ಬೀದರ: ಮತ್ತೆ ಕೋವಿಡ್ ಆರ್ಭಟ

Team Udayavani, Jul 3, 2020, 8:59 AM IST

ಬೀದರ: ಮತ್ತೆ ಕೋವಿಡ್ ಆರ್ಭಟ

ಬೀದರ: ಗಡಿ ಜಿಲ್ಲೆ ಬೀದರನಲ್ಲಿ ರಕ್ಕಸ ಕೋವಿಡ್ ಆರ್ಭಟಿಸಿದ್ದು, ಗುರುವಾರ ಯೋಧ ಮತ್ತು ಮೂರು ಜನ ಕೆಎಸ್‌ಆರ್‌ಪಿ ಪೇದೆಗಳು ಸೇರಿ 32 ಪಾಸಿಟಿವ್‌ ಪ್ರಕರಣಗಳು ವರದಿಯಾಗಿದ್ದು, ಇದರೊಂದಿಗೆ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 647ಕ್ಕೆ ತಲುಪಿದೆ.

ಗ್ರಾಮೀಣ ಭಾಗದಲ್ಲಿ ಕೋವಿಡ್‌- 19 ಕರಾಳ ಛಾಯೆ ಆವರಿಸುತ್ತಿರುವುದು ಭೀತಿಯನ್ನು ಹೆಚ್ಚಿಸುತ್ತಿದೆ. ಔರಾದ ತಾಲೂಕಿನಲ್ಲಿ ಅತಿ ಹೆಚ್ಚು 15 ಪ್ರಕರಣಗಳು ಪತ್ತೆಯಾಗಿದ್ದರೆ, ಬೀದರ 8, ಬಸವಕಲ್ಯಾಣ ಮತ್ತು ಭಾಲ್ಕಿ ತಲಾ 4 ಮತ್ತು ಕಮಲನಗರ ತಾಲೂಕಿನಲ್ಲಿ 1 ಸೇರಿ ಒಟ್ಟು 32 ಕೇಸ್‌ ಗಳು ವರದಿಯಾಗಿವೆ. ದೆಹಲಿಯಿಂದ ಸ್ವಗ್ರಾಮ ಬಸವಕಲ್ಯಾಣ ತಾಲೂಕಿನ ಕಲಖೋರಾ ಗ್ರಾಮಕ್ಕೆ ಬಂದಿರುವ ಸಿಆರ್‌ಪಿಎಫ್‌ ಯೋಧ, ನೌಬಾದ್‌ ಕೆಎಸ್‌ಆರ್‌ಪಿಯ ಮೂವರು ಪೇದೆಗಳಿಗೆ ಸೋಂಕು ವಕ್ಕರಿಸಿದೆ.

ಗುರುವಾರ ಪತ್ತೆಯಾಗಿರುವ ಹೊಸ ಪಾಸಿಟಿವ್‌ ಕೇಸ್‌ಗಳಲ್ಲಿ ಔರಾದ ಪಟ್ಟಣ 4, ತಾಲೂಕಿನ ಹಾಲಹಳ್ಳಿ 9, ರಾಯಪಳ್ಳಿ ಮತ್ತು ನಾರಾಯಣಪುರ ಗ್ರಾಮದ ತಲಾ 1 ಕೇಸ್‌ ಸೇರಿ ಒಟ್ಟು 15, ಬೀದರ ನಗರದ 2, ತಾಲೂಕಿನ ಅಮಲಾಪುರ 5, ಇಸ್ಲಾಂಪುರ 1 ಸೇರಿ ಒಟ್ಟು 8, ಬಸವಕಲ್ಯಾಣ ನಗರ, ತಾಲೂಕಿನ ಚಿಕ್ಕನಾಗಾಂವ್‌, ಕಲಖೇರಾ ಮತ್ತು ಧನ್ನೂರ(ಕೆ) ಗ್ರಾಮದ ತಲಾ 1 ಪ್ರಕರಣ ಸೇರಿ ಒಟ್ಟು 4, ಭಾಲ್ಕಿ ತಾಲೂಕಿನ ಚಿಕ್ಕಲಚಂದಾ, ಮದಕಟ್ಟಿ ಮತ್ತು ಕಾಕನಾಳ ಗ್ರಾಮದ ತಲಾ 1 ಹಾಗೂ ಕಮಲನಗರ ಪಟ್ಟಣದಲ್ಲಿ 1 ಪ್ರಕರಣ ವರದಿಯಾಗಿವೆ. ಜಿಲ್ಲೆಯಲ್ಲಿ ಈವರೆಗೆ ಸೋಂಕಿತರ ಸಂಖ್ಯೆ 647 ಆದಂತಾಗಿದೆ. ಅದರಲ್ಲಿ 21 ಜನ ಸಾವನ್ನಪ್ಪಿದ್ದರೆ 500 ಜನ ಗುಣಮುಖರಾಗಿದ್ದು, 126 ಸಕ್ರಿಯ ಪ್ರಕರಣಗಳಿವೆ.

1906 ಜನರ ವರದಿ ಬಾಕಿ: ಜಿಲ್ಲೆಯಲ್ಲಿ ಕೋವಿಡ್ ಶಂಕಿತ 1906 ಮಂದಿಯ ಗಂಟಲು ದ್ರವ ಪರೀಕ್ಷಾ ವರದಿ ಬರಬೇಕಿದೆ. ಈವರೆಗೆ 38,989 ಜನರ ಸ್ಯಾಂಪಲ್‌ನ್ನು ಪರೀಕ್ಷೆಗೆ ಕಳುಹಿಸಲಾಗಿದ್ದು, ಈ ಪೈಕಿ 36,436 ಮಂದಿಯದ್ದು ನೆಗೆಟಿವ್‌ ಬಂದಿದೆ ಎಂದು ಹೆಲ್ತ್‌ ಬುಲೆಟಿನ್‌ ತಿಳಿಸಿದೆ.

ಟಾಪ್ ನ್ಯೂಸ್

Shivaraj Kumar: ಶಿವರಾಜ್‌ ಕುಮಾರ್‌ ಅವರ ಆಪರೇಷನ್‌ ಯಶಸ್ವಿಯಾಗಿದೆ – ಪತ್ನಿ ಗೀತಾ ಮಾಹಿತಿ

Shivaraj Kumar: ಶಿವರಾಜ್‌ ಕುಮಾರ್‌ ಅವರ ಆಪರೇಷನ್‌ ಯಶಸ್ವಿಯಾಗಿದೆ – ಪತ್ನಿ ಗೀತಾ ಮಾಹಿತಿ

5-mudigere

Mudigere: ಆಕಸ್ಮಿಕ ಬೆಂಕಿ ತಗುಲಿ ಕಟ್ಟಡದಲ್ಲಿದ್ದ ಫೈನಾನ್ಸ್ ಕಚೇರಿಗೆ ಬೆಂಕಿ ಸುಟ್ಟು ಭಸ್ಮ

Afghanistan: ತಾಲಿಬಾನ್‌ ನೆಲೆಗಳ ಮೇಲೆ ಪಾಕಿಸ್ತಾನ ವೈಮಾನಿಕ ದಾಳಿ; 25ಕ್ಕೂ ಅಧಿಕ ಸಾ*ವು

Afghanistan: ತಾಲಿಬಾನ್‌ ನೆಲೆಗಳ ಮೇಲೆ ಪಾಕಿಸ್ತಾನ ವೈಮಾನಿಕ ದಾಳಿ? 25ಕ್ಕೂ ಅಧಿಕ ಸಾ*ವು

4-max

Max: ಇಂದು ಸುದೀಪ್‌ ಮ್ಯಾಕ್ಸ್‌ ತೆರೆಗೆ; ಆ್ಯಕ್ಷನ್‌ ಅಡ್ಡದಲ್ಲಿ ಕಿಚ್ಚ ಮಿಂಚು

3-

Gundlupete: ಬೋನಿಗೆ ಬಿದ್ದ ಗಂಡು ಚಿರತೆ

2-

Ayodhya ರಾಮನ ದರ್ಶನ ಪಡೆದಿದ್ದ “ಬಸಪ್ಪ” ಈಗ ಶಬರಿಮಲೆಗೆ ಪ್ರಯಾಣ!

ICC U19 ವನಿತಾ ಟಿ20 ವಿಶ್ವಕಪ್‌: ಭಾರತಕ್ಕೆ ನಿಕಿ ಪ್ರಸಾದ್‌ ನಾಯಕಿ

ICC U19 ವನಿತಾ ಟಿ20 ವಿಶ್ವಕಪ್‌: ಭಾರತಕ್ಕೆ ನಿಕಿ ಪ್ರಸಾದ್‌ ನಾಯಕಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ

Bidar: ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ

police

Bidar:ವಿ*ಷ ಸೇವಿಸಿ ಆತ್ಮಹ*ತ್ಯೆಗೆ ಯತ್ನಿಸಿದ ಕಾರಂಜಾ ಸಂತ್ರಸ್ತರು

ಮಾಜಿ ಉಪ ಸಭಾಪತಿ ಶತಾಯುಷ್ಸಿ ಕೇಶವರಾವ ನಿಟ್ಟೂರಕರ ಅಸ್ತಂಗತ

Bidar: ಮಾಜಿ ಉಪ ಸಭಾಪತಿ ಶತಾಯುಷಿ ಕೇಶವರಾವ ನಿಟ್ಟೂರಕರ ಅಸ್ತಂಗತ

police

Bidar: ಕಾರಂಜಾ ಸಂತ್ರಸ್ತರಿಂದ ಆತ್ಮಹ*ತ್ಯೆ ಅಣಕು ಪ್ರದರ್ಶನ: ಹಲವರು ವಶಕ್ಕೆ

ಹಿಂದೂ ಸಮಾವೇಶಕ್ಕೆ ನಿರ್ಬಂಧ ಹೇರಿದ ಜಿಲ್ಲಾಡಳಿತದ ವಿರುದ್ದ ಆಕ್ರೋಶ

Bidar: ಹಿಂದೂ ಸಮಾವೇಶಕ್ಕೆ ನಿರ್ಬಂಧ ಹೇರಿದ ಜಿಲ್ಲಾಡಳಿತದ ವಿರುದ್ದ ಆಕ್ರೋಶ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Shivaraj Kumar: ಶಿವರಾಜ್‌ ಕುಮಾರ್‌ ಅವರ ಆಪರೇಷನ್‌ ಯಶಸ್ವಿಯಾಗಿದೆ – ಪತ್ನಿ ಗೀತಾ ಮಾಹಿತಿ

Shivaraj Kumar: ಶಿವರಾಜ್‌ ಕುಮಾರ್‌ ಅವರ ಆಪರೇಷನ್‌ ಯಶಸ್ವಿಯಾಗಿದೆ – ಪತ್ನಿ ಗೀತಾ ಮಾಹಿತಿ

5-mudigere

Mudigere: ಆಕಸ್ಮಿಕ ಬೆಂಕಿ ತಗುಲಿ ಕಟ್ಟಡದಲ್ಲಿದ್ದ ಫೈನಾನ್ಸ್ ಕಚೇರಿಗೆ ಬೆಂಕಿ ಸುಟ್ಟು ಭಸ್ಮ

Afghanistan: ತಾಲಿಬಾನ್‌ ನೆಲೆಗಳ ಮೇಲೆ ಪಾಕಿಸ್ತಾನ ವೈಮಾನಿಕ ದಾಳಿ; 25ಕ್ಕೂ ಅಧಿಕ ಸಾ*ವು

Afghanistan: ತಾಲಿಬಾನ್‌ ನೆಲೆಗಳ ಮೇಲೆ ಪಾಕಿಸ್ತಾನ ವೈಮಾನಿಕ ದಾಳಿ? 25ಕ್ಕೂ ಅಧಿಕ ಸಾ*ವು

4-max

Max: ಇಂದು ಸುದೀಪ್‌ ಮ್ಯಾಕ್ಸ್‌ ತೆರೆಗೆ; ಆ್ಯಕ್ಷನ್‌ ಅಡ್ಡದಲ್ಲಿ ಕಿಚ್ಚ ಮಿಂಚು

3-

Gundlupete: ಬೋನಿಗೆ ಬಿದ್ದ ಗಂಡು ಚಿರತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.