ಜ್ಯೋತಿರಾದಿತ್ಯ ಸಿಂದ್ಯಾ ಎಫೆಕ್ಟ್: ಮಧ್ಯಪ್ರದೇಶ ಸಚಿವ ಸಂಪುಟಕ್ಕೆ 28 ಮಂದಿ ಸೇರ್ಪಡೆ
ಜ್ಯೋತಿರಾದಿತ್ಯ ಅವರ ಆಪ್ತರಿಗೆ ಸಂಪುಟದಲ್ಲಿ ಸ್ಥಾನ ನೀಡುವ ಹಿನ್ನೆಲೆಯಲ್ಲಿ ಸಂಪುಟ ವಿಸ್ತರಣೆ ತುಂಬಾ ವಿಳಂಬ
Team Udayavani, Jul 2, 2020, 3:26 PM IST
ಭೋಪಾಲ್: ಮಧ್ಯಪ್ರದೇಶದ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ನೇತೃತ್ವದ ಬಿಜೆಪಿ ಸರ್ಕಾರದಲ್ಲಿ 28 ಮಂದಿಗೆ ಸಚಿವ ಸ್ಥಾನ ನೀಡುವ ಮೂಲಕ ಸಂಪುಟ ವಿಸ್ತರಿಸಿದ್ದಾರೆ. ಕಾಂಗ್ರೆಸ್ ಮಾಜಿ ಮುಖಂಡ ಜ್ಯೋತಿರಾದಿತ್ಯ ಸಿಂದಿಯಾ ಅವರ ಹಲವು ಆಪ್ತರು ಸಚಿವ ಸಂಪುಟದಲ್ಲಿ ಸೇರ್ಪಡೆಯಾಗಿದ್ದಾರೆ.
ದೀರ್ಘ ಕಾಲ ಕಾಂಗ್ರೆಸ್ ಪಕ್ಷದಲ್ಲಿದ್ದ ಜ್ಯೋತಿರಾದಿತ್ಯ ಸಿಂದಿಯಾ ಹಾಗೂ ಅವರ ಆಪ್ತರು ಮಾರ್ಚ್ ನಲ್ಲಿ ಭಾರತೀಯ ಜನತಾ ಪಕ್ಷ ಸೇರ್ಪಡೆಗೊಂಡಿದ್ದರು. ಸಿಂದಿಯಾ ಅವರ ಚಿಕ್ಕಮ್ಮ ಯಶೋಧರಾ ರಾಜೆ ಸಿಂದಿಯಾ ಅವರು ಕೂಡಾ ಸಚಿವ ಸಂಪುಟದಲ್ಲಿ ಸ್ಥಾನ ಪಡೆದಿದ್ದಾರೆ.
ಜ್ಯೋತಿರಾದಿತ್ಯ ಅವರ ಆಪ್ತರಿಗೆ ಸಂಪುಟದಲ್ಲಿ ಸ್ಥಾನ ನೀಡುವ ಹಿನ್ನೆಲೆಯಲ್ಲಿ ಸಂಪುಟ ವಿಸ್ತರಣೆ ತುಂಬಾ ವಿಳಂಬವಾಗಿತ್ತು. ಅಷ್ಟೇ ಅಲ್ಲ ಮೂಲಗಳ ಪ್ರಕಾರ, ಪಕ್ಷದ ಹೈಕಮಾಂಡ್ ಆದೇಶದ ಮೇರೆಗೆ ಹಲವು ಆಕಾಂಕ್ಷಿಗಳು ಇದ್ದಿದ್ದು, ಅವರಿಗೆ ಬೇರೆ ಅವಕಾಶ ನೀಡುವುದಾಗಿ ಭರವಸೆ ನೀಡಿರುವುದಾಗಿ ತಿಳಿಸಿದೆ.
ಸಮುದ್ರ ಮಥನದ ಸಂದರ್ಭದಲ್ಲಿ ಅಮೃತ ಹೊರಬರುತ್ತದೆ, ಆದರೆ ವಿಷವನ್ನು ಮಾತ್ರ ಶಿವ ಕುಡಿಯುತ್ತಾನೆ ಎಂದು ಚೌಹಾಣ್ ಸಂಪುಟ ವಿಸ್ತರಣೆ ನಂತರ ಮಾರ್ಮಿಕವಾಗಿ ಪ್ರತಿಕ್ರಿಯೆ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BJP;’ಬಟೆಂಗೆ ತೊ ಕಟೆಂಗೆ’ ಹೇಳಿಕೆಗೆ ಬೆಂಬಲವಿಲ್ಲ ಎಂದ ಅಜಿತ್ ಪವಾರ್
J-K: ಭೀಕರ ಅಪಘಾ*ತದಲ್ಲಿ SUV ಚಲಾಯಿಸುತ್ತಿದ್ದ 17 ರ ಹುಡುಗರಿಬ್ಬರು ಮೃ*ತ್ಯು
Maharashtra Election: ಅಮಿತ್ ಶಾ ಅವರ ಬ್ಯಾಗ್ ಪರೀಕ್ಷಿಸಿದ ಚುನಾವಣಾ ಅಧಿಕಾರಿಗಳು
Anmol Buffalo:1500 ಕೆಜಿ ತೂಗುವ ಈ ಕೋಣದ ಬೆಲೆ ಬರೋಬ್ಬರಿ 23 ಕೋಟಿ ರೂ!
Digital Arrest ಹೆಸರಿನಲ್ಲಿ ನಿವೃತ್ತ ಇಂಜಿನಿಯರ್ ಗೆ 10 ಕೋಟಿ ರೂಪಾಯಿ ಪಂಗನಾಮ!
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.