ಮತ್ತೆ 50 ಜನರಿಗೆ ಕೋವಿಡ್ ಸೋಂಕು
ಕರ್ತವ್ಯನಿರತ ವೈದ್ಯರು, ಆರೋಗ್ಯ ಸಿಬ್ಬಂದಿಗೆ ಕೋವಿಡ್ ಸೋಂಕಿತರ ಸಂಖ್ಯೆ 930ಕ್ಕೇರಿಕೆ
Team Udayavani, Jul 2, 2020, 11:05 AM IST
ಬಳ್ಳಾರಿ: ನಿನ್ನೆಯಷ್ಟೇ ಬರೋಬ್ಬರಿ 107 ಪಾಸಿಟಿವ್ ಪ್ರಕರಣಗಳು ಕಾಣಿಸಿಕೊಂಡು ಜಿಲ್ಲೆಯ ಜನರಲ್ಲಿ ಆತಂಕ ಸೃಷ್ಟಿಸಿದ್ದ ಕೋವಿಡ್ ಮಹಾಮಾರಿ ಹಾವಳಿ ಬುಧವಾರ ಕರ್ತವ್ಯ ನಿರತ ವೈದ್ಯರು ಹಾಗೂ ಮೂವರು ಆರೋಗ್ಯ ಸಿಬ್ಬಂದಿ ಸೇರಿ ಒಟ್ಟು 50 ಜನರಿಗೆ ಕೋವಿಡ್ ಪಾಸಿಟಿವ್ ಪತ್ತೆಯಾಗಿದೆ. ಈ ಪೈಕಿ ಜಿಂದಾಲ್ ಸಂಸ್ಥೆಯ 456 ಸೇರಿ ಒಟ್ಟು ಪ್ರಕರಣಗಳ ಸಂಖ್ಯೆ 930ಕ್ಕೆ ಏರಿಕೆಯಾಗಿದೆ.
ಗಣಿಜಿಲ್ಲೆಯಲ್ಲಿ ಪ್ರಕರಣಗಳ ಸಂಖ್ಯೆ ಸಾವಿರದ ಅಂಚಿಗೆ ತಲುಪಿದೆ. ಒಟ್ಟು ಪ್ರಕರಣಗಳ ಪೈಕಿ 409 ಗುಣಮುಖರಾಗಿ 29 ಜನ ಮರಣ ಹೊಂದಿದ್ದಾರೆ. ಇನ್ನೂ 492 ಜನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇಂದು ವರದಿಯಾದ 50 ಪ್ರಕರಣಗಳ ಪೈಕಿ ಬಳ್ಳಾರಿ ತಾಲೂಕು 24, ಸಂಡೂರು ತಾಲೂಕು 14, ಹೊಸಪೇಟೆ 4, ಸಿರುಗುಪ್ಪ 3, ಕೂಡ್ಲಿಗಿ 1, ಹೂವಿನಹಡಗಲಿ 2, ನೆರೆಯ ಆಂಧ್ರದ ಎಮ್ಮಿಗನೂರು 1, ಮೊಳಕಾಲ್ಮೂರು 1 ಪ್ರಕರಣ ಸೇರಿವೆ.
ಈ ಪೈಕಿ ಕರ್ತವ್ಯ ನಿರತ ಒಬ್ಬ ವೈದ್ಯರು, ಮೂವರು ಕರ್ತವ್ಯ ನಿರತ ಆರೋಗ್ಯ ಸಿಬ್ಬಂದಿಗೂ ಕೋವಿಡ್ ಸೋಂಕು ಆವರಿಸಿದೆ. 12 ಐಎಲ್ಐ ಪ್ರಕರಣಗಳಾಗಿವೆ. ಮೂರು ದುರ್ಬಲ ವರ್ಗದ ಸಾರಿ ಪ್ರಕರಣಗಳಾಗಿದ್ದು, ಇನ್ನುಳಿದ ಸೋಂಕಿತರು ವಿವಿಧ ಸೋಂಕಿತರ ಸಂಪರ್ಕಿತರಾಗಿದ್ದಾರೆ ಎಂದು ಡಿಸಿ ಎಸ್.ಎಸ್. ನಕುಲ್ ಮಾಹಿತಿ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sandur Result: ಭದ್ರಕೋಟೆಯಲ್ಲಿ ಮತ್ತೆ ಗೆದ್ದ ಕಾಂಗ್ರೆಸ್: ಇಲ್ಲಿದೆ ಮತಎಣಿಕೆಯ ಪೂರ್ಣವಿವರ
Sandur: ಭರ್ಜರಿ ಗೆಲುವಿನೊಂದಿಗೆ ವಿಧಾನಸಭೆಗೆ ಎಂಟ್ರಿಕೊಟ್ಟ ಕಾಂಗ್ರೆಸ್ ನ ಅನ್ನಪೂರ್ಣ
Siruguppa: ತೆಕ್ಕಲಕೋಟೆಯಲ್ಲಿ ಅಕ್ರಮ ಪಡಿತರ ಅಕ್ಕಿ ವಶ
Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು
Siruguppa: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Indian Constitution: ಸಂವಿಧಾನ ಅಂಗೀಕರಿಸಿ 75 ವರ್ಷ: ಸದನದಲ್ಲಿಂದು ರಾಷ್ಟ್ರಪತಿ ಭಾಷಣ
Judgement: ಸಂವಿಧಾನ ಪೀಠಿಕೆಯ ಜಾತ್ಯತೀತ ಪದ ಪ್ರಶ್ನಿಸಿದ್ದ ಅರ್ಜಿ ಸುಪ್ರೀಂನಿಂದ ವಜಾ
EVM Issue: ಮತಯಂತ್ರ ತಿರುಚಿದ್ದು ಸಾಬೀತಿಗೆ ನನ್ನ ಬಳಿ ಪುರಾವೆಗಳಿಲ್ಲ: ಕಾರ್ತಿ ಚಿದಂಬರಂ
Kasaragod;ತೀವ್ರ ತಲೆನೋವು: ವಿದ್ಯಾರ್ಥಿನಿ ಸಾ*ವು
Malpe: ಕಾರು ಢಿಕ್ಕಿಯಾಗಿ ಆಟೋ ರಿಕ್ಷಾ ಚಾಲಕನಿಗೆ ಗಾಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.