಿಲ್ಲೆಯಲ್ಲಿ ಕಟ್ಟುನಿಟ್ಟಾಗಿ ಪಾಲಿಸಲಾಗಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಟಾಪ್ ನ್ಯೂಸ್

Illegal sand mining: ರಾ. ಹಸುರು ಪ್ರಾಧಿಕಾರದಿಂದ ಸ್ವಯಂಪ್ರೇರಿತ ದೂರು ದಾಖಲು

Illegal sand mining: ರಾ. ಹಸುರು ಪ್ರಾಧಿಕಾರದಿಂದ ಸ್ವಯಂಪ್ರೇರಿತ ದೂರು ದಾಖಲು

1-sindu

Badminton; ಸಯ್ಯದ್‌ ಮೋದಿ ಇಂಟರ್‌ನ್ಯಾಶನಲ್‌: ಸಿಂಧು, ಸೆನ್‌ ಕ್ವಾರ್ಟರ್‌ಫೈನಲಿಗೆ

Udupi: ಕಿಂಡಿ ಅಣೆಕಟ್ಟೆಗೆ ಹಲಗೆ ಹಾಕುವ ಪ್ರಕ್ರಿಯೆ ಆರಂಭ

Udupi: ಕಿಂಡಿ ಅಣೆಕಟ್ಟೆಗೆ ಹಲಗೆ ಹಾಕುವ ಪ್ರಕ್ರಿಯೆ ಆರಂಭ

ರಾಜ್ಯದ ಕರಾವಳಿಯ 73.4 ಕಿ.ಮೀ. ಕಡಲ್ಕೊರೆತದಿಂದ ಹಾನಿ: ಸಚಿವ ಸಿಂಗ್‌

Winter session: ರಾಜ್ಯದ ಕರಾವಳಿಯ 73.4 ಕಿ.ಮೀ. ಕಡಲ್ಕೊರೆತದಿಂದ ಹಾನಿ: ಸಚಿವ ಸಿಂಗ್‌

1-pak

ODI; ಜಿಂಬಾಬ್ವೆ ಎದುರು ಪಾಕ್‌ಗೆ 2-1 ಸರಣಿ

1-wqewqe

Pro Kabaddi:ಯುಪಿ, ತೆಲುಗು ಜಯಭೇರಿ

Udupi: ಪ್ರಧಾನಮಂತ್ರಿ ಬೆಳೆ ವಿಮೆ: ನೋಂದಣಿಗೆ ಅಧಿಸೂಚನೆ

Udupi: ಪ್ರಧಾನಮಂತ್ರಿ ಬೆಳೆ ವಿಮೆ: ನೋಂದಣಿಗೆ ಅಧಿಸೂಚನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8-sirwar

Sirwar: ಹಳೆ ದ್ವೇಷ-ಯುವಕನ ಕೊಲೆ; ಮೂವರ ಬಂಧನ

ರಾಯಚೂರು: ರೈತರ ನಿದ್ದೆಗೆಡಿಸಿದ ಬೆಳೆದು ನಿಂತ “ಬಿಳಿ ಬಂಗಾರ’ ಹತ್ತಿ

3-raichur

Raichur: ರಾತೋ ರಾತ್ರಿ ದೇವಸ್ಥಾನ ತೆರವುಗೊಳಿಸಿದ ಜಿಲ್ಲಾಡಳಿತ ; ಬಿಜೆಪಿಯಿಂದ ಪ್ರತಿಭಟನೆ

1-wewqewq

Raichur; ರಾತೋರಾತ್ರಿ ಸಿಎ ಸೈಟ್ ನಲ್ಲಿದ್ದ ಶಿವ, ಗಣೇಶ ದೇವಸ್ಥಾನ ತೆರವು

Raichur: ಪ್ರಶ್ನೆಪತ್ರಿಕೆ ವಿಳಂಬ; ಪಿಡಿಒ ಪರೀಕ್ಷೆ ಬಹಿಷ್ಕಾರ

Raichur: ಪ್ರಶ್ನೆಪತ್ರಿಕೆ ವಿಳಂಬ; ಪಿಡಿಒ ಪರೀಕ್ಷೆ ಬಹಿಷ್ಕಾರ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

Illegal sand mining: ರಾ. ಹಸುರು ಪ್ರಾಧಿಕಾರದಿಂದ ಸ್ವಯಂಪ್ರೇರಿತ ದೂರು ದಾಖಲು

Illegal sand mining: ರಾ. ಹಸುರು ಪ್ರಾಧಿಕಾರದಿಂದ ಸ್ವಯಂಪ್ರೇರಿತ ದೂರು ದಾಖಲು

1-sindu

Badminton; ಸಯ್ಯದ್‌ ಮೋದಿ ಇಂಟರ್‌ನ್ಯಾಶನಲ್‌: ಸಿಂಧು, ಸೆನ್‌ ಕ್ವಾರ್ಟರ್‌ಫೈನಲಿಗೆ

Udupi: ಕಿಂಡಿ ಅಣೆಕಟ್ಟೆಗೆ ಹಲಗೆ ಹಾಕುವ ಪ್ರಕ್ರಿಯೆ ಆರಂಭ

Udupi: ಕಿಂಡಿ ಅಣೆಕಟ್ಟೆಗೆ ಹಲಗೆ ಹಾಕುವ ಪ್ರಕ್ರಿಯೆ ಆರಂಭ

1-skk

Cricket; ವೇಗಿ ಸಿದ್ದಾರ್ಥ್ ಕೌಲ್‌ ನಿವೃತ್ತಿ

ರಾಜ್ಯದ ಕರಾವಳಿಯ 73.4 ಕಿ.ಮೀ. ಕಡಲ್ಕೊರೆತದಿಂದ ಹಾನಿ: ಸಚಿವ ಸಿಂಗ್‌

Winter session: ರಾಜ್ಯದ ಕರಾವಳಿಯ 73.4 ಕಿ.ಮೀ. ಕಡಲ್ಕೊರೆತದಿಂದ ಹಾನಿ: ಸಚಿವ ಸಿಂಗ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.