ಎಸ್ಸೆಸ್ಸೆಲ್ಸಿ ಸಮಾಜ ವಿಜ್ಞಾನ ಪರೀಕ್ಷೆಯೂ ಸುಸೂತ್ರ
Team Udayavani, Jul 2, 2020, 12:10 PM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ಚಿಕ್ಕಮಗಳೂರು: ಎಸ್ಸೆಸ್ಸೆಲ್ಸಿ ನಾಲ್ಕನೇ ದಿನದ ಸಮಾಜ ವಿಜ್ಞಾನ ಪರೀಕ್ಷೆಯೂ ಜಿಲ್ಲೆಯಲ್ಲಿ ಸುಗಮವಾಗಿ ನಡೆಯಿತು.
ಸಮಾಜ ವಿಜ್ಞಾನ ಪರೀಕ್ಷೆಯಲ್ಲಿ 12,352 ವಿದ್ಯಾರ್ಥಿಗಳಲ್ಲಿ 12,238 ವಿದ್ಯಾರ್ಥಿಗಳು ಪರೀಕ್ಷೆ ಬರೆದು 114 ವಿದ್ಯಾರ್ಥಿಗಳು ಗೈರು ಹಾಜರಾಗಿದ್ದರು. ಹಾಜರಾದವರಲ್ಲಿ ಕ್ವಾರಂಟೈನ್ ಪ್ರದೇಶದಿಂದ ಬಂದ 24 ವಿದ್ಯಾರ್ಥಿಗಳು ಹಾಗೂ ಅನಾರೋಗ್ಯದ ಕಾರಣದಿಂದ 40 ವಿದ್ಯಾರ್ಥಿಗಳನ್ನು ವಿಶೇಷ ಕೊಠಡಿಯಲ್ಲಿ ಕೂರಿಸಿ ಪರೀಕ್ಷೆ ಬರೆಸಲಾಯಿತು. ವಲಸೆ ವಿದ್ಯಾರ್ಥಿಗಳ 553 ವಿದ್ಯಾರ್ಥಿಗಳಲ್ಲಿ 552 ವಿದ್ಯಾರ್ಥಿಗಳು ಹಾಜರಾಗಿ 01 ವಿದ್ಯಾರ್ಥಿ ಗೈರು ಹಾಜರಾಗಿದ್ದರು. ಪರೀಕ್ಷಾ ಕೇಂದ್ರದ ಸುತ್ತ 200. ಮೀ ವ್ಯಾಪ್ತಿಯಲ್ಲಿ ನಿಷೇದಾಜ್ಞೆ ಇದ್ದು, ಪರೀಕ್ಷಾ ಕೇಂದ್ರದ ಸುತ್ತಮುತ್ತಲಿನ ಜೆರಾಕ್ಸ್ ಅಂಗಡಿಗಳನ್ನು ಮುಚ್ಚಲಾಗಿತ್ತು ಎಂದು ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಸಿ. ನಂಜಯ್ಯ ತಿಳಿಸಿದ್ದಾರೆ.
ಎನ್.ಆರ್.ಪುರ ತಾಲೂಕಿನಲ್ಲಿ ವಿದ್ಯಾರ್ಥಿಯೋರ್ವ ನಿರಾಸಕ್ತಿಯಿಂದ ಪರೀಕ್ಷೆಗೆ ಗೈರು ಹಾಜರಾಗಿದ್ದು, ಶಿಕ್ಷಕರು ವಿದ್ಯಾರ್ಥಿಯ ಮನೆಗೆ ತೆರಳಿ ವಿದ್ಯಾರ್ಥಿಯ ಮನವೊಲಿಸಿ ಪರೀಕ್ಷಾ ಕೇಂದ್ರಕ್ಕೆ ಕರೆತಂದರು. ಕಾಲಿಗೆ ಸುಟ್ಟ ಗಾಯದಿಂದ ಬಳಲುತ್ತಿದ್ದ ಶೃಂಗೇರಿ ತಾಲೂಕು ಮೆಣಸಿನ ಹಾಡ್ಯ ಗ್ರಾಮದ ಕಲ್ಪನಾ ಎಂಬ ವಿದ್ಯಾರ್ಥಿನಿ ಲೆಕ್ಕಿಸದೆ 22 ಕಿ.ಮೀ. ಇಲಾಖೆ ವಾಹನದ ಸಹಾಯ ಪಡೆದು ಶೃಂಗೇರಿ ಸರ್ಕಾರಿ ಪ.ಪೂ. ಕಾಲೇಜಿನ ಪರೀಕ್ಷಾ ಕೇಂದ್ರಕ್ಕೆ ತೆರಳಿ ಪರೀಕ್ಷೆ ಬರೆದಳು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chikkamagaluru: ಮದುವೆ ಹಾಲ್ ನಲ್ಲೇ ವಧುವಿನ ಚಿನ್ನ ಎಗರಿಸಿದ ಖದೀಮರು…
Chikkamagaluru: ಕೇರಳದಿಂದ “ಸುರಕ್ಷಿತ’ ಮಲೆನಾಡಿನತ್ತ “ನಕ್ಸಲರು’?
Naxalite: ಮಲೆನಾಡಿಗೆ ನಕ್ಸಲರ ಭೇಟಿ ದೃಢ; 3 ಬಂದೂಕು-ಮದ್ದುಗುಂಡು ವಶ
ಚಿಕಿತ್ಸೆಗೆಂದು ಬಂದಿದ್ದ ರೋಗಿ ಸಾವು; ವೈದ್ಯರ ನಿರ್ಲಕ್ಷ್ಯವೇ ಕಾರಣ ಎಂದು ಕುಟುಂಬಸ್ಥರ ಆರೋಪ
Chikkamagaluru: ಮನೆಯೊಂದರಲ್ಲಿ ಬಂದೂಕು ಪತ್ತೆ; ನಕ್ಸಲ್ ಓಡಾಟ ಶಂಕೆ
MUST WATCH
ಹೊಸ ಸೇರ್ಪಡೆ
Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು
Bangladesh: ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್ ರಾಷ್ಟ್ರ?
India-South Africa; ನಾಲ್ಕನೇ ಟಿ20 ಪಂದ್ಯ ಇಂದು: ಸರಣಿ ಗೆಲುವಿನ ನಿರೀಕ್ಷೆಯಲ್ಲಿ ಭಾರತ
Marriage: ಕ್ರಿಸ್ಮಸ್‌ಗೆ ಅಮೆಜಾನ್ ಸಿಇಒ ಅದ್ಧೂರಿ ವಿವಾಹ?
Washington: ಅಮೆರಿಕ ಗುಪ್ತಚರ ಸಂಸ್ಥೆಗೆ ತುಳಸಿ ಗಬಾರ್ಡ್ ಮುಖ್ಯಸ್ಥೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.