ಪುರಸಭೆ ಆಸ್ತಿ ಒತ್ತುವರಿ ತೆರವಿಗೆ ಕ್ರಮ
Team Udayavani, Jul 4, 2020, 5:35 AM IST
ಕೆ.ಆರ್.ನಗರ: ವಿನಾಯಕ ಬಡಾವಣೆಯಲ್ಲಿ ಪುರಸಭೆ ಆಸ್ತಿ ಒತ್ತುವರಿಯನ್ನು ಪುರಸಭೆ ಅಧಿಕಾರಿಗಳು ತೆರವುಗೊಳಿಸಿದರು. ಬಡಾವಣೆಯಲ್ಲಿ ಉದ್ಯಾನವನಕ್ಕೆ ಮೀಸಲಿಟ್ಟ ಸ್ಥಳದಲ್ಲಿ ಪುರಸಭೆ ನಾಮಫಲಕ ಅಳವಡಿಸಿತ್ತು. ಆದರೆ, ಬಡಾವಣೆಯ ಮುದ್ದುಕುಮಾರ್ ಈ ಸ್ಥಳ ತನಗೆ ಸೇರಿದ್ದು ಹಾಗೂ ನನ್ನ ಪರ ನ್ಯಾಯಾಲಯದಿಂದ ತೀರ್ಪು ಬಂದಿದೆ ಎಂದು ನಾಮಫಲಕ ತೆರವುಗೊಳಿಸಿ ಜಾಗ ಸಮತಟ್ಟು ಮಾಡಿಸಿದ್ದರು.
ಇದನ್ನು ಗಮನಿಸಿದ ವಾರ್ಡಿನ ಪುರಸಭೆ ಸದಸ್ಯ ಪ್ರಕಾಶ್ ಸೇರಿದಂತೆ ಬಡಾವಣೆಯ ನಿವಾಸಿಗಳು ಪುರಸಭೆ ಅಧಿಕಾರಿಗಳಿಗೆ ದೂರು ನೀಡಿ ಅಕ್ರಮ ಒತ್ತುವರಿ ತೆರವುಗೊಳಿಸಿ ಕಾನೂನು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದರು. ಸ್ಥಳಕ್ಕೆ ಆಗಮಿಸಿದ ಪುರಸಭೆ ಎಂಜಿನಿಯರ್ ಪುಟ್ಟಸ್ವಾಮಿ, ಪರಿಸರಎಂಜಿನಿಯರ್ ರವಿಕುಮಾರ್ ಮತ್ತು ಸಿಬ್ಬಂದಿ ಪುರಸಭೆ ಹಾಕಿರುವ ನಾಮಫಲಕ ತೆಗೆದು ಅಕ್ರಮ ಪ್ರವೇಶ ಮಾಡಿರುವುದು ಸರಿಯಲ್ಲ ಎಂದು ತರಾಟೆಗೆ ತೆಗೆದುಕೊಂಡು ಜಾಗವನ್ನು ಅಳತೆ ಮಾಡಿ ಸುತ್ತಲೂ ಚರಂಡಿ ನಿರ್ಮಾಣ ಮಾಡಿ ಕಲ್ಲುಕಂಬ ನೆಡಲು ಮುಂದಾದರು.
ಈ ಸಂದರ್ಭದಲ್ಲಿ ಅಧಿಕಾರಿಗಳ ವಿರುದ ತಿರುಗಿಬಿದ್ದ ಮುದ್ದುಕುಮಾರ್ ಕೋರ್ಟ್‌ನಲ್ಲಿ ಜಾಗ ನಮ್ಮದೆಂದು ತೀರ್ಪು ಬಂದಿದೆ ಎಂದು ಕಾಮಗಾರಿಗೆ ತಡೆಯೊಡ್ಡಿದರು. ಈ ವೇಳೆ ಪುರಸಭೆ ಅಧಿಕಾರಿಗಳು ಪೊಲೀಸರಿಗೆ ದೂರು ನೀಡಿ, ಸದರಿ ಸ್ಥಳದಲ್ಲಿ ಚರಂಡಿ ನೀರು ಹರಿಯುವ ರಾಜ ಕಾಲುವೆ ಇದೆ. ಜತೆಗೆ ಪಾರ್ಕ್ ನಿರ್ಮಾಣ, ಅಂಗನವಾಡಿ, ಕುಡಿಯುವ ನೀರಿನ ಘಟಕ ನಿರ್ಮಾಣಕ್ಕೆ ಸ್ಥಳ ಮೀಸಲಿರಿಸಲಾಗಿದೆ ಎಂದು ತಿಳಿಸಿದರು. ಈ ವೇಳೆ ಪುರಸಭಾ ಸದಸ್ಯರಾದ ಪ್ರಕಾಶ್, ಕೆ.ಎಲ್. ಜಗದೀಶ್ ಬಡಾವಣೆ ಮುಖಂಡರಾದ ಮಲ್ಲಪ್ಪ, ಚಂದ್ರಕಾಂತ್, ಸ್ವಾಮಿ, ಮಂಜುನಾಥ್, ಜಿಪಂ ಮಾಜಿ ಸದಸ್ಯ ಜಯರಾಮ್, ತಿಮ್ಮಶೆಟ್ಟಿ, ಕುಮಾರ್, ಕೆ.ಎಲ್. ಕೃಷ್ಣಯ್ಯ ಮತ್ತಿತರರು ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Black Days: ಜಮೀರ್+ ನಾಲ್ವರು ಕೊಚ್ಚೆ, ದೂರ ಇಟ್ಟಿದ್ದೇನೆ: ಎಚ್.ಡಿ.ಕುಮಾರಸ್ವಾಮಿ
Hunsur: ಅಪ್ರಾಪ್ತ ಬಾಲಕಿ ಗರ್ಭಿಣಿ ಪ್ರಕರಣ; ಯುವಕನ ಬಂಧನ
MUDA: ಇ.ಡಿ.ಯಿಂದ ಮಾಜಿ ಅಧ್ಯಕ್ಷ ಮರಿಗೌಡ ಸುದೀರ್ಘ 9 ಗಂಟೆ ವಿಚಾರಣೆ
ನನ್ನ ಮುಟ್ಟಿದರೆ ಜನ ಸುಮ್ಮನಿರಲಾರರು: ವಿಪಕ್ಷಕ್ಕೆ ಸಿಎಂ ಸಿದ್ದರಾಮಯ್ಯ ಎಚ್ಚರಿಕೆ
MUDA CASE: ಸುಳ್ಳು ಆರೋಪಗಳ ಮೇಲೆ ಇ.ಡಿ. ತನಿಖೆ: ಸಿಎಂ ಬೇಸರ
MUST WATCH
ಹೊಸ ಸೇರ್ಪಡೆ
Pushpa 2 trailer: ಪೈಸಾ ವಸೂಲ್ ಅವತಾರದಲ್ಲಿ ʼಪುಷ್ಪರಾಜ್ʼ; ಅಲ್ಲು ಭರ್ಜರಿ ಆ್ಯಕ್ಷನ್
Chikkamagaluru: ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳ ಬಂಧನ
Raj Thackeray ಮಹಾ ಫಲಿತಾಂಶದ ನಂತರ ಪ್ರಮುಖ ಪಾತ್ರ ವಹಿಸಲಿದ್ದಾರೆ: ನಂದಗಾಂವ್ಕರ್
Ration Card: ಅನರ್ಹರಿಗೆ ಬಿಪಿಎಲ್ ಕಾರ್ಡ್ ಕೊಡಲ್ಲ, ಅರ್ಹರಿಗೆ ತಪ್ಪಿಸಲ್ಲ: ಸಿದ್ದರಾಮಯ್ಯ
ಈ ಎಲೆಯಿಂದ ಮಾಡುವ ಖಾದ್ಯ ಆರೋಗ್ಯಕ್ಕೂ ಉತ್ತಮ… ಅದ್ಯಾವ ಎಲೆ ಅಂತೀರಾ ಇಲ್ಲಿದೆ ರೆಸಿಪಿ…
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.