![DKSHi (3)](https://www.udayavani.com/wp-content/uploads/2025/02/DKSHi-3-2-415x276.jpg)
![DKSHi (3)](https://www.udayavani.com/wp-content/uploads/2025/02/DKSHi-3-2-415x276.jpg)
Team Udayavani, Jul 2, 2020, 4:24 PM IST
ಸಾಂದರ್ಭಿಕ ಚಿತ್ರ
ಗದಗ: ಜಿಲ್ಲೆಯಲ್ಲಿ ಗುರುವಾರ ಕೋವಿಡ್ ಸೋಂಕಿತ ವೃದ್ಧರೊಬ್ಬರು ಕೊನೆಯುಸಿರೆಳೆದಿದ್ದು, ಈವರೆಗೆ ಜಿಲ್ಲೆಯಲ್ಲಿ ಕೋವಿಡ್ ಸೋಂಕಿನಿಂದ ಸಾವನ್ನಪ್ಪಿದವರ ಸಂಖ್ಯೆ ನಾಲ್ಕಕ್ಕೇರಿದೆ.
ಜಿಲ್ಲೆಯ ಮುಂಡರಗಿ ಪಟ್ಟಣದ ನೇಕಾರ ಓಣಿಯ 75 ವರ್ಷದ ವೃದ್ಧ(P-9730) ಗುರುವಾರ ಬೆಳಗ್ಗೆ ಮೃತಪಟ್ಟಿದ್ದಾರೆ. ನಿಮೋನಿಯಾ ಹಾಗೂ ಬುದ್ಧಿಮಾಂದ್ಯತೆಯಿಂದ ಬಳಲುತ್ತಿದ್ದ ಅವರನ್ನು ಜೂ.23 ರಂದು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅವರ ಗಂಟಲು ದ್ರವ ಪರೀಕ್ಷಿಸಿದ್ದು, ಜೂ.24 ರಂದು ಕೋವಿಡ್-19 ಸೋಂಕು ದೃಢಪಟ್ಟಿತ್ತು. ನಂತರ ನಿಗದಿತ ಕೋವಿಡ್-19 ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು.
ಅಧಿಕ ರಕ್ತದ ಒತ್ತಡ, ಮಧುಮೇಹ ಸ್ಥಿತಿಯಲ್ಲಿದ್ದ ಅವರಿಗೆ ಚಿಕಿತ್ಸೆ ಫಲಕಾರಿಯಾಗದೇ ನಿಧನರಾಗಿದ್ದಾರೆ. ಸರ್ಕಾರದ ಕೊವಿಡ್-19 ಮಾರ್ಗಸೂಚಿಗಳನ್ವಯ ಮೃತರ ಅಂತ್ಯಕ್ರಿಯೆ ಜರುಗಿಸಲಾಗಿದೆ. ಇದರಿಂದ ಜಿಲ್ಲೆಯಲ್ಲಿ ಈವರೆಗೆ ಕೊವಿಡ್-19 ಸೋಂಕಿನಿಂದ ಮೃತರಾದವರ ಸಂಖ್ಯೆ ನಾಲ್ಕಕ್ಕೆ ಏರಿದೆ ಎಂದು ಜಿಲ್ಲಾಧಿಕಾರಿ ಸುಂದರೇಶ್ ಬಾಬು ಎಂ ತಿಳಿಸಿದ್ದಾರೆ.
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
ಗದಗ-ಬೆಟಗೇರಿ ನಗರಸಭೆ ಮಾಜಿ ಅದ್ಯಕ್ಷೆ ಸೇರಿ ಇಬ್ಬರು ಸದಸ್ಯರ ಸದಸ್ಯತ್ವ ರದ್ದು
Gadag: ಕೌಟುಂಬಿಕ ಕಲಹದಿಂದ ನೊಂದು ಪೊಲೀಸ್ ಪೇದೆ ಆತ್ಮಹ*ತ್ಯೆ!
Approve:ಮೈಕ್ರೋ ಫೈನಾನ್ಸ್ ಕಿರುಕುಳ ವಿರುದ್ಧದ ಸುಗ್ರೀವಾಜ್ಞೆಗೆ ಕೊನೆಗೂ ರಾಜ್ಯಪಾಲರ ಅಂಕಿತ
Gadag: ಅಕ್ರಮ ಬಡ್ಡಿ ವ್ಯವಹಾರದ ವಿರುದ್ಧ ಕಾರ್ಯಾಚರಣೆ… ಅಪಾರ ಪ್ರಮಾಣದ ನಗ ನಗದು ವಶ
You seem to have an Ad Blocker on.
To continue reading, please turn it off or whitelist Udayavani.