ಮೈಸೂರು: ಸೋಂಕಿಗೆ ವೃದ್ಧೆ ಬಲಿ
Team Udayavani, Jul 3, 2020, 5:23 AM IST
ಮೈಸೂರು: ಜಿಲ್ಲೆಯಲ್ಲಿ ಕೋವಿಡ್ 19 ಸೋಂಕಿಗೆ ಮತ್ತೋರ್ವ ವೃದ್ಧೆ ಬಲಿಯಾಗಿದ್ದಾರೆ. 60 ವರ್ಷದ ವೃದ್ಧೆ ತೀವ್ರ ಉಸಿರಾಟ ಸಮಸ್ಯೆಯಿಂದ ಬಳಲುತ್ತಿದ್ದ ಇವರನ್ನು ಜಿಲ್ಲಾ ಕೋವಿಡ್ ಆಸ್ಪತ್ರೆಗೆ ದಾಖಲಿಸಿದ್ದು, ಗುರುವಾರ ಮೃತಪಟ್ಟಿದ್ದಾರೆ. ಇದರೊಂದಿಗೆ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 4ಕ್ಕೇರಿದೆ.
17 ಮಂದಿಗೆ ಸೋಂಕು: ಜಿಲ್ಲೆಯಲ್ಲಿ ಗುರುವಾರವೂ 17 ಜನರಿಗೆ ಸೋಂಕು ದೃಢಪಟ್ಟಿದ್ದು, ಸೋಂಕಿತರ ಸಂಖ್ಯೆ 338ಕ್ಕೇರಿದೆ. ಸೋಂಕಿತನ ಸಂಪರ್ಕ ಹೊಂದಿದ್ದ 8 ಜನರಿಗೆ, ಅಂತಾರಾಜ್ಯ ಪ್ರಯಾಣದ ಹಿನ್ನೆಲೆಯ 3, ಅಂತರ ಜಿಲ್ಲೆ ಪ್ರಯಾಣದ ಹಿನ್ನೆಲೆ ಹೊಂದಿರುವ ಒಬ್ಬರಿಗೆ, ಗರ್ಭಿಣಿಯೊಬ್ಬರಿಗೆ ಹಾಗೂ ಇಬ್ಬರು ಪೊಲೀಸರಿಗೆ ಸೋಂಕು ದೃಢಪಟ್ಟಿದೆ.
ಶೀತಜ್ವರ ಮಾದರಿಯ ಅನಾರೋಗ್ಯದಿಂದ (ಐಎಲ್‌ಐ) ಬಳಲುತ್ತಿರುವ ಮತ್ತಿಬ್ಬರಲ್ಲಿ ಸೋಂಕು ಕಾಣಿಸಿಕೊಂಡಿದೆ. ಇವರೆಲ್ಲರನ್ನು ಕೋವಿಡ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. 9 ಕೋವಿಡ್ ರೋಗಿಗಳು ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಒಟ್ಟು 200 ಸೋಂಕಿತರು ಗುಣವಾಗಿದ್ದು, 134 ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಡೀಸಿ ಅಭಿರಾಮ್ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kundapura ದೊಡ್ಡಾಸ್ಪತ್ರೆಗೆ ವೈದ್ಯರ ಕೊರತೆ
Nelamangala: ಐಷಾರಾಮಿ ಕಾರಿನ ಮೇಲೆ ಬಿದ್ದ ಕಂಟೈನರ್… ಒಂದೇ ಕುಟುಂಬದ 6 ಮಂದಿ ಸಾ*ವು
Google Layoffs: ಉನ್ನತ ಹುದ್ದೆಯ ಉದ್ಯೋಗಿಗಳ ವಜಾ: ಗೂಗಲ್ ಸಿಇಒ ಸುಂದರ್ ಪಿಚೈ
Arrest Warrant: ರಾಬಿನ್ ಉತ್ತಪ್ಪ ವಿರುದ್ದ ಬಂಧನ ವಾರೆಂಟ್; ಜೈಲು ಪಾಲಾಗ್ತಾರಾ ಕ್ರಿಕೆಟಿಗ
Mangaluru: ಕರಾವಳಿ ಉತ್ಸವದಲ್ಲಿ ಹೆಲಿಕಾಪ್ಟರ್ ಮೂಲಕ ನಗರದ ದರ್ಶನಕ್ಕೆ ಅವಕಾಶ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.