![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
Team Udayavani, Jul 2, 2020, 5:30 AM IST
ಬೆಂಗಳೂರು: ರಾಜ್ಯ ವಿಶೇಷ ಮೀಸಲು ಪೇದೆಗಳ ಪಡೆ ಮತ್ತು ಬ್ಯಾಂಡ್ಸ್ ಮೆನ್ ಹುದ್ದೆಗಳ ನೇಮಕಾತಿಯಲ್ಲಿ ತೃತೀಯ ಲಿಂಗಿಗಳಿಗೆ ಏಕೆ ಅವಕಾಶ ನೀಡಿಲ್ಲ ಎಂಬ ಬಗ್ಗೆ ವಿವರಣೆ ನೀಡುವಂತೆ ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶನ ನೀಡಿದೆ. ಈ ಕುರಿತು ಲೈಂಗಿಕ ಅಲ್ಪಸಂಖ್ಯಾತರು, ಎಚ್‌ಐವಿ ಪೀಡಿತರ ಕಲ್ಯಾಣಕ್ಕಾಗಿ ಶ್ರಮಿಸುತ್ತಿರುವ “ಸಂಗಮ’ ಎನ್ನುವ ಸ್ವಯಂ ಸೇವಾ ಸಂಸ್ಥೆ ಸಲ್ಲಿಸಿದ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾ. ಎ.ಎಸ್. ಓಕ್ ಹಾಗೂ ನ್ಯಾ. ಆರ್. ನಟರಾಜ್ ಅವರಿದ್ದ ವಿಭಾಗೀಯ ನ್ಯಾಯ ಪೀಠ ಈ ನಿರ್ದೇಶನ ನೀಡಿದೆ.
ವಿಚಾರಣೆ ವೇಳೆ ಸುಪ್ರೀಂಕೋರ್ಟ್ 2014ರಲ್ಲಿ ಆದೇಶ ಪ್ರಸ್ತಾಪಿಸಿದ ಪೀಠ, ರಾಜ್ಯ ವಿಶೇಷ ಮೀಸಲು ಪೇದೆಗಳ ಪಡೆ ಮತ್ತು ಬ್ಯಾಂಡ್ಸ್ ಮೆನ್ ಹುದ್ದೆಗಳ ನೇಮಕಾತಿಯಲ್ಲಿ ಏಕೆ ಆದೇಶ ಪಾಲಿಸಿಲ್ಲ ಎಂಬ ಬಗ್ಗೆ ವಿವರಣೆ ನೀಡಬೇಕು ಎಂದು ಸರ್ಕಾರಕ್ಕೆ ಸೂಚಿಸಿತು. ಅಲ್ಲದೆ, ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಹಾಗೂ ಪೊಲೀಸ್ ಮಹಾ ನಿರ್ದೇಶಕರಿಗೆ ನೋಟಿಸ್ ಜಾರಿ ಮಾಡಿ, ವಿಚಾರಣೆಯನ್ನು ಜುಲೈ 21ಕ್ಕೆ ಮುಂದೂಡಿತು.
ಸಮಿತಿ ಪುನರ್ ರಚನೆಗೆ ನಿರ್ದೇಶನ
ಬೆಂಗಳೂರು: ಪಕ್ಷಿ ಸಂರಕ್ಷಿತಾ ವಲಯವಾಗಿರುವ ಯಲಹಂಕದ ಪುಟ್ಟೇನಹಳ್ಳಿ ಕೆರೆಯ ಸಂರಕ್ಷಣಾ ಸಮಿತಿಯನ್ನು ಮೂರು ವಾರಗಳಲ್ಲಿ ಪುನರ್ ರಚಿಸುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶಿಸಿದೆ. ಯಲಹಂಕದ ಪುಟ್ಟೇನಹಳ್ಳಿ ಕೆರೆಯ ನಿರ್ವಹಣೆಯನ್ನು ಬಿಬಿಎಂಪಿಗೆ ವಹಿಸಿ ನಗರಾಭಿವೃದ್ಧಿ ಇಲಾಖೆ ಹೊರಡಿಸಿದ್ದ ಆದೇಶ ರದ್ದುಪಡಿಸುವಂತೆ ಕೋರಿ ಯಲಹಂಕ ಪುಟ್ಟೇನಹಳ್ಳಿ ಕೆರೆ-ಪಕ್ಷಿ ಸಂರಕ್ಷಣಾ ಟ್ರಸ್ಟ್ ಮತ್ತು ಸ್ಥಳೀಯ ನಿವಾಸಿಗಳು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾ. ಎ.ಸ್. ಓಕ್ ಹಾಗೂ ನ್ಯಾ. ಆರ್. ನಟರಾಜ್ ಅವರಿದ್ದ ವಿಭಾಗೀಯ ನ್ಯಾಯಪೀಠ ಈ ಸೂಚನೆ ನೀಡಿತು.
ಅರ್ಜಿದಾರರ ಪರ ವಕೀಲರಾದ ಅಶೋಕ್ ಕಲ್ಯಾಣ ಶೆಟ್ಟಿ ವಾದಿಸಿ, ಯಲಹಂಕದ ಪುಟ್ಟೇನಹಳ್ಳಿ ಕೆರೆಯ ಸಂರಕ್ಷಣಾ ಸಮಿತಿ ಈವರೆಗೆ ಒಂದೇ ಸಭೆ ನಡೆಸಿದ್ದೂ, ಅದಕ್ಕೆ ಮುಖ್ಯಸ್ಥರೇ ಬಂದಿಲ್ಲ ಎಂದು ಪೀಠಕ್ಕೆ ತಿಳಿಸಿದರು. ಅದನ್ನು ಪರಿಗಣಿಸಿದ ನ್ಯಾಯಪೀಠ, ನಿರ್ವಹಣೆ ಸಮಿತಿಯಲ್ಲಿ ಅರಣ್ಯ ಇಲಾಖೆ ಒಬ್ಬ ಪ್ರತಿನಿಧಿ ಇದ್ದು ಮೂರು ವಾರದಲ್ಲಿ ಮರುರಚಿಸಲು ಸರ್ಕಾರಕ್ಕೆ ನಿರ್ದೇಶಿಸಿತು.
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
You seem to have an Ad Blocker on.
To continue reading, please turn it off or whitelist Udayavani.