ಖಾಯಂ ಉಪನ್ಯಾಸಕರಿಂದ ಅತಿಥಿ ದೇವೋಭವ

ಲಾಕ್‌ಡೌನ್‌ ಜಾರಿ ಅನಂತರ 8 ಅತಿಥಿ ಉಪನ್ಯಾಸಕರ ಆತ್ಮಹತ್ಯೆ ; ಒಂದು ದಿನದ ವೇತನ ದೇಣಿಗೆ

Team Udayavani, Jul 2, 2020, 6:30 AM IST

ಖಾಯಂ ಉಪನ್ಯಾಸಕರಿಂದ ಅತಿಥಿ ದೇವೋಭವ

ಬೆಂಗಳೂರು: ಲಾಕ್‌ ಡೌನ್‌ನಿಂದಾಗಿ ಸಂಕ ಷ್ಟಕ್ಕೆ ಸಿಲುಕಿರುವ ರಾಜ್ಯದ ಪದವಿಪೂರ್ವ ಕಾಲೇಜುಗಳ ಅತಿಥಿ ಉಪ ನ್ಯಾಸಕರ ನೆರವಿಗೆ ಖಾಯಂ ಉಪನ್ಯಾಸ ಕರು ಧಾವಿಸಿದ್ದು, ತಮ್ಮ ಒಂದು ದಿನದ ವೇತನವನ್ನು ನೀಡಲು ನಿರ್ಧರಿಸಿದ್ದಾರೆ. ಅವರ ಈ ಕಾರ್ಯಕ್ಕೆ ಸಾರ್ವತ್ರಿಕ ಪ್ರಶಂಸೆ ವ್ಯಕ್ತವಾಗಿದೆ.

ಲಾಕ್‌ಡೌನ್‌ ಜಾರಿಯಾದ ಮೂರು ತಿಂಗಳಲ್ಲಿ ಶಿವಮೊಗ್ಗ ಜಿಲ್ಲೆಯಲ್ಲಿ ನಾಲ್ವರು, ಮಂಡ್ಯದ ಮಳವಳ್ಳಿ ತಾಲೂಕಿನ ಒಂದೇ ಕಾಲೇಜಿನ ಇಬ್ಬರು ಹಾಗೂ ದೇವದುರ್ಗ ತಾಲೂಕಿನ ಇಬ್ಬರು ಆತ್ಮಹತ್ಯೆಗೆ ಶರಣಾಗಿದ್ದಾರೆ. ಈ ಘಟನೆಗಳಿಂದ ಮನನೊಂದಿರುವ ಖಾಯಂ ಶಿಕ್ಷಕರು ಈ ತೀರ್ಮಾನಕ್ಕೆ ಬಂದಿದ್ದಾರೆ.

ಫೆಬ್ರವರಿಯಿಂದಲೇ ಗೌರವಧನವಿಲ್ಲ
ರಾಜ್ಯದ ಸರಕಾರಿ ಹಾಗೂ ಅನುದಾನಿತ ಪದವಿ ಪೂರ್ವ ಕಾಲೇಜುಗಳಲ್ಲಿ ಸೇವೆ ಸಲ್ಲಿಸುತ್ತಿರುವ ಸುಮಾರು ಮೂರು ಸಾವಿರ ಅತಿಥಿ ಉಪನ್ಯಾಸಕರಿಗೆ ಫೆಬ್ರವರಿ ತಿಂಗಳಿನಿಂದಲೇ ಗೌರವಧನ ನೀಡಲಾಗಿಲ್ಲ.

3 ಕೋ.ರೂ. ಸಂಗ್ರಹ ನಿರೀಕ್ಷೆ
ರಾಜ್ಯದ ಸರಕಾರಿ ಹಾಗೂ ಅನುದಾನಿತ ಪದವಿಪೂರ್ವ ಕಾಲೇಜುಗಳಲ್ಲಿರುವ ಖಾಯಂ ಉಪನ್ಯಾಸಕರ ಒಂದು ದಿನದ ವೇತನ ಸುಮಾರು 3 ಕೋಟಿ ರೂಪಾಯಿ ಆಗಲಿದೆ. ಆದರೆ ಎಲ್ಲರೂ ಕಡ್ಡಾಯವಾಗಿ ನೀಡಲೇ ಬೇಕು ಎಂದು ಹೇಳಿಲ್ಲ. ಸ್ವಇಚ್ಛೆ ಯಿಂದ ನೀಡುವುದರಿಂದ ಇಷ್ಟೇ ಹಣ ಸಂಗ್ರಹವಾಗುತ್ತದೆ ಎಂದು ಹೇಳಲು ಸಾಧ್ಯವಿಲ್ಲ. ಒಟ್ಟಾರೆಯಾಗಿ ಸಂಗ್ರಹವಾಗುವ ಅನುದಾನವನ್ನು ಎಲ್ಲ ಅತಿಥಿ ಉಪನ್ಯಾಸಕರಿಗೂ ಸಮನಾಗಿ ಹಂಚಿಕೆ ಮಾಡಲಾಗುತ್ತದೆ ಎಂದು ಸಂಘದ ಅಧ್ಯಕ್ಷ ಎ.ಎಚ್‌. ನಿಂಗೇಗೌಡ ಅವರು ಮಾಹಿತಿ ನೀಡಿದ್ದಾರೆ.

ಸಮನಾಗಿ ಹಂಚಿಕೆ
ರಾಜ್ಯದಲ್ಲಿ 1,250 ಸರಕಾರಿ ಪದವಿ ಪೂರ್ವ ಕಾಲೇಜು ಹಾಗೂ 739 ಅನುದಾನಿತ ಪದವಿಪೂರ್ವ ಕಾಲೇಜು ಗಳಿದ್ದು, ಸುಮಾರು 17 ಸಾವಿರ ಖಾಯಂ ಉಪ ನ್ಯಾಸಕ ರಿದ್ದಾರೆ. ತಮ್ಮ ಒಂದು ದಿನದ ವೇತನ ವನ್ನು “ಸ್ವ ಇಚ್ಛೆ’ ಯಿಂದ ಎಚ್‌ಆರ್‌ಎಂಎಸ್‌ ವ್ಯವಸ್ಥೆ ಯಲ್ಲೇ ಕಡಿತಗೊಳಿಸಿ, ಪಿಯು ಇಲಾಖೆಯ ನಿರ್ದೇಶಕರ ಮೂಲಕ ರಾಜ್ಯದ ವಿವಿಧ ಸರಕಾರಿ ಹಾಗೂ ಅನು ದಾನಿತ ಕಾಲೇಜುಗಳಲ್ಲಿ ಸೇವೆ ಸಲ್ಲಿಸು ತ್ತಿರುವ ಎಲ್ಲ ಅತಿಥಿ ಉಪನ್ಯಾಸಕ ರಿಗೂ ಸಮನಾಗಿ ಹಂಚಿಕೆ ಮಾಡಲು ಸಂಘವು ನಿರ್ಧರಿಸಿದೆ.

ಸರಕಾರಕ್ಕೆ ಮನವಿ
ಅತಿಥಿ ಉಪನ್ಯಾಸಕರಿಗೆ ಅಗತ್ಯ ಕನಿಷ್ಠ ಸೌಲಭ್ಯವನ್ನು ಒದಗಿಸುವಂತೆ ಸರಕಾರಕ್ಕೆ ಅನೇಕ ಬಾರಿ ಮನವಿ ಮಾಡಿಕೊಂಡಿ ದ್ದೇವೆ. ಆದರೆ ಯಾವುದೇ ಭರವಸೆ ಸಿಕ್ಕಿರಲಿಲ್ಲ. ನಾಲ್ಕೈದು ತಿಂಗಳು ವೇತನ ಇಲ್ಲದೆ ಜೀವನ ಅತಿಕಷ್ಟ. ವರ್ಷಪೂರ್ತಿ ನಮ್ಮೊಂದಿಗೆ ಇರುವ ಅತಿಥಿ ಉಪ ನ್ಯಾಸಕರನ್ನು ಸಂಕಷ್ಟ ಕಾಲದಲ್ಲಿ ಕೈಬಿಡುವುದು ಸರಿ ಯಲ್ಲ ಎಂಬ ಸದಾಶಯ ನಮ್ಮದು. ಒಂದು ದಿನದ ವೇತನವನ್ನು ಇಲಾಖೆಯ ನಿರ್ದೇಶಕರ ಮುಖೇನ ಜಿಲ್ಲಾ ಉಪನಿರ್ದೇಶಕರಿಗೆ ರವಾನೆ ಮಾಡಿ, ಅಲ್ಲಿಂದ ನೇರವಾಗಿ ಅತಿಥಿ ಉಪನ್ಯಾಸಕರ ಬ್ಯಾಂಕ್‌ ಖಾತೆಗೆ ಪಾವತಿಸಲಾಗುವುದು.
– ಎ.ಎಚ್‌. ನಿಂಗೇಗೌಡ
ಪ.ಪೂ. ಕಾಲೇಜು ಉಪನ್ಯಾಸಕರ ಸಂಘದ ಅಧ್ಯಕ್ಷ

ಟಾಪ್ ನ್ಯೂಸ್

1—amanatulla-khan

Waqf; ಅಮಾನತುಲ್ಲಾ ಖಾನ್ ಗೆ ಜಾಮೀನು: ಮೋದಿಯ ಸುಳ್ಳು ಪ್ರಕರಣ ಬಹಿರಂಗ ಎಂದ ಆಪ್

marriage 2

Davangere: ಮದುವೆಯಾಗುವುದಾಗಿ ಯುವತಿಯರಿಗೆ 62 ಲಕ್ಷ ರೂ.ಗೂ ಹೆಚ್ಚು ವಂಚಿಸಿದವನ ಬಂಧನ

Vimana 2

Kochi airport; ಶಬರಿಮಲೆ ಭಕ್ತರಿಗೆ ಅನುಕೂಲವಾಗುವಂತೆ ವಿಶೇಷ ವ್ಯವಸ್ಥೆಗಳು

Mika Singh: ಮಿಕಾ ಹಾಡಿಗೆ ಫಿದಾ..‌ಪಾಕ್‌ ಅಭಿಮಾನಿಯಿಂದ 3 ಕೋಟಿ ರೂ. ವಾಚ್‌, ಚಿನ್ನ ಗಿಫ್ಟ್

Mika Singh: ಮಿಕಾ ಹಾಡಿಗೆ ಫಿದಾ..‌ಪಾಕ್‌ ಅಭಿಮಾನಿಯಿಂದ 3 ಕೋಟಿ ರೂ. ವಾಚ್‌, ಚಿನ್ನ ಗಿಫ್ಟ್

1-kanna

Maharashtra Election; ಫಡ್ನವಿಸ್ ಪತ್ನಿಯ ವಿರುದ್ಧ ಕನ್ಹಯ್ಯಾ ಕುಮಾರ್ ಹೇಳಿಕೆ

1-raga

Modiji ಸಂವಿಧಾನವನ್ನು ಓದಲೇ ಇಲ್ಲ, ಹಾಗಾಗಿ…: ರಾಹುಲ್ ಗಾಂಧಿ

ಎಸ್‌ಡಿಎ ರುದ್ರಣ್ಣ ಕೇಸ್:‌ ಮೂವರು ಆರೋಪಿಗಳಿಗೆ ನಿರೀಕ್ಷಣಾ ಜಾಮೀನು

Belagavi: ಎಸ್‌ಡಿಎ ರುದ್ರಣ್ಣ ಕೇಸ್:‌ ಮೂವರು ಆರೋಪಿಗಳಿಗೆ ನಿರೀಕ್ಷಣಾ ಜಾಮೀನು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

marriage 2

Davangere: ಮದುವೆಯಾಗುವುದಾಗಿ ಯುವತಿಯರಿಗೆ 62 ಲಕ್ಷ ರೂ.ಗೂ ಹೆಚ್ಚು ವಂಚಿಸಿದವನ ಬಂಧನ

Yogeshwar

C.P.Yogeshwara; ಜಮೀರ್ ಹೇಳಿಕೆ ಪರಿಣಾಮ…: ಸೋಲಿನ ಆತಂಕ ಹೊರ ಹಾಕಿದ ಸೈನಿಕ?!

ಯಾರು, ಯಾರನ್ನು, ಯಾವಾಗ ಖರೀದಿಸಲು ಪ್ರಯತ್ನಿಸಿದ್ದಾರೆ?: ಸಿಎಂಗೆ ಸಿ.ಟಿ.ರವಿ ಪ್ರಶ್ನೆ

CTRavi; ಯಾರು,ಯಾರನ್ನು,ಯಾವಾಗ ಖರೀದಿಸಲು ಪ್ರಯತ್ನಿಸಿದ್ದಾರೆ?: ಸಿಎಂಗೆ ಸಿ.ಟಿ.ರವಿ ಪ್ರಶ್ನೆ

Belagavi: ಸಿಎಂ ಮುಟ್ಟೋಕೆ ಆಗುತ್ತಾ…: ಸಿದ್ದರಾಮಯ್ಯ ಹೇಳಿಕೆಗೆ ವ್ಯಂಗ್ಯವಾಡಿದ ಸೋಮಣ್ಣ

Belagavi: ಸಿಎಂ ಮುಟ್ಟೋಕೆ ಆಗುತ್ತಾ…: ಸಿದ್ದರಾಮಯ್ಯ ಹೇಳಿಕೆಗೆ ವ್ಯಂಗ್ಯವಾಡಿದ ಸೋಮಣ್ಣ

Maharashtra Election; BJP has nothing but 370: Mallikarjuna Kharge

Maharashtra Election; ಬಿಜೆಪಿ ಬಳಿ 370 ಬಿಟ್ಟರೆ ಏನೂ ಇಲ್ಲ: ಮಲ್ಲಿಕಾರ್ಜುನ ಖರ್ಗೆ

MUST WATCH

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

udayavani youtube

ನನ್ನ ಎದುರು ನೀನು ಬಚ್ಚ ! ಏಕವಚದಲ್ಲಿ ಕಿತ್ತಾಡಿಕೊಂಡ ಲಾಯರ್ ಜಗದೀಶ್ & ಕುಡುಪಲಿ ನಾಗರಾಜ್

ಹೊಸ ಸೇರ್ಪಡೆ

POLICE-5

Malpe: ಜುಗಾರಿ ಅಡ್ಡೆಗೆ ದಾಳಿ, ವಶಕ್ಕೆ

POlice

Malpe: ಜೂಜಾಟ; 12 ಮಂದಿ ಅಂದರ್‌; ಪ್ರಕರಣ ದಾಖಲು

1—amanatulla-khan

Waqf; ಅಮಾನತುಲ್ಲಾ ಖಾನ್ ಗೆ ಜಾಮೀನು: ಮೋದಿಯ ಸುಳ್ಳು ಪ್ರಕರಣ ಬಹಿರಂಗ ಎಂದ ಆಪ್

marriage 2

Davangere: ಮದುವೆಯಾಗುವುದಾಗಿ ಯುವತಿಯರಿಗೆ 62 ಲಕ್ಷ ರೂ.ಗೂ ಹೆಚ್ಚು ವಂಚಿಸಿದವನ ಬಂಧನ

Vimana 2

Kochi airport; ಶಬರಿಮಲೆ ಭಕ್ತರಿಗೆ ಅನುಕೂಲವಾಗುವಂತೆ ವಿಶೇಷ ವ್ಯವಸ್ಥೆಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.