ಪೌರ ಕಾರ್ಮಿಕ ಸೇರಿ ಮೂವರಿಗೆ ವಕ್ಕರಿಸಿದ ಮಹಾಮಾರಿ
Team Udayavani, Jul 2, 2020, 11:34 AM IST
ಜಗಳೂರು: ಪಟ್ಟಣದ ಜೆಸಿಆರ್ ಬಡಾವಣೆಯ ವ್ಯಕ್ತಿಯೋರ್ವನಿಗೆ ಕೋವಿಡ್ ಸೋಂಕು ದೃಢಪಟ್ಟ ಹಿನ್ನಲೆಯಲ್ಲಿ ಆತನ ಕುಟುಂಬದವರನ್ನು ಕ್ವಾರಂಟೈನ್ ಮಾಡಲು ಆ್ಯಂಬುಲೆನ್ಸ್‌ನಲ್ಲಿ ಕರೆದೊಯ್ಯಲಾಯಿತು.
ಜಗಳೂರು: ತಾಲೂಕಿನಲ್ಲಿ ಮೂರು ಜನರಿಗೆ ಕೋವಿಡ್ ದೃಢಪಟ್ಟಿದ್ದು, ಸೋಂಕಿತರನ್ನು ದಾವಣಗೆರೆ ಕೋವಿಡ್ ಆಸ್ಪತ್ರೆಗೆ ಕಳಿಸಲಾಗಿದ್ದು ಅವರ ಕುಟುಂಬ ವರ್ಗದವರನ್ನು ಕ್ವಾರಂಟೈನ್ ಮಾಡಲಾಗಿದೆ ಎಂದು ಬಲ್ಲ ಮೂಲಗಳಿಂದ ತಿಳಿದು ಬಂದಿದೆ.
ತಾಲೂಕಿನಲ್ಲಿ ಪ್ರಥಮ ಬಾರಿಗೆ ಪಟ್ಟಣದ ಡಿಟಿಪಿ ಆಪರೇಟರ್ ಗೆ ತಗುಲಿದ ಮರುದಿನವೇ ಜೆಸಿಆರ್ ಬಡಾವಣೆಯ ಪೌರ ಕಾರ್ಮಿಕನೋರ್ವನಿಗೆ ಸೋಂಕು ತಗುಲಿದೆ. ಈತ ಡಿಟಿಪಿ ಸೆಂಟರ್ ಇರುವ ರಸ್ತೆಯಲ್ಲಿ ಪ್ರತಿ ದಿನ ಚರಂಡಿ ಮತ್ತು ರಸ್ತೆಯನ್ನು ಸ್ವಚ್ಛಗೊಳಿಸಲು ಹೋಗುತ್ತಿದ್ದ ಎನ್ನಲಾಗಿದೆ. ಸೋಂಕಿತ ವ್ಯಕ್ತಿಯನ್ನು ಜಿಲ್ಲಾ ಕೋವಿಡ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಕುಟುಂಬದ ನಾಲ್ಕು ಮಂದಿಯನ್ನು ಕ್ವಾರಂಟೈನ್‌ನಲ್ಲಿ ಇರಿಸಲಾಗಿದೆ. ಇವರ ಮನೆಯ ನೂರು ಮೀಟರ್ ಸುತ್ತಳತೆಯ ಎಲ್ಲಾ ಮನೆಗಳಲ್ಲಿ ಇರುವ ಜನರ ಗಂಟಲು ದ್ರವ ಮಾದರಿಯನ್ನು ಆರೋಗ್ಯ ಇಲಾಖೆ ಸಿಬ್ಬಂದಿ ಸಂಗ್ರಹಿಸಿ ಪ್ರಯೋಗಾಲಯಕ್ಕೆ ಕಳುಹಿಸಿದ್ದಾರೆ. ಸೋಂಕಿತ ವ್ಯಕ್ತಿಯ ಬೀದಿಯನ್ನು ಸೀಲ್‌ಡೌನ್ ಮಾಡಲಾಗಿದೆ.
ಚಿಕ್ಕಉಜ್ಜಿನಿ ಗ್ರಾಮದ 11 ವರ್ಷದ ಬಾಲಕಿಗೆ ಕೋವಿಡ್ ಸೋಂಕು ತಗುಲಿದ್ದು, ಕಳೆದ 4 ದಿನಗಳ ಹಿಂದೆ ಲೋಕಿಕೆರೆಯಲ್ಲಿ ನಡೆದ ಮದುವೆಗೆ ಹೋದ ವೇಳೆ ಬೆಂಗಳೂರಿನಿಂದ ಬಂದ ಬಾಲಕಿಯ ಮಾವನಿಗೆ ಕೋವಿಡ್ ತಗುಲಿರುವ ಹಿನ್ನಲೆಯಲ್ಲಿ ಈ ಬಾಲಕಿಗೂ ಸೋಂಕು ಕಂಡು ಬಂದಿದೆ. ಇವರ ಮನೆಯಲ್ಲಿದ್ದ 5 ಮಂದಿಯನ್ನು ಕ್ವಾರಂಟೈನ್ ಮಾಡಲಾಗಿದ್ದು,ಮನೆಯ ಬೀದಿಯನ್ನು ಸೀಲ್‌ಡೌನ್ ಮಾಡಿ ಪಪಂ ವತಿಯಿಂದ ರಸಾಯನಿಕ ದ್ರಾವಣವನ್ನು ಸಿಂಪಡಣೆ ಮಾಡಲಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ ಕಾಂಗ್ರೆಸ್ ಶಾಸಕ
Davangere: 2021ರಲ್ಲಿ ಅಪ್ರಾಪ್ತೆಯನ್ನು ಅಪಹರಿಸಿ ಅತ್ಯಾಚಾರವೆಸಗಿದ್ದವನಿಗೆ ಶಿಕ್ಷೆ ಪ್ರಕಟ
Davanagere: ಪಾಠ ಮಾಡುತ್ತಿದ್ದಾಗಲೇ ಹೃದಯಾಘಾತ; ಶಿಕ್ಷಕ ಸಾವು
ಸಾರಿಗೆ ಬಸ್ ಡಿಪೋ ಪ್ರಾರಂಭಿಸಬೇಕು ಎಂದು ಒತ್ತಾಯಿಸಿ ದಾವಣಗೆರೆ ತಲುಪಿದ ಪಾದಯಾತ್ರೆ
BJP; ಕುಮಾರ್ ಬಂಗಾರಪ್ಪ ರಾಜ್ಯಾಧ್ಯಕ್ಷನಾಗುವುದು ತಿರುಕನ ಕನಸು: ರೇಣುಕಾಚಾರ್ಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.