ವೈರಸ್ ಸೋಂಕಿತರು ಚಿಕಿತ್ಸೆಯಿಲ್ಲದೆ ನರಳುತ್ತಿದ್ದಾರೆ, ಸಚಿವರಲ್ಲಿ ಸಮನ್ವಯವಿಲ್ಲ: HDK ಕಿಡಿ
Team Udayavani, Jul 2, 2020, 10:04 AM IST
ಬೆಂಗಳೂರು: ಕೋವಿಡ್-19 ಸೋಂಕು ಪೀಡಿತರು ಬೆಡ್ ಗಳಿಲ್ಲದೆ, ಚಿಕಿತ್ಸೆ ಇಲ್ಲದೆ ಮನೆಯಲ್ಲೇ ನರಳಿ ಸಾಯುತ್ತಿದ್ದಾರೆ. ಆರಂಭಿಕ ಹಂತದಲ್ಲೇ ವೈರಸ್ ನಿಯಂತ್ರಣದಲ್ಲಿ ಸರ್ಕಾರ ಸಂಪೂರ್ಣ ವಿಫಲವಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್. ಡಿ ಕುಮಾರಸ್ವಾಮಿ ಕಿಡಿಕಾರಿದ್ದಾರೆ.
ಸರಣಿ ಟ್ವೀಟ್ ಮೂಲಕ ಸರ್ಕಾರದ ಕ್ರಮಗಳ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದ ಅವರು, ಕಳೆದ ಮೂರು ತಿಂಗಳಿಂದ ಮುಖ್ಯಮಂತ್ರಿ ಸೇರಿದಂತೆ ಸಚಿವರುಗಳು ಮಾತಿನ ಮಂಟಪ ಕಟ್ಟುವುದರಲ್ಲಿ ಕಾಲ ಕಳೆದರು. ಸರ್ಕಾರ ಈಗ ಇಂಗು ತಿಂದ ಮಂಗನಂತಾಗಿದ್ದು, ಸೋಂಕಿತರ ಸಂಖ್ಯೆಯ ಗಣನೀಯ ಏರಿಕೆಯನ್ನು ತಡೆಯಲು ಪೇಚಾಡುತ್ತಿದೆ.
ಸರ್ಕಾರ ಇನ್ನಾದರೂ ಸಮರೋಪಾದಿಯಲ್ಲಿ ಕಾರ್ಯಪ್ರವೃತ್ತವಾಗಲಿ. ಕೋವಿಡ್ ಸಮರ್ಪಕ ನಿರ್ವಹಣೆಗೆ ನಾನು ಕೊಟ್ಟ ಹತ್ತಾರು ಸಲಹೆಗಳನ್ನು ಲಘುವಾಗಿ ಪರಿಗಣಿಸಿದ ರಾಜ್ಯ ಸರ್ಕಾರ ಇನ್ನಾದರೂ ಎಚ್ಚೆತ್ತುಕೊಳ್ಳಲಿ. ನೆರೆಯ ಕೇರಳ ಸರ್ಕಾರ ವೈರಸ್ ತಡೆಗೆ ಕೈಗೊಂಡ ಕ್ರಮಗಳ ‘ಸಿದ್ದ’ ಮಾದರಿ ಕಣ್ಣೆದುರಿಗಿದೆ. ಆದರೆ, ರಾಜ್ಯದ ಸಚಿವರಲ್ಲಿ ಸಮನ್ವಯವಿಲ್ಲ, ಒಬ್ಬೊಬ್ಬರದು ಒಂದೊಂದು ನಿಲುವು. ಇವರ ತಿಕ್ಕಾಟದಲ್ಲಿ ರಾಜ್ಯದ ಜನತೆ ಹೈರಾಣಾಗಿದ್ದಾರೆ ಎಂದು ತಿಳಿಸಿದರು.
ಕೋವಿಡ್ ಸೋಂಕು ಶರವೇಗದಲ್ಲಿ ಎಲ್ಲೆಡೆ ವ್ಯಾಪಿಸುತ್ತಿರುವ ಪ್ರಸಕ್ತ ಸನ್ನಿವೇಶದಲ್ಲಿ ರಾಜ್ಯದಾದ್ಯಂತ ಸೋಂಕಿತರು ಚಿಕಿತ್ಸೆಯಿಲ್ಲದೆ ಸಾಯುತ್ತಿರುವ ಘಟನೆಗಳು ಕರುಳು ಹಿಂಡುತ್ತಿವೆ. ಸರ್ಕಾರ ಇನ್ನೂ ಮೈಮರೆತರೆ ಸೋಂಕಿತರು ಬೀದಿ ಬೀದಿಯಲ್ಲಿ ಸಾಯುವ ಸ್ಥಿತಿ ನಿರ್ಮಾಣವಾಗುತ್ತದೆ.
ಸರ್ಕಾರ ಕೇವಲ ಸರ್ವಪಕ್ಷಗಳ ಸಭೆ ಕರೆದರೆ ಸಾಲದು. ಆ ಸಭೆಯಲ್ಲಿ ನೀಡುವ ಸಲಹೆಗಳನ್ನು, ತೆಗೆದುಕೊಂಡ ನಿರ್ಣಯಗಳನ್ನು ಕಾರ್ಯರೂಪಕ್ಕೆ ತರಬೇಕು. ಕಳೆದ 3 ತಿಂಗಳಿನಿಂದ ನಾವು ನೀಡಿರುವ ಒಂದು ಸಲಹೆಯನ್ನೂ ಕಾರ್ಯರೂಪಕ್ಕೆ ತಂದಿಲ್ಲ. ಸರ್ಕಾರದ ಅವ್ಯವಸ್ಥೆಗೆ ಬಡ, ಮಧ್ಯಮ ವರ್ಗದ ಜನರು ಈಗ ಜೀವ ತೆರಬೇಕಾಗಿದೆ ಎಂದು ಇದೇ ವೇಳೆ ಅಭಿಪ್ರಾಯಪಟ್ಟಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Financial Status: 42,000 ಕೋಟಿ ರೂ. ಸಾಲದ ಸುಳಿಯಲ್ಲಿ ಎಸ್ಕಾಂಗಳು!
Derogatary Term: ಸಿ.ಟಿ.ರವಿ ಪ್ರಕರಣಗಳು ಸಿಐಡಿ ತನಿಖೆಗೆ
A.B.Vajapayee Birth Century: ಸರಳತೆಯ ಸಾಕಾರಮೂರ್ತಿ ನಮ್ಮ ವಾಜಪೇಯಿ
ಮೇಲ್ಮನೆಗೆ ನಾನೇ ಫೈನಲ್, ನನ್ನ ಹಕ್ಕುಚ್ಯುತಿ ಬಗ್ಗೆ ಕಾನೂನು ತಜ್ಞರ ಜತೆ ಸಮಾಲೋಚಿಸಿ ಕ್ರಮ
Belekeri Mining Case: ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ಜೈಲು ಶಿಕ್ಷೆಗೆ ಹೈಕೋರ್ಟ್ ತಡೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
PM Modi: ಇಂದು ಕೆನ್-ಬೆತ್ವಾ ನದಿ ಜೋಡಣೆಗೆ ಮೋದಿ ಶಂಕುಸ್ಥಾಪನೆ
A.B.Vajpayee Birth Century: ಅಜಾತಶತ್ರು, ಬಹುಮುಖಿ ವ್ಯಕ್ತಿತ್ವದ ಅಟಲ್ ಬಿಹಾರಿ ವಾಜಪೇಯಿ
Election Commission: ದಾಖಲಾದ ಮತದಲ್ಲಿಏರಿಕೆ ಆಗುವುದು ಸಾಮಾನ್ಯ
Financial Status: 42,000 ಕೋಟಿ ರೂ. ಸಾಲದ ಸುಳಿಯಲ್ಲಿ ಎಸ್ಕಾಂಗಳು!
Flights: ಇನ್ಮುಂದೆ ವಿಮಾನಗಳಲ್ಲಿ 7 ಕೆ.ಜಿ. ಮೀರದ ಕೇವಲ 1 ಬ್ಯಾಗ್‌ಗಷ್ಟೇ ಅವಕಾಶ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.