ಡಿಕೆಶಿ ಪದಗ್ರಹಣ ವೀಕ್ಷಣೆ; ಸಂಭ್ರಮ
Team Udayavani, Jul 3, 2020, 8:55 AM IST
ಬಂಟ್ವಾಳ: ಡಿ.ಕೆ. ಶಿವಕುಮಾರ್ ಪದಗ್ರಹಣ ಕಾರ್ಯಕ್ರಮದ ನೇರಪ್ರಸಾರವನ್ನು ಮಾಜಿ ಸಚಿವ ಬಿ. ರಮಾನಾಥ ರೈ ಅವರು ತನ್ನ ನಿವಾಸದಲ್ಲಿ ದೀಪ ಬೆಳಗಿಸಿ ಉದ್ಘಾಟಿಸಿದರು. ಪಕ್ಷದ ನಾಯಕರು ಉಪಸ್ಥಿತರಿದ್ದರು.
ಮಂಗಳೂರು: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ನೂತನ ಅಧ್ಯಕ್ಷರಾಗಿ ಡಿ.ಕೆ. ಶಿವಕುಮಾರ್ ಅವರ ಅಧಿಕಾರ ಸ್ವೀಕಾರ ಕಾರ್ಯಕ್ರಮವನ್ನು ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಕಾಂಗ್ರೆಸ್ ಕಾರ್ಯಕರ್ತರು, ಅಭಿಮಾನಿಗಳು ವೀಕ್ಷಿಸಿ ಸಂಭ್ರಮಿಸಿದರು. ವರ್ಚುವಲ್ ತಂತ್ರಜ್ಞಾನ ಬಳಸಿ ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಗುರುವಾರ ನಡೆದ ಸಮಾರಂಭದ ನೇರಪ್ರಸಾರವನ್ನು ಪ್ರತಿಯೊಂದು ವಾರ್ಡ್, ಗ್ರಾ.ಪಂ. ಮಟ್ಟದಲ್ಲಿ ಅಲ್ಲಲ್ಲಿ ಟಿವಿ, ಎಲ್‌ಇಡಿ ಪರದೆ ಹಾಗೂ ಝೂಮ್ ಆ್ಯಪ್ ಹಾಗೂ ಸಾಮಾಜಿಕ ಜಾಲತಾಣಗಳ ಮೂಲಕ ವೀಕ್ಷಿಸಿದರು. ಜಿಲ್ಲೆಯಲ್ಲಿ ಒಟ್ಟು 215 ಕಡೆಗಳಲ್ಲಿ ವೀಕ್ಷಣೆಗೆ ವ್ಯವಸ್ಥೆ ಮಾಡಲಾಗಿತ್ತು.
ಜಿಲ್ಲೆಯ ಎಲ್ಲ 16 ಬ್ಲಾಕ್ ಕಾಂಗ್ರೆಸ್ ಸಮಿತಿ ಮಟ್ಟದಲ್ಲಿ ಹಾಗೂ ಪಂಚಾಯತ್ ಮಟ್ಟದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು, ಪದಾಧಿಕಾರಿಗಳು, ವಿವಿಧ ಘಟಕಗಳ ಅಧ್ಯಕ್ಷರು, ಪ್ರಮುಖರು ಹಾಗೂ ಪಕ್ಷದ ಜನಪ್ರತಿನಿಧಿಗಳ ನೇತೃತ್ವದಲ್ಲಿ ಕಾರ್ಯಕ್ರಮ ವೀಕ್ಷಣೆ ವ್ಯವಸ್ಥೆಗೊಳಿಸಲಾಗಿತ್ತು. ಕಾರ್ಯಕ್ರಮದ ಉಸ್ತುವಾರಿಗಾಗಿ ಪ್ರತೀ ಬ್ಲಾಕ್‌ಗೂ ಜಿಲ್ಲಾ ಕಾಂಗ್ರೆಸ್‌ನಿಂದ ಹಾಗೂ ಕೆಪಿಸಿಸಿಯಿಂದ ಓರ್ವ ವೀಕ್ಷಕರನ್ನು ನೇಮಕಗೊಳಿಸಲಾಗಿತ್ತು. ಬೆಂಗಳೂರಿನ ಕಾರ್ಯಕ್ರಮದಂತೆ ದೀಪ ಬೆಳಗಿಸುವುದು, ವಂದೇ ಮಾತರಂ ಗೀತೆ, ಪ್ರತಿಜ್ಞಾ ಸ್ವೀಕಾರ ಕಾರ್ಯಕ್ರಮಗಳು ಎಲ್ಲ ಕಡೆಗಳಲ್ಲಿ ಜರಗಿತು. ಈ ಕಾರ್ಯಕ್ರಮಕ್ಕಾಗಿ ಡಿಜಟಲ್ ಯೂತ್‌ಗಳ ನೇಮಕ ಮಾಡಲಾಗಿತ್ತು.
ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಮಿಥುನ್ ರೈ, ಮಾಜಿ ಶಾಸಕ ಜೆ.ಆರ್.ಲೋಬೋ ಸೇರಿದಂತೆ ಪಕ್ಷದ ಪ್ರಮುಖ ನಾಯ
ಕರು, ಜಿಲ್ಲಾ ಕಾಂಗ್ರೆಸ್ ಪದಾಧಿಕಾರಿಗಳು ಕಾರ್ಯಕರ್ತರು ಸೇರಿ ಕಾರ್ಯಕ್ರಮವನ್ನು ವೀಕ್ಷಿಸಿ ಪ್ರತಿಜ್ಞೆ ಸ್ವೀಕರಿಸಿದರು. ಬಂಟ್ವಾಳದಲ್ಲಿ ಮಾಜಿ ಸಚಿವ ಬಿ. ರಮಾನಾಥ ರೈ ಅವರು ಕಳ್ಳಿಗೆಯಲ್ಲಿ ತನ್ನ ನಿವಾಸದಲ್ಲಿ ಕಾರ್ಯಕರ್ತರ ಜತೆ ಪದಗ್ರಹಣ ಕಾರ್ಯಕ್ರಮ ವೀಕ್ಷಿಸಿ ಪ್ರತಿಜ್ಞೆ ಸ್ವೀಕರಿಸಿದರು. ಮೂಡುಬಿದಿರೆಯಲ್ಲಿ ಮಾಜಿ ಸಚಿವ ಅಭಯಚಂದ್ರ ಜೈನ್ ನೇತೃತ್ವದಲ್ಲಿ ವೀಕ್ಷಣೆಗೆ ವ್ಯವಸ್ಥೆಗೊಳಿಸಲಾಗಿತ್ತು. ಮಂಗಳೂರು, ಮಂಗಳೂರು ದಕ್ಷಿಣ ಹಾಗೂ ಉತ್ತರ ಬಂಟ್ವಾಳ, ಪುತ್ತೂರು, ಸುಳ್ಯ ಹಾಗೂ ಬೆಳ್ತಂಗಡಿ, ಮೂಡಬಿದಿರೆ, ವಿಧಾನಸಭಾ ಕ್ಷೇತ್ರ ಗಳಲ್ಲಿ ಬ್ಲಾಕ್ ಕಾಂಗ್ರೆಸ್ ನೇತೃತ್ವದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು ಉಸ್ತುವಾರಿಯೊಂದಿಗೆ ಕೆಪಿಸಿಸಿ ಹಾಗೂ ಜಿಲ್ಲಾ ಕಾಂಗ್ರೆಸ್ ನಿಯೋಜಿತ ವೀಕ್ಷಕರ ಉಪಸ್ಥಿತಿಯೊಂದಿಗೆ ವಿವಿಧೆಡೆ ಪದಗ್ರಹಣ ವೀಕ್ಷಣೆಗೆ ವ್ಯವಸ್ಥೆಗೊಳಿಸಲಾಗಿತ್ತು. ಬೆಳ್ತಂಗಡಿಯಲ್ಲಿ ಮಾಜಿ ಶಾಸಕ ಕೆ. ವಸಂತ ಬಂಗೇರ, ಪುತ್ತೂರಿನಲ್ಲಿ ಮಾಜಿ ಶಾಸಕಿ ಶಕುಂತಳಾ ಶೆಟ್ಟಿ, ಸುಳ್ಯದಲ್ಲಿ ಕೆಪಿಸಿಸಿ ಸದಸ್ಯ ಡಾ| ರಘು, ಮಾಜಿ ಶಾಸಕ ಕುಶಲ ಹಾಗೂ ವಿವಿಧ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು, ಜನಪ್ರತಿನಿಧಿಗಳು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
SC;ಪ್ರಕರಣಗಳ ವರ್ಗಾವಣೆ:ಪ್ರತಿಕ್ರಿಯಿಸಲು ಯಾಸಿನ್ ಮಲಿಕ್ ಸೇರಿ ಐವರಿಗೆ 2 ವಾರ ಕಾಲಾವಕಾಶ
ರಿವರ್ಸ್ ತೆಗೆಯುವಾಗ ಸಮುದ್ರಕ್ಕೆ ಬಿದ್ದ ಕಾರು… ನೌಕಾಪಡೆ ಅಧಿಕಾರಿ ಪಾರು, ಚಾಲಕ ನಾಪತ್ತೆ
Cold Weather: ಕೊನೆಗೂ ಚಳಿ ಶುರು ಆಯ್ತು ಗುರು
Ambedkar remarks; ಅಮಿತ್ ಶಾ ರಾಜೀನಾಮೆ ನೀಡಬೇಕು: ಕಾಂಗ್ರೆಸ್ ಒತ್ತಾಯ
BBK11: ಗೆಲ್ಲಲೇ ಬೇಕಾದ ಟಾಸ್ಕ್‌ನಲ್ಲಿ ಎಡವಿದ ಚೈತ್ರಾ.. ನನ್ನಿಂದ ಆಗಲ್ಲವೆಂದು ಕಣ್ಣೀರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.