ಕೆಎಸ್‌ಆರ್‌ಪಿ ಪೇದೆಗೂ ತಗುಲಿತು ಸೋಂಕು
Team Udayavani, Jul 3, 2020, 3:45 PM IST
ಬೆಳಗಾವಿ: ಕೋವಿಡ್ ಅಟ್ಟಹಾಸ ದಿನದಿಂದ ದಿನಕ್ಕೂ ಜಿಲ್ಲೆಯಲ್ಲಿ ವ್ಯಾಪಿಸುತ್ತಿದ್ದು, 45 ವರ್ಷದ ವ್ಯಕ್ತಿ ಕೊರೊನಾಗೆ ಬಲಿಯಾಗುವುದರ ಜತೆಗೆ ಮತ್ತೆ 7 ಹೊಸ ಪ್ರಕರಣಗಳು ಗುರುವಾರ ದೃಢಪಟ್ಟಿವೆ.
ಪತ್ತೆಯಾದ 7 ಜನರ ಪೈಕಿ ಬೆಳಗಾವಿ ನಗರದ 46 ವರ್ಷದ ಕೆಎಸ್‌ಆರ್‌ಪಿ ಪೇದೆಗೂ ಸೋಂಕು ತಗುಲಿದೆ. ಪೇದೆ ನಿಪ್ಪಾಣಿ ಬಳಿಯ ಕೊಗನೊಳ್ಳಿ ಚೆಕ್ ಪೋಸ್ಟ್‌ನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ಕರ್ತವ್ಯ ಮುಗಿಸಿ ಬಂದ ಬಳಿಕ ಕ್ವಾರಂಟೈನ್‌ನಲ್ಲಿ ಇಡಲಾಗಿತ್ತು. ಜೂ.30ರಂದು ಗಂಟಲು ದ್ರವ ಮಾದರಿ ಸಂಗ್ರಹಿಸಿ ಪ್ರಯೋಗಾಲಯಕ್ಕೆ ಕಳುಹಿಸಲಾಗಿತ್ತು. ಕೇರಳ ರಾಜ್ಯದಿಂದ ಬಂದ 27 ವರ್ಷದ ಯುವಕ, ಮಹಾರಾಷ್ಟ್ರದಿಂದ ಆಗಮಿಸಿದ್ದ 35 ವರ್ಷದ ವ್ಯಕ್ತಿ, ಗುಜರಾತ್‌ದಿಂದ ಬಂದ 54 ವರ್ಷದ ವ್ಯಕ್ತಿ, ಮಹಾರಾಷ್ಟ್ರದಿಂದ ಆಗಮಿಸಿದ್ದ 52 ವರ್ಷದ ವ್ಯಕ್ತಿ ಬೆಳಗಾವಿ ನಗರಕ್ಕೆ ಆಗಮಿಸಿದ್ದರು. ಗೋಕಾಕನ 8 ವರ್ಷದ ಬಾಲಕಿಗೆ ಸೋಂಕು ದೃಢವಾಗಿದೆ.
ಜತೆಗೆ 45 ವರ್ಷದ ಅಥಣಿಯ ವ್ಯಕ್ತಿ ಕೋವಿಡ್ ದಿಂದ ಬಲಿಯಾಗಿದ್ದಾರೆ. ಈ ಹೊಸ ಎಂಟು ಪ್ರಕರಣಗಳಿಂದ ಜಿಲ್ಲೆಯಲ್ಲಿ 338 ಸೋಂಕಿತರು ಆಗಿದ್ದು, ಇದರ ಪೈಕಿ 306 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ಜಿಲ್ಲಾಸ್ಪತ್ರೆಯಲ್ಲಿರುವ ಕೋವಿಡ್ -19 ವಾರ್ಡ್ ನಲ್ಲಿ ಸದ್ಯ 29 ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ. ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 345ಕ್ಕೇರಿದ್ದು, ಇದರಲ್ಲಿ 306 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ.
ಜಿಲ್ಲಾಸ್ಪತ್ರೆಯಲ್ಲಿರುವ ಕೋವಿಡ್-19 ವಾರ್ಡ್‌ನಲ್ಲಿ ಸದ್ಯ 35 ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಜಿಲ್ಲಾ ವೈದ್ಯಕೀಯ ವರದಿ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belgavi;ಸುವರ್ಣ ವಿಧಾನ ಸೌಧದ ಸುತ್ತ ನಿಷೇಧಾಜ್ಞೆ
Belagavi: ಸಿಪಿಐ ಕಿರುಕುಳ ಆರೋಪ; ಆತ್ಮಹತ್ಯೆಗೆ ಯತ್ನಿಸಿದ್ದ ಪೊಲೀಸ್ ಪೇದೆ ರಕ್ಷಣೆ
Belagavi: ಯುವಕನ ಮೇಲೆ ಗುಂಡಿನ ದಾಳಿ… ಸ್ಥಳದಲ್ಲಿ ಬಿಗುವಿನ ವಾತಾವರಣ
Belagavi; ಕಿತ್ತೂರು ರಾಣಿ ಚನ್ನಮ್ಮ ಕಿರು ಮೃಗಾಲಯದಲ್ಲಿದ್ದ ಹುಲಿ ಶೌರ್ಯ ಇನ್ನಿಲ್ಲ
Chennamman-Kittur: ಯೋಧ ನರೇಶ ಯಲ್ಲಪ್ಪ ಅಗಸರ ಕೆರೆಗೆ ಹಾರಿ ಆತ್ಮಹತ್ಯೆ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Puttur: ಮಾದಕ ಪದಾರ್ಥ ಸಹಿತ ಆರೋಪಿ ಸೆರೆ
Udupi; ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷರಾಗಿ ರಮೇಶ್ ಕಾಂಚನ್ ಆಯ್ಕೆ
Road Mishap: ಬೀದರ್ ನಲ್ಲಿ ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಮೃತ್ಯು, ಮಹಿಳೆ ಗಂಭೀರ
Belgavi;ಸುವರ್ಣ ವಿಧಾನ ಸೌಧದ ಸುತ್ತ ನಿಷೇಧಾಜ್ಞೆ
Maharashtra ಮತದಾನ ಮುಗಿದ ನಂತರ 7% ಹೆಚ್ಚಳ : ECI ಸ್ಪಷ್ಟಪಡಿಸಬೇಕು ಎಂದ ಕಾಂಗ್ರೆಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.