26 ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಕ್ವಾರಂಟೈನ್: ಬಿಇಒ ಪರಿಶೀಲನೆ
Team Udayavani, Jul 2, 2020, 6:45 AM IST
ಕುಣಿಗಲ್: ಕೋವಿಡ್ 19 ಸೋಂಕಿತ ವಿದ್ಯಾರ್ಥಿಯ ಸಂಪರ್ಕದಲ್ಲಿದ್ದ 26 ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳು ಹಾಗೂ ನಾಲ್ಕು ಮಂದಿ ಶಿಕ್ಷಕರನ್ನು ಹೋಂ ಕ್ವಾರಂಟೈನ್ ಮಾಡಲಾಗಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ತಿಮ್ಮರಾಜು ತಿಳಿಸಿದರು. ಉದಯವಾಣಿ ಜತೆ ಮಾತನಾಡಿದರು.
ತಾಲೂಕಿನ ಅಮೃತೂರು ಹೋಬಳಿಯ ದೊಡ್ಡಕಲ್ಲಹಳ್ಳಿಯ 17 ವರ್ಷದ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗೆ ಮಂಗಳವಾರ ಕೋವಿಡ್ 19 ಸೋಂಕು ಕಾಣಿಸಿಕೊಂಡಿತ್ತು. ಆತನ ಸಂಪರ್ಕದಲ್ಲಿದ್ದ 26 ವಿದ್ಯಾರ್ಥಿ ಗಳನ್ನು ಹೋಂ ಕ್ವಾರಂಟೈನ್ ಮಾಡಲು ಉದ್ದೇಶಿಸಲಾಗಿದೆ. ಆದರೆ ಅವರು ಪರೀಕ್ಷೆಯಿಂದ ವಂಚಿತರಾಗಬಾರದೆಂಬ ದಿಸೆಯಲ್ಲಿ ಅವರಿಗೆ ಪ್ರತ್ಯೇಕ ಕೊಠಡಿಯಲ್ಲಿ ಪರೀಕ್ಷೆ ಬರೆಯಲು ವ್ಯವಸ್ಥೆ ಮಾಡಲಾಗಿದೆ ಎಂದರು.
ಪರೀಕ್ಷೆಗೆ ಬರುವಾಗ ಹಾಗೂ ಪರೀಕ್ಷೆ ಮುಗಿಸಿಕೊಂಡು ಮನೆಗೆ ಹೋಗುವ ವೇಳೆ ಥರ್ಮಲ್ ಸ್ಕ್ಯಾನಿಂಗ್ ಮಾಡಲಾಗುವುದು. ಎನ್ 95 ಮಾಸ್ಕ್ ಹಾಗೂ ಸ್ಯಾನಿಟೈಸರ್ ವ್ಯವಸ್ಥೆ ಮಾಡಲಾಗಿದೆ. ಹುಲಿಯೂರುದುರ್ಗ ಹಾಗೂ ಇತರೆ ಕಡೆಗಳಲ್ಲಿ ಪರೀಕ್ಷೆಗೆ ಕರ್ತವ್ಯ ನಿರ್ವಹಿಸಿದ ನಾಲ್ವರು ಶಿಕ್ಷಕರನ್ನು ಮುನ್ನೆಚ್ಚರಿಕೆ ಕ್ರಮವಾಗಿ ತಾತ್ಕಾಲಿಕವಾಗಿ ಸೇವೆಯಿಂದ ಬಿಡುಗಡೆಗೊಳಿಸಿ ಹೋಂ ಕ್ವಾರಂಟೈನ್ಗೆ ಕಳಿಸಲಾಗುತ್ತಿದೆ ಎಂದು ತಿಳಿಸಿದ್ದಾರೆ.
ಈ ಸಂಬಂಧ ತಹಶೀಲ್ದಾರ್ ವಿ.ಆರ್.ವಿಶ್ವನಾಥ್ ಪರೀಕ್ಷಾ ಕೇಂದ್ರಕ್ಕೆ ಭೇಟಿನೀಡಿ ವಿದ್ಯಾರ್ಥಿಗಳಿಗೆ ಧೈರ್ಯ ತುಂಬಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Drone Prathap: ನೀರಿಗೆ ಸ್ಫೋಟಕ ಎಸೆದ ಪ್ರಕರಣ; ಪ್ರತಾಪ್ಗೆ 10 ದಿನ ನ್ಯಾಯಾಂಗ ಬಂಧನ
Huliyar; ಕೆಮ್ಮಿನ ಔಷಧವೆಂದು ಭಾವಿಸಿ ಕೀಟನಾಶಕ ಸೇವಿಸಿದ ರೈತ ಸಾ*ವು
ಕೃಷಿ ಹೊಂಡದಲ್ಲಿ ಅದೇನೋ ಮಾಡಲು ಹೋಗಿ ಅರೆಸ್ಟ್ ಅದ ಬಿಗ್ ಬಾಸ್ ಖ್ಯಾತಿಯ ಡ್ರೋನ್ ಪ್ರತಾಪ್
Pavagada: ಟ್ರ್ಯಾಕ್ಟರ್ ಗೆ ಕ್ರೇನ್ ಡಿಕ್ಕಿಯಾಗಿ ಓರ್ವ ಸ್ಥಳದಲ್ಲೇ ಸಾವು
Pavagada: ರಸ್ತೆ ಅಪಘಾತದಲ್ಲಿ ಮಂಡ್ಯ ಮೂಲದ ಬೊಲೆರೋ ಚಾಲಕ ಸ್ಥಳದಲ್ಲೇ ಸಾವು
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.