ಸವದತ್ತಿ ಯಲ್ಲಮ್ಮ ದರ್ಶನಕ್ಕೆ ಭಕ್ತರ ಕಾತರ
Team Udayavani, Jul 2, 2020, 1:20 PM IST
ಸವದತ್ತಿ: ಯಲ್ಲಮ್ಮ ಗುಡ್ಡಕ್ಕೆ ಆಗಮಿಸಿದ ಭಕ್ತರು ಮಹಾದ್ವಾರದ ಬಳಿಯೇ ಪೂಜೆ ಸಲ್ಲಿಸುತ್ತಿದ್ದಾರೆ.
ಸವದತ್ತಿ: ವರ್ಷದ 12 ತಿಂಗಳೂ ಭಕ್ತರು, ವ್ಯಾಪಾರಿಗಳಿಂದ ಗಿಜುಗುಡುತ್ತಿದ್ದ ತಾಲೂಕಿನ ಸುಕ್ಷೇತ್ರ ಯಲ್ಲಮ್ಮ ದೇವಿ ಸನ್ನಿಧಿಗೆ ಲಾಕ್‌ಡೌನ್ ಸಡಿಲಿಕೆಯಾದ ಬಳಿಕ ಮಂಗಳವಾರ ಮತ್ತು ಶುಕ್ರವಾರ ಬರುವ ಭಕ್ತರ ಸಂಖ್ಯೆ ಹೆಚ್ಚಿದೆ. ಇದರಿಂದ ತಾಲೂಕಿಗೆ ಅಲ್ಪ ಪ್ರಮಾಣದಲ್ಲಿದ್ದ ಕೋವಿಡ್ ಸೋಂಕು ಹರಡುವ ಸಾಧ್ಯತೆಗಳಿವೆ. ಈಗಾಗಲೇ ಸರಕಾರದ ಆದೇಶದನ್ವಯ ರಾಜ್ಯದ
ಬಹುತೇಕ ದೇವಸ್ಥಾನಗಳಲ್ಲಿ ಸಾರ್ವಜನಿಕ ದರ್ಶನಕ್ಕೆ ಅನುಮತಿ ನೀಡಲಾಗಿದೆ. ಯಲ್ಲಮ್ಮ ದೇವಸ್ಥಾನಕ್ಕೆ ಮಹಾರಾಷ್ಟ್ರದಿಂದ ಹೆಚ್ಚು ಭಕ್ತರು ಬರುವ ನಿರೀಕ್ಷೆಯಿಂದ ಸರಕಾರ ಮತ್ತು ಜಿಲ್ಲಾಧಿಕಾರಿಗಳು ಮುನ್ನೆಚ್ಚರಿಕಾ ಕ್ರಮವಾಗಿ ದೇವಸ್ಥಾನವನ್ನು ಜೂ.30ರ ವರೆಗೆ ತೆರೆಯದಂತೆ ಆದೇಶಿಸಿದ್ದರು. ಈಗ ಈ ಆದೇಶವನ್ನು ಜುಲೈ 31ರ ವರೆಗೆ ಮುಂದುವರೆಸಲಾಗಿದೆ.
ಸದ್ಯ ಸಾರ್ವಜನಿಕರ ದರ್ಶನ ನಿಷೇಧಿ ಸಿದ್ದು, ಪೂಜಾ ವಿಧಿ- ವಿಧಾನಗಳು ನಿತ್ಯದಂತೆ ನಡೆದಿವೆ. ಆದಾಗ್ಯೂ ಬೇರೆಡೆಯಿಂದ ಭಕ್ತರು ಆಗಮಿಸಿ ದೇವಸ್ಥಾನದ ಮಹಾದ್ವಾರದ ಬಳಿ ರಸ್ತೆಯಲ್ಲಿಯೇ ಕಾಯಿ, ಕರ್ಪೂರ, ನೈವೇದ್ಯ ಅರ್ಪಿಸುತ್ತಿದ್ದಾರೆ. ಇನ್ನು ಕೆಲವರು ದೇವಿಯ ದರ್ಶನಕ್ಕಾಗಿ ಸಿಬ್ಬಂದಿ ಜೊತೆ ವಾಗ್ವಾದಕ್ಕಿಳಿದ ಘಟನೆಗಳು ನಡೆದಿವೆ.
ಕೋವಿಡ್‌ನಿಂದ ಆರ್ಥಿಕ ಸಂಕಷ್ಟ ಅನುಭವಿಸಿದ ಸುತ್ತಲಿನ ಗ್ರಾಮಗಳ ಚಿಕ್ಕ ವ್ಯಾಪಾರಸ್ಥರು ಭಕ್ತರ ಆಗಮನದ ನಿರೀಕ್ಷೆಯಲ್ಲಿದ್ದಾರೆ. ಬರುವ ಭಕ್ತಾದಿಗಳಿಗೆ ಪೂಜಾ ಸಾಮಗ್ರಿ, ಮಧ್ಯಾಹ್ನದ ಊಟ ಮತ್ತು ಚಹ ಸೇರಿದಂತೆ ಅಗತ್ಯ ವಸ್ತುಗಳ ಪೂರೈಕೆಗೆ ಸಣ್ಣ ಪುಟ್ಟ ವ್ಯಾಪಾರಸ್ಥರು ದೇವಸ್ಥಾನದತ್ತ ಮುಖ ಮಾಡಿದ್ದಾರೆ. ಜೋಗುತಿಯರು ಭಕ್ತರಿಂದ ಪಡ್ಡಲಗಿ ತುಂಬಿಸುವ ಕಾರ್ಯಕ್ಕೆ ಮುಂದಾಗುತ್ತಿದ್ದಾರೆ. ಸೋಂಕಿನ ಹರಡದಂತೆ ಸರಕಾರ ಎಷ್ಟೆ ಕ್ರಮ ಕೈಗೊಂಡರೂ ಭಕ್ತರಾಗಲಿ, ವ್ಯಾಪಾರಸ್ಥರಾಗಲಿ ತಲೆ ಕೆಡಿಸಿಕೊಳ್ಳುತ್ತಿಲ್ಲ. ಇದರಿಂದಾಗಿ ಸೋಂಕು ತೀವ್ರತೆ ಪಡೆಯುವ ಸಂಭವಗಳನ್ನು ತಳ್ಳಿ ಹಾಕುವಂತಿಲ್ಲ. ದೇವಸ್ಥಾನದ ಸುತ್ತಲಿನ ಗ್ರಾಪಂಗಳಿಂದ ಗ್ರಾಮಸ್ಥರಿಗೆ ಮತ್ತು ವ್ಯಾಪಾರಸ್ಥರಿಗೆ ಗುಡ್ಡಕ್ಕೆ ಹೋಗದಂತೆ, ವ್ಯಾಪಾರ ನಡೆಸದಂತೆ ಪ್ರಚಾರ ನಡೆಸಿ
ಮುನ್ನೆಚ್ಚರಿಕಾ ಕ್ರಮಗಳನ್ನು ತಿಳಿಸಲಾಗುತ್ತಿದೆ. ಸರಕಾರದ ಆದೇಶವಿದ್ದರೂ ಸಹ ದೇವಸ್ಥಾನಕ್ಕೆ ಭಕ್ತಾದಿಗಳ ಆಗಮನ ನಿಂತಿಲ್ಲ. ಪೊಲೀಸ್ ಇಲಾಖೆಯಿಂದ ಭಕ್ತರಿಗೆ, ಜೋಗುತಿಯರಿಗೆ ಮತ್ತು ವ್ಯಾಪಾರಸ್ಥರಿಗೆ ತಿಳಿವಳಿಕೆ ನೀಡಿ ಮರಳಿ ಕಳುಹಿಸುವ ಕಾರ್ಯ ನಡೆದಿದೆ.
ಸಾರ್ವಜನಿಕ ದರ್ಶನ ನಿಷೇಧವಿದ್ದರೂ ಭಕ್ತರು ಯಲ್ಲಮ್ಮನ ಗುಡ್ಡಕ್ಕೆ ಬರುತ್ತಿದ್ದಾರೆ. ಸಿಬ್ಬಂದಿಗಳಿಂದ ತಿಳಿವಳಿಕೆ ನೀಡಿ ಮರಳಿ ಕಳಿಸಲಾಗುತ್ತಿದೆ. ಸರಕಾರದ ಆದೇಶದಂತೆ ಮುಂಜಾಗೃತಾ ಕ್ರಮ ಕೈಗೊಳ್ಳಲಾಗಿದೆ.
ರವಿ ಕೋಟಾರಗಸ್ತಿ, ಕಾರ್ಯನಿರ್ವಾಹಕ ಅಧಿಕಾರಿ,
ಯಲ್ಲಮ್ಮ ದೇವಸ್ಥಾನ ದೇವಸ್ಥಾನಕ್ಕೆ ಬರುವ ಭಕ್ತಾದಿಗಳೊಂದಿಗೆ ಸಾಮಾಜಿಕ ಅಂತರ ಕಾಪಾಡಬೇಕು, ಸೋಂಕು ಹರಡದಂತೆ ಮುನ್ನೆಚ್ಚರಿಕಾ ಕ್ರಮಗಳ ಜೊತೆಗೆ ಗ್ರಾಮದಲ್ಲಿ ಗುಂಪುಗೂಡಿ ಸಂತೆ ನಡೆಸದಂತೆ ಗ್ರಾಮಸ್ಥರಲ್ಲಿ ಧ್ವನಿ ವರ್ಧಕಗಳ ಮೂಲಕ ಪ್ರಚಾರ ನಡೆಸಲಾಗಿದೆ.
ಮಹೇಶ ತೆಲಗಾರ ಪಿಡಿಒ ಉಗರಗೋಳ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi; ಕಿತ್ತೂರು ರಾಣಿ ಚನ್ನಮ್ಮ ಕಿರು ಮೃಗಾಲಯದಲ್ಲಿದ್ದ ಹುಲಿ ಶೌರ್ಯ ಇನ್ನಿಲ್ಲ
Chennamman-Kittur: ಯೋಧ ನರೇಶ ಯಲ್ಲಪ್ಪ ಅಗಸರ ಕೆರೆಗೆ ಹಾರಿ ಆತ್ಮಹತ್ಯೆ
Setback BJP: ಜನರಿಂದ ವಿಜಯೇಂದ್ರ ನಾಯಕತ್ವ ತಿರಸ್ಕಾರ, ರಾಜೀನಾಮೆ ನೀಡಲಿ: ಶಾಸಕ ಯತ್ನಾಳ್
ಮಹಾರಾಷ್ಟ್ರ ಸೋಲಿನ ಬೆನ್ನಲ್ಲೇ ಇವಿಎಂ ಬಗ್ಗೆ ಅನುಮಾನ ವ್ಯಕ್ತಪಡಿಸಿದ ಸತೀಶ್ ಜಾರಕಿಹೊಳಿ
ಬೆಳಗಾವಿ:ಬಟ್ಟೆ ಅಂಗಡಿಯಲ್ಲಿ ಕೆಲಸ ಮಾಡಿದ ಹುಡುಗ..ಜಿಲ್ಲಾ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Maharashtra: ಕಾಂಗ್ರೆಸ್ ಗೆ ಕೇವಲ 16 ಸ್ಥಾನ; ಕೈ ಅಧ್ಯಕ್ಷ ಸ್ಥಾನಕ್ಕೆ ಪಟೋಲೆ ರಾಜೀನಾಮೆ
Politics: ಫಡ್ನವೀಸ್ ಗೆ ಬೆಂಬಲ ನೀಡಿದ ಅಜಿತ್; ಮಹಾರಾಷ್ಟ್ರದಲ್ಲಿ ಮುಗಿಯದ ಸಿಎಂ ತಿಕ್ಕಾಟ
Video: ನೋಟಿನ ಮಾಲೆಯ ನೋಟು ಎಗರಿಸಿದ ಕಳ್ಳ… ಮದುವೆ ಬಿಟ್ಟು ಕಳ್ಳನ ಹಿಂದೆ ಓಡಿದ ವರ
Sudeep: ʼಮ್ಯಾಕ್ಸ್ʼ ರಿಲೀಸ್ ದಿನ ಫಿಕ್ಸ್: ಕಿಚ್ಚನ ಸಿಟ್ಟಿಗೆ ಎಚ್ಚೆತ್ತ ನಿರ್ಮಾಣ ಸಂಸ್ಥೆ
Bidar: ಭಾರತದಿಂದಲೇ ವಕ್ಫ್ ತೊಲಗಿಸಬೇಕು: ಯತ್ನಾಳ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.