ಮಾಸ್ಕ್ ಧರಿಸದವರಿಗೆ ದಂಡದ ಬಿಸಿ
Team Udayavani, Jul 2, 2020, 5:58 AM IST
ಉಡುಪಿ: ಕೋವಿಡ್-19 ಸೋಂಕು ತಡೆಗೆ, ಸಾರ್ವಜನಿಕ ಸ್ಥಳಗಳಲ್ಲಿ ನಿಯಮ ಪಾಲನೆಗೆ ಸಂಬಂಧಿಸಿ ಮಾಸ್ಕ್ ಧರಿಸುವಂತೆ, ಸಾಮಾಜಿಕ ಅಂತರ ಕಾಪಾಡು ವಂತೆ ಅಧಿಕಾರಿ ಗಳು, ಕೋವಿಡ್-19 ವಾರಿಯರ್ಸ್ ತಂಡ, ಆರೋಗ್ಯ ಇಲಾಖೆ, ಪೊಲೀಸರು ಜಾಗೃತಿ ಮೂಡಿಸಿದರೂ ನಿಯಮ ಪಾಲಿಸುವಲ್ಲಿ ಜನರು ಇನ್ನೂ ನಿರ್ಲಕ್ಷ್ಯ ತೋರುತ್ತಲೇ ಇದ್ದಾರೆ.
ನಗರದಲ್ಲಿ ಮಾಸ್ಕ್ ಸಹಿತ ಸಾಮಾಜಿಕ ಅಂತರ ನಿಯಮ ಉಲ್ಲಂಘಿಸಿರುವುದಕ್ಕೆ ಸಂಬಂಧಿಸಿ ನಗರಸಭೆ ಅಧಿಕಾರಿಗಳು ಮುಖ್ಯ ಪೇಟೆಯಲ್ಲಿ ಬುಧವಾರ ದಾಳಿ ನಡೆಸಿದರು. ನಿಟ್ಟೂರು, ನಗರ ಬಸ್ ಸ್ಟಾಂಡ್ ಮುಂತಾದ ಕಡೆ ಬೆಳಗ್ಗೆ ವಲಸೆ ಕಾರ್ಮಿಕರು ಮಾಸ್ಕ್ ಧರಿಸದೆ ಕೆಲಸಕ್ಕೆ ಹೊರಟಿದ್ದರು. ಅವರನ್ನು ತಡೆದ ನಗರಸಭೆ ಅಧಿಕಾರಿಗಳು ಕಾರ್ಮಿಕರನ್ನು ವಾಪಸ್ ಮನೆಗಳಿಗೆ ಕಳುಹಿಸಿ, ಮಾಸ್ಕ್ ಧರಿಸಿಯೇ ಮನೆಯಿಂದ ಹೊರ ಬರುವಂತೆ ಸೂಚಿಸಿದರು. ನಗರದಲ್ಲಿ ಬುಧವಾರ ಮಾಸ್ಕ್ ಧರಿಸದ 4 ಮಂದಿಯಿಂದ 400 ರೂ. ದಂಡ ಸಂಗ್ರಹಿಸಲಾಗಿದೆ.
ಕುಂದಾಪುರ
ಕುಂದಾಪುರ: ಪುರಸಭೆ ವ್ಯಾಪ್ತಿಯಲ್ಲಿ ಜೂ.30ರಂದು 5 ಕೇಸು, 500 ರೂ. ದಂಡ, ಜು. 1ರಂದು 8 ಕೇಸ್, 800 ರೂ. ದಂಡ ವಿಧಿಸಲಾಗಿದೆ.
ಕಾರ್ಕಳ
ಕಾರ್ಕಳ ನಗರ ಪೊಲೀಸ್ ಠಾಣೆ ಪೊಲೀಸರು ಬುಧವಾರ ಕೂಡ ಜಾಗೃತಿ ನಡೆಸಿದರು. ಚೆಕ್‌ಪೋಸ್ಟ್‌ಗಳನ್ನು ತೆರೆದು ಅರಿವು ಮೂಡಿಸಿದರು. ಆನೆಕೆರೆ, ಮಾರುಕಟ್ಟೆ, ಅನಂತಶಯನ ಮೊದಲಾದ ಕಡೆಗಳಲ್ಲಿ ಪೊಲೀಸರು ಮಾಸ್ಕ್ ಧರಿಸುವಂತೆ ತಿಳಿವಳಿಕೆ ನೀಡಿದರು. ಕಾರ್ಕಳ ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಮಾಸ್ಕ್ ಧರಿಸದ ಇಬ್ಬರಿಗೆ ಪೊಲೀಸರು ದಂಡ ವಿಧಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Naxal Encounter Case: ಜಯಂತ್ ಗೌಡ ವಿಚಾರಣೆ, ಠಾಣೆಗೆ ಮುತ್ತಿಗೆ ಹಾಕಿದ ಗ್ರಾಮಸ್ಥರು
ಅಂಬಾಗಿಲು: ಚಾಲಕನ ನಿಯಂತ್ರಣ ತಪ್ಪಿ ಸಿಮೆಂಟ್ ರೆಡಿಮಿಕ್ಸ್ ವಾಹನ ಪಲ್ಟಿ… ತಪ್ಪಿದ ಅವಘಡ
Udupi: ಸಹಕಾರ ಕ್ಷೇತ್ರ ಪಠ್ಯವಾಗಲಿ: ಡಾ| ಎಂ.ಎನ್.ಆರ್.
Naxal ಎನ್‌ಕೌಂಟರ್ ತನಿಖೆ ಆರಂಭ; ಉಳಿದವರು ಯಾವ ಕಡೆಗೆ ಪರಾರಿ?
Hebri: ಎನ್‌ಕೌಂಟರ್ ತನಿಖೆ ನಡೆಸುವ ಹೆಬ್ರಿ ಪೊಲೀಸ್ ಠಾಣೆ ಇಲ್ಲಗಳ ಆಗರ!
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.