ಸೋಂಕಿತ ಗರ್ಭಿಣಿ ಪತ್ನಿಯನ್ನು ಆಸ್ಪತ್ರೆಗೆ ಕಳಿಸಲು ಪತಿರಾಯನ ರಂಪಾಟ!
Team Udayavani, Jul 2, 2020, 8:54 PM IST
ಹಾವೇರಿ:ಕೋವಿಡ್-19 ಪಾಸಿಟಿವ್ ಇರುವ ಗರ್ಭಿಣಿ ಪತ್ನಿಯನ್ನು ಆಸ್ಪತ್ರೆಗೆ ಕಳುಹಿಸಲು ಒಪ್ಪದ ಪತಿ ಆರೋಗ್ಯ ಸಿಬ್ಬಂದಿಯೊಂದಿಗೆ ರಂಪಾಟ ಮಾಡಿದ ಘಟನೆ ಗುರುವಾರ ತಾಲೂಕಿನ ಕನವಳ್ಳಿಯಲ್ಲಿ ನಡೆದಿದೆ.
ಕೋವಿಡ್ 19 ಪಾಸಿಟಿವ್ ವರದಿ ಬಂದಾಗ ಗರ್ಭಿಣಿಯನ್ನು ಕೋವಿಡ್ ಆಸ್ಪತ್ರೆಗೆ ದಾಖಲಿಸಲು ಆಂಬ್ಯುಲೆನ್ಸ್ ಸಿಬ್ಬಂದಿ ಕನವಳ್ಳಿಯ ಮನೆಗೆ ಹೋದಾಗ ಪತ್ನಿಯೊಂದಿಗೆ ಪತಿಯೂ ಆಂಬ್ಯುಲೆನ್ಸ್ ಏರಲು ಯತ್ನಿಸಿದ್ದಾನೆ. ಪ್ರೀತಿಯ ಪತ್ನಿಯನ್ನು ಒಬ್ಬಳೇ ಇರಲು ಬಿಡುವುದಿಲ್ಲ ಎಂದು ಪಟ್ಟು ಹಿಡಿದಿದ್ದಾನೆ.
ಸ್ಥಳೀಯರು, ಸಿಬ್ಬಂದಿ ಮನವೊಲಿಸಿ ಆಂಬ್ಯುಲೆನ್ಸ್ ಹತ್ತುವುದನ್ನು ತಡೆದಿದ್ದಾರೆ. ಆಗ ಪತಿ ಬೈಕ್‌ನೊಂದಿಗೆ ಆಂಬ್ಯುಲೆನ್ಸ್ ಹಿಂಬಾಲಿಸಿ ಆಸ್ಪತ್ರೆಯವರೆಗೂ ಬಂದಿದ್ದಾನೆ.
ಸೋಂಕಿತೆಯನ್ನು ಆಸ್ಪತ್ರೆಗೆ ದಾಖಲಿಸುವಾಗ ಅಲ್ಲಿಯೂ ಪತಿ ಆಸ್ಪತ್ರೆ ಒಳಗೆ ಹೋಗಲು ಯತ್ನಿಸಿದ್ದಾನೆ. ಆಗ ಪೊಲೀಸರು ಅವನನ್ನು ಬೆದರಿಸಿ, ನಗರದ ಹೊರವಲಯದಲ್ಲಿರುವ ವಸತಿ ನಿಲಯದ ಕ್ವಾರಂಟೈನ್ ಕೇಂದ್ರಕ್ಕೆ ಕರೆದೊಯ್ದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Waqf Notice: ನೋಟಿಸ್ ಕಣ್ತಪ್ಪಿನ ಕಾರ್ಯವಲ್ಲ, ಸರಕಾರದ ವ್ಯವಸ್ಥಿತ ಷಡ್ಯಂತ್ರ: ವಿ.ಸುನೀಲ್
Davanagere: ದೇವಸ್ಥಾನಗಳ ಆಸ್ತಿಗಳ ರಕ್ಷಣೆಗೆ ರಾಜ್ಯ ಸರ್ಕಾರ ಮುಂದಾಗಬೇಕು: ಪೇಜಾವರ ಶ್ರೀ
Kalaburagi: ಗುರುತು ಸಿಗದ ಹಾಗೆ ಪತ್ನಿಯ ಹತ್ಯೆಗೈದ ಪತಿ ಸೇರಿ ಮೂವರ ಬಂಧನ
Waqf Issue: ಹುಬ್ಬಳ್ಳಿ, ವಿಜಯಪುರಕ್ಕೆ ನ.7ರಂದು ಜೆಪಿಸಿ ಅಧ್ಯಕ್ಷ ಜಗದಾಂಬಿಕಾ ಪಾಲ್ ಭೇಟಿ
Waqf issue: ಅಲ್ಲಾನ ಹೆಸರಲ್ಲಿ ಅಲ್ಲಾನಿಗೆ ದೋಖಾ: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ
MUST WATCH
ಹೊಸ ಸೇರ್ಪಡೆ
New Delhi: 5ಜಿ ಸೇವೆಗಾಗಿ ಬಿಎಸ್‌ಎನ್ಎಲ್‌ನಿಂದ ಟೆಂಡರ್ ಆಹ್ವಾನ
KSOU: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ; ಪ್ರವೇಶಾತಿ ಆರಂಭ
Ayushman Bharat; ಎಲ್ಲ ಖಾಸಗಿ ಆಸ್ಪತ್ರೆಗಳ ಸೇರ್ಪಡೆಗೆ ಸಂಸದರ ಸೂಚನೆ
J&K: ವಾಜಪೇಯಿ ಬದುಕಿದ್ದರೆ ಜಮ್ಮು ಕಾಶ್ಮೀರ ಕೇಂದ್ರಾಡಳಿತ ಪ್ರದೇಶವಾಗುತ್ತಿರಲಿಲ್ಲ: ಒಮರ್
Mangaluru: ಪಿಲಿಕುಳ ಮೃಗಾಲಯಕ್ಕೆ “ಏಷ್ಯಾಟಿಕ್ ಗಂಡು ಸಿಂಹ’ ಆಗಮನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.