ತುಮಕೂರು: ಸೋಂಕಿತರ ಸಂಖ್ಯೆ 208ಕ್ಕೆ ಏರಿಕೆ
Team Udayavani, Jul 4, 2020, 6:47 AM IST
ತುಮಕೂರು: ಕೋವಿಡ್ 19 ವೈರಸ್ ತನ್ನ ಅಟ್ಟಹಾಸವನ್ನು ಮುಂದುವರೆಸಿದ್ದು, ಶುಕ್ರ ವಾರ ಒಂದೇ ದಿನ 25 ಜನರಿಗೆ ಸೋಂಕು ದೃಢವಾಗಿದ್ದು ಸೋಂಕಿತರ ಸಂಖ್ಯೆ 208 ಕ್ಕೇರಿಕೆಯಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ನಾಗೇಂದ್ರಪ್ಪ ತಿಳಿಸಿದ್ದಾರೆ. ಶುಕ್ರವಾರ ಮಧುಗಿರಿಯಲ್ಲಿ 12 ಜನರಿಗೆ ಸೋಂಕು ದೃಢಪಟ್ಟಿದ್ದು ಅತಿ ಹೆಚ್ಚು ಪ್ರಕರಣ ವರದಿಯಾಗಿದೆ.
ಉಳಿ ದಂತೆ ಕುಣಿಗಲ್-2, ಕೊರಟಗೆರೆ- 3, ಪಾವಗಡ-1. ಶಿರಾ-2, ತುಮ ಕೂರು-4, ತುರುವೇಕೆರೆ-1 ಜನರಿಗೆ ಕೋವಿಡ್ 19 ದೃಢವಾಗಿದೆ. ಜಿಲ್ಲೆಯಲ್ಲಿ ಈವರೆಗೆ 19,540 ಜನರ ಗಂಟಲು ದ್ರವ ಪರೀಕ್ಷೆ ಮಾಡಲಾಗಿದ್ದು, ಅದರಲ್ಲಿ 15,756 ಜನರಿಗೆ ನೆಗೆಟಿವ್ ಎಂದು ವರದಿ ಬಂದಿದೆ. ಅದರಲ್ಲಿ ನಿಗಾ ವಣೆಯಲ್ಲಿ 1395 ಜನರಿದ್ದು ಸೋಂಕಿತರ ಪ್ರಥಮ ಸಂಪರ್ಕದಲ್ಲಿ 566, ದ್ವೀತಿಯ ಸಂಪರ್ಕದಲ್ಲಿ 829 ಜನರಿದ್ದಾರೆ.
ಶುಕ್ರವಾರ ಒಂದೇ ದಿನ 25 ಪ್ರಕರಣಗಳು ಬೆಳಕಿಗೆ ಬಂದ ಪರಿಣಾಮ ಒಟ್ಟು ಸೋಂಕಿತರು 208ಕ್ಕೇರಿಕೆ ಯಾಗಿದೆ ಅದರಲ್ಲಿ 60 ಜನ ಗುಣಮುಖರಾಗಿದ್ದಾರೆ. ಇನ್ನೂ ಜಿಲ್ಲಾ ಕೋವಿಡ್ ಆಸ್ಪತ್ರೆಯಲ್ಲಿ 141 ಜನರು ಚಿಕಿತ್ಸೆ ಪಡೆಯುತ್ತಿದ್ದಾರೆ. ಐಸಿ ಯುನಲ್ಲಿ 4 ಜನ ಚಿಕಿತ್ಸೆ ಪಡೆಯುತ್ತಿದ್ದಾರೆ. ಜಿಲ್ಲೆಯಲ್ಲಿ ದಿನೇ ದಿನೆ ಸೋಂಕು ಹೆಚ್ಚುತ್ತಲೇ ಇದ್ದು ನಗರದಲ್ಲಿ ಮಾತ್ರ ಕಾಣಿಸಿಕೊಳ್ಳುತ್ತಿದ್ದ ಕೋವಿಡ್ 19 ಈಗ ಗ್ರಾಮಗಳಲ್ಲಿ ಕಾಣಿಸುತ್ತಿದ್ದು ಸಮುದಾಯದಲ್ಲಿ ರೋಗ ಹೆಚ್ಚು ಹರಡುತ್ತಿದ್ದು ಲ್ಯಾಬ್‌ನಿಂದ ಇನ್ನೂ ಸಾವಿರಾರು ವರದಿಗಳು ಬರಬೇಕಿದ್ದು ಇನ್ನು ಎಷ್ಟು ಜನರಿಗೆ ಸೋಂಕು ಇರುವುದೋ ಎನ್ನುವ ಆತಂಕ ಜನರಲ್ಲಿ ಮೂಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi: ಕೋಟಿ ಗೀತಾ ಲೇಖನ ಯಜ್ಞ: 500ಕ್ಕೂ ಹೆಚ್ಚು ವಿದ್ಯಾರ್ಥಿಗಳು, ಸಿಬ್ಬಂದಿಯಿಂದ ದೀಕ್ಷೆ
Caste ನೋಡಿ ಮತ ಹಾಕಿದರೆ ಸಮಾಜದಲ್ಲಿ ಬದಲಾವಣೆ ಅಸಾಧ್ಯ : ಸಿಎಂ ಸಿದ್ದರಾಮಯ್ಯ
Tumkur: ತುಮಕೂರಲ್ಲಿ ದಲಿತ ಮಹಿಳೆ ಹ*ತ್ಯೆ: 21 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ
Road Mishap: ಚಲಿಸುತ್ತಿದ್ದ ಲಾರಿಗೆ ಕಾರು ಢಿಕ್ಕಿ: ತಂದೆ-ಮಗು ಸ್ಥಳದಲ್ಲೇ ಸಾವು
Maharashtra ಸರಕಾರ ವಿರುದ್ಧ ಮಾನನಷ್ಟ ಕೇಸ್: ಸಚಿವ ಡಾ| ಜಿ. ಪರಮೇಶ್ವರ್
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Video: ನೋಟಿನ ಮಾಲೆಯಲ್ಲಿ ನೋಟು ಎಗರಿಸಿ ಕಳ್ಳ… ಮದುವೆ ಬಿಟ್ಟು ಕಳ್ಳನ ಹಿಂದೆ ಓಡಿದ ವರ
Sudeep: ʼಮ್ಯಾಕ್ಸ್ʼ ರಿಲೀಸ್ ದಿನ ಫಿಕ್ಸ್: ಕಿಚ್ಚನ ಸಿಟ್ಟಿಗೆ ಎಚ್ಚೆತ್ತ ನಿರ್ಮಾಣ ಸಂಸ್ಥೆ
Bidar: ಭಾರತದಿಂದಲೇ ವಕ್ಫ್ ತೊಲಗಿಸಬೇಕು: ಯತ್ನಾಳ್
Veerendra Heggade: ಡಾ.ಡಿ.ವೀರೇಂದ್ರ ಹೆಗ್ಗಡೆಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ ಪ್ರಶಸ್ತಿ
Sambhal Case Follow Up:ಹೊರಗಿನವರಿಗೆ ಸಂಭಾಲ್ ಪ್ರವೇಶಕ್ಕೆ ನಿರ್ಬಂಧ,ಜಲ್ಲಿ ಮಾರಾಟ ನಿಷೇಧ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.