ಚಾಮರಾಜನಗರ: 22 ಮಂದಿಗೆ ಸೋಂಕು
Team Udayavani, Jul 2, 2020, 5:07 AM IST
ಚಾಮರಾಜನಗರ: ಜಿಲ್ಲೆಯಲ್ಲಿ ಬುಧವಾರ 22 ಜನರಿಗೆ ಸೋಂಕು ದೃಢಪಟ್ಟಿದೆ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯವರ ವಾಹನ ಚಾಲಕ ಸೇರಿದಂತೆ, ನಗರದಲ್ಲಿ 4, ತಾಲೂಕಿನಲ್ಲಿ 2 ಗುಂಡ್ಲುಪೇಟೆಯಲ್ಲಿ 16 ಪ್ರಕರಣಗಳು ದೃಢಪಟ್ಟಿವೆ. ಕೋವಿಡ್ ಲ್ಯಾಬ್ ಸೀಲ್ಡೌನ್ ಆಗಿದ್ದ ಕಾರಣ ಕಳೆದ 3 ದಿನಗಳಿಂದ ಫಲಿತಾಂಶ ಲಭ್ಯವಾಗಿರಲಿಲ್ಲ.
ಬೆಂಗಳೂರಿಗೆ ಕಳುಹಿಸಲಾಗಿದ್ದ 904 ಮಾದರಿ ಫಲಿತಾಂಶ ಬುಧವಾರ ಬಂದಿದ್ದು, ಇದರಲ್ಲಿ 22 ಮಂದಿಗೆ ಸೋಂಕು ದೃಢಪಟ್ಟಿದೆ. ಜಿಲ್ಲೆಯಲ್ಲಿ ಒಟ್ಟು 54 ಮಂದಿಗೆ ಸೋಂಕು ತಗುಲಿದ್ದು, ಓರ್ವ ಗುಣಮುಖನಾಗಿದ್ದಾನೆ. 53 ಸಕ್ರಿಯ ಪ್ರಕರಣಗಳಿವೆ. ಗುಂಡ್ಲುಪೇಟೆಯಲ್ಲಿ ಪತ್ತೆಯಾಗಿರುವ 16 ಪ್ರಕರಣಗಳಲ್ಲಿ ಬಹುತೇಕ ಮಹದೇವ ಪ್ರಸಾದ್ ನಗರದವು. 3 ಪ್ರಕರಣಗಳು ಗುಂಡ್ಲುಪೇಟೆ ತಾಲೂಕಿನ ಬರಗಿ ಗ್ರಾಮದವರದು. ಕನಕದಾಸನಗರ, ನಾಯಕರ ಬೀದಿ, ಕೆಎಸ್ಎನ್ ಲೇಔಟ್ನಲ್ಲೂ ಪ್ರಕರಣಗಳು ಕಾಣಿಸಿಕೊಂಡಿವೆ.
ಚಾಲಕನಿಗೆ ಸೋಂಕು: ಎಸ್ಪಿ ವಾಹನ ಚಾಲಕನಿಗೂ ಸೋಂಕು ದೃಢಪಟ್ಟಿದೆ. ನಗರದ ಸೆಸ್ಕ್ ಕಚೇರಿ ಲೆಕ್ಕಾಧಿಕಾರಿ ಹಾಗೂ ಕ್ಯಾಶಿಯರ್ಗೆ, 45 ವರ್ಷದ ಮಹಿಳೆಗೆ, ತಾಲೂಕಿನ ನಾಗವಳ್ಳಿಯ 34 ವರ್ಷದ ಮಹಿಳೆ ಹಾಗೂ 57 ವರ್ಷದ ವ್ಯಕ್ತಿಗೆ ಸೋಂಕು ತಗುಲಿದೆ. ಮುಚ್ಚಲಾಗಿದ್ದ ನಗರದ ಕೋವಿಡ್ ಪ್ರಯೋಗಾಲಯ ಬುಧವಾರದಿಂದ ಮತ್ತೆ ಕಾರ್ಯಾರಂಭ ಮಾಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gundlupete: ವಿದ್ಯುತ್ ಕಂಬಕ್ಕೆ ಗುದ್ದಿದ್ದ ಕಾರು: ಸ್ಥಳದಲ್ಲೇ ಇಬ್ಬರು ಸಾವು
Bandipur: ಸಫಾರಿ ವೇಳೆ ನಾಲ್ಕು ಮರಿ ಜೊತೆ ತಾಯಿ ಹುಲಿ ದರ್ಶನ
Cabinet Meeting: ಮೊದಲ ಬಾರಿ ಮಲೆ ಮಹದೇಶ್ವರ ಬೆಟ್ಟದಲ್ಲಿ ಸಚಿವ ಸಂಪುಟ ಸಭೆ
Kollegala: ದ್ವಿಚಕ್ರ ವಾಹನದಲ್ಲಿ ಗಾಂಜಾ ಸಾಗಾಟ… ಸೊತ್ತು ಸಮೇತ ಆರೋಪಿ ಬಂಧನ
New Year: ಡಿ.31, ಜ. 1ರಂದು ಬಂಡೀಪುರದಲ್ಲಿ ಪ್ರವಾಸಿಗರ ವಾಸ್ತವ್ಯ ನಿರ್ಬಂಧ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.