ಸ್ಥಳೀಯ ಸಂಸ್ಥೆ ಪಾತ್ರ ಮಹತ್ವದ್ದು


Team Udayavani, Jul 4, 2020, 11:21 AM IST

04-July-04

ಹೊನ್ನಾಳಿ: ತಿಮ್ಲಾಪುರ ಗ್ರಾಮ ಪಂಚಾಯತ್‌ ಕಟ್ಟಡವನ್ನು ಸಂಸದ ಜಿ.ಎಂ. ಸಿದ್ದೇಶ್ವರ್‌ ಉದ್ಘಾಟಿಸಿದರು

ಹೊನ್ನಾಳಿ: ಸರ್ಕಾರದ ಯೋಜನೆಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸುವಲ್ಲಿ ಸ್ಥಳೀಯ ಸಂಸ್ಥೆಗಳ ಪಾತ್ರ ಮಹತ್ತರವಾದುದು ಎಂದು ಸಂಸದ ಜಿ.ಎಂ. ಸಿದ್ದೇಶ್ವರ್‌ ಹೇಳಿದರು.

18.22 ಲಕ್ಷ ರೂ. ವೆಚ್ಚದಲ್ಲಿ ನಿರ್ಮಾಣಗೊಂಡಿರುವ ತಾಲೂಕಿನ ತಿಮ್ಲಾಪುರ ಗ್ರಾಮ ಪಂಚಾಯತ್‌ ಕಟ್ಟಡವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ನಡುವೆ ಸಂಪರ್ಕ ಸೇತುವಿ ನಂತೆ ಗ್ರಾಪಂಗಳು ಕಾರ್ಯ ನಿರ್ವಹಿಸಬೇಕು. ಸಂಕಷ್ಟ ಸಮಯದಲ್ಲಿ ಗ್ರಾಮೀಣ ಪ್ರದೇಶಗಳ ಜನತೆಯ ನೆರವಿಗೆ ಗ್ರಾಪಂಗಳು ನಿಲ್ಲಬೇಕು. ಇದಕ್ಕಾಗಿ ವಿವಿಧ ಯೋಜನೆಗಳನ್ನು ಜಾರಿಗೊಳಿಸಲಾಗಿದೆ. ಅವುಗಳನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದು ಕರೆ ನೀಡಿದರು.

ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎಂ.ಪಿ. ರೇಣುಕಾಚಾರ್ಯ ಮಾತನಾಡಿ, ಗ್ರಾಮೀಣ ಪ್ರದೇಶದ ಜನರು ಉದ್ಯೋಗ ಅರಸಿ ಪಟ್ಟಣ-ನಗರ ಪ್ರದೇಶಗಳಿಗೆ ಗುಳೆ ಹೋಗುವುದನ್ನು ತಪ್ಪಿಸಲು ಕೇಂದ್ರ ಸರ್ಕಾರ ಉದ್ಯೋಗ ಖಾತ್ರಿ ಯೋಜನೆಯನ್ನು ಜಾರಿಗೊಳಿಸಿದೆ. ಅದನ್ನು ಸದ್ಬಳಕೆ ಮಾಡಿಕೊಳ್ಳುವ ಮೂಲಕ ಜನರು ಆರ್ಥಿಕ ಸ್ವಾವಲಂಬನೆ ಸಾಧಿಸಬೇಕು ಎಂದರು.

ಜಿಪಂ ಅಧ್ಯಕ್ಷೆ ದೀಪಾ ಜಗದೀಶ್‌ ಮಾತನಾಡಿ, ಗ್ರಾಮೀಣ ಪ್ರದೇಶಗಳಲ್ಲಿ ಸ್ವಚ್ಛತೆ ಕಾಪಾಡುವುದು ಎಲ್ಲರ ಜವಾಬ್ದಾರಿ. ನೈರ್ಮಲ್ಯ ಕಾಪಾಡಲು ಗ್ರಾಮಾಡಳಿತದೊಂದಿಗೆ ಎಲ್ಲರೂ ಸಹಕರಿಸಬೇಕು. ಶೌಚಾಲಯಗಳನ್ನು ನಿರ್ಮಿಸಿಕೊಂಡು ತಪ್ಪದೇ ಬಳಸಬೇಕು. ಇದೀಗ ಮಾರಣಾಂತಿಕ ಕೋವಿಡ್ ತೀವ್ರ ಗತಿಯಲ್ಲಿ ಹರಡುತ್ತಿರುವ ಕಾರಣಕ್ಕೆ ಎಲ್ಲರೂ ಕಡ್ಡಾಯವಾಗಿ ಮಾಸ್ಕ್ ಧರಿಸಿ ಸ್ಯಾನಿಟೈಸರ್‌ ಬಳಸಬೇಕು. ಅನಗತ್ಯವಾಗಿ ಮನೆಯಿಂದ ಹೊರಗೆ ಬರಬಾರದು ಎಂದರು.

ತಿಮ್ಲಾಪುರ ಗ್ರಾಪಂ ಅಧ್ಯಕ್ಷ ನೇರಲಗುಂಡಿ ಬಿ.ಸಿ. ಮಂಜುನಾಥ್‌ ಅಧ್ಯಕ್ಷತೆ ವಹಿಸಿದ್ದರು. ತಾಪಂ ಪ್ರಭಾರಿ ಅಧ್ಯಕ್ಷ ಕೆ.ಎಲ್‌. ರಂಗನಾಥ್‌, ಸ್ಥಾಯಿ ಸಮಿತಿ ಅಧ್ಯಕ್ಷ ಎಚ್‌. ತಿಪ್ಪೇಶಪ್ಪ, ಸದಸ್ಯೆ ಅಮೃತಬಾಯಿ, ಬಿಜೆಪಿ ಮುಖಂಡರಾದ ಯಕ್ಕನಹಳ್ಳಿ ಟಿ.ಎಸ್‌. ಜಗದೀಶ್‌, ತಿಮ್ಲಾಪುರ ಗ್ರಾಪಂ ಉಪಾಧ್ಯಕ್ಷ ಕೆ.ಪಿ. ಮಧು ಪ್ರಭಾಕರ್‌, ಸದಸ್ಯರಾದ ಜಿ.ಬಿ. ಪ್ರಭು, ವನಮಾಲಮ್ಮ ಗುರುವಪ್ಪ, ಎಲ್‌. ಲಕ್ಷ್ಮಣ ನಾಯ್ಕ, ಲಲಿತಾಬಾಯಿ ಮಂಜಾ ನಾಯ್ಕ, ಕರಿಬಸಮ್ಮ ಯಲ್ಲಪ್ಪ, ಸೈಯ್ಯದ್‌ ಮುನೀರ್‌ ಸಾಬ್‌, ಜಾವೀದ್‌ ಮುಷರ್ರಫ್‌, ಎಚ್‌.ಜಿ. ರುದ್ರೇಶ್‌, ಲಕ್ಷ್ಮೀಬಾಯಿ ದೂದ್ಯಾ ನಾಯ್ಕ, ರತ್ನಮ್ಮ ಸುರೇಶ್‌, ಕೆ. ಶೀಲಾ ಹಾಲೇಶಪ್ಪ, ಎ.ಕೆ. ರಾಜಪ್ಪ, ಬಿ. ಕೆಂಚಪ್ಪ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

1-adani

Adani funding; 100 ಕೋಟಿ ನಿಧಿಯನ್ನು ಸ್ವೀಕರಿಸುವುದಿಲ್ಲ ಎಂದ ರೇವಂತ್ ರೆಡ್ಡಿ

K.-J.-George

ಒಕ್ಕಲಿಗ ಸಂಘದ ಕಾರ್ಯಕ್ರಮದಲ್ಲಿ ಕೆ.ಜೆ.ಜಾರ್ಜ್ ಭಾಷಣಕ್ಕೆ ಆಕ್ಷೇಪ: ಕ್ಷಮೆಯಾಚಿಸಿದ ಸಚಿವರು

Waqf; Donated property is different, writing the property to the Waqf Board is different: C.T. Ravi

Waqf; ದಾನದ ಆಸ್ತಿ ಬೇರೆ, ಕಂಡವರ ಆಸ್ತಿ ವಕ್ಫ್‌ ಬೋರ್ಡ್‌ ಗೆ ಬರೆಯುವುದು ಬೇರೆ: ಸಿ.ಟಿ ರವಿ

World Test Championship: ಪರ್ತ್‌ ಗೆಲುವಿನೊಂದಿಗೆ ಅಂಕಪಟ್ಟಿಯಲ್ಲಿ ಭಾರೀ ಬದಲಾವಣೆ

World Test Championship: ಪರ್ತ್‌ ಗೆಲುವಿನೊಂದಿಗೆ ಅಂಕಪಟ್ಟಿಯಲ್ಲಿ ಭಾರೀ ಬದಲಾವಣೆ

Beirut ಮೇಲೆ ದಾಳಿ…ಇಸ್ರೇಲ್‌ ಮೇಲೆ 250 ರಾಕೆಟ್‌ ದಾಳಿ ನಡೆಸಿದ ಹೆಜ್ಬುಲ್ಲಾ; ಪ್ರತಿದಾಳಿ

Beirut ಮೇಲೆ ದಾಳಿ…ಇಸ್ರೇಲ್‌ ಮೇಲೆ 250 ರಾಕೆಟ್‌ ದಾಳಿ ನಡೆಸಿದ ಹೆಜ್ಬುಲ್ಲಾ; ಪ್ರತಿದಾಳಿ

75

IPL Auction 2025: ಯಾರು, ಯಾವ ತಂಡಕ್ಕೆ, ಎಷ್ಟು ಕೋಟಿಗೆ?.. ಇಲ್ಲಿದೆ ಇದುವರೆಗಿನ ಲಿಸ್ಟ್

Sirsi: ಆಂತರಿಕ ಜಗಳ, ದುರಾಡಳಿತವೇ ಬಿಜೆಪಿ ಸೋಲಿಗೆ ಕಾರಣ: ಐವನ್ ಡಿಸೋಜಾ

Sirsi: ಆಂತರಿಕ ಜಗಳ, ದುರಾಡಳಿತವೇ ಬಿಜೆಪಿ ಸೋಲಿಗೆ ಕಾರಣ: ಐವನ್ ಡಿಸೋಜಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Renukacharya

Davanagere: ಬಿ.ವೈ.ವಿಜಯೇಂದ್ರ ನೇತೃತ್ವದಲ್ಲಿ ರಚನೆಯಾದ 3 ತಂಡಗಳೇ ಅಧಿಕೃತ: ರೇಣುಕಾಚಾರ್ಯ

8-

ಸಹಕಾರ ಭಾರತಿ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಸಾಣೂರು ನರಸಿಂಹ ಕಾಮತ್ ಆಯ್ಕೆ

Waqf Protest: People will overthrow the state government: Protest in Davangere

Waqf Protest: ರಾಜ್ಯ ಸರ್ಕಾರವನ್ನು ಜನರೇ ಕಿತ್ತೊಗೆಯಲಿದ್ದಾರೆ: ದಾವಣಗೆರೆಯಲ್ಲಿ ಪ್ರತಿಭಟನೆ

Govt Hospital: ಡಿ ಗ್ರೂಪ್‌ ಸಿಬ್ಬಂದಿಗೆ ಶೀಘ್ರನೇರ ಪಾವತಿ: ಸಚಿವ ದಿನೇಶ್‌ ಗುಂಡೂರಾವ್‌

Govt Hospital: ಡಿ ಗ್ರೂಪ್‌ ಸಿಬ್ಬಂದಿಗೆ ಶೀಘ್ರನೇರ ಪಾವತಿ: ಸಚಿವ ದಿನೇಶ್‌ ಗುಂಡೂರಾವ್‌

dinesh-gundurao

ರಾಜ್ಯದ ರೈತರಿಗೆ ಕೇಂದ್ರ ಸರ್ಕಾರದಿಂದ ಭಾರಿ ಅನ್ಯಾಯವಾಗಿದೆ: ದಿನೇಶ್ ಗುಂಡೂರಾವ್

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

1-adani

Adani funding; 100 ಕೋಟಿ ನಿಧಿಯನ್ನು ಸ್ವೀಕರಿಸುವುದಿಲ್ಲ ಎಂದ ರೇವಂತ್ ರೆಡ್ಡಿ

Untitled-1

Katpadi: ಹೆದ್ದಾರಿ ಅಂಚಿನಲ್ಲಿ ಅಪಾಯ!; ರಸ್ತೆ ಬದಿಯಲ್ಲಿ ಉದ್ದಕ್ಕೂ ಹೊಂಡಗುಂಡಿ

K.-J.-George

ಒಕ್ಕಲಿಗ ಸಂಘದ ಕಾರ್ಯಕ್ರಮದಲ್ಲಿ ಕೆ.ಜೆ.ಜಾರ್ಜ್ ಭಾಷಣಕ್ಕೆ ಆಕ್ಷೇಪ: ಕ್ಷಮೆಯಾಚಿಸಿದ ಸಚಿವರು

3

Gurupura: ನಾಡಕಚೇರಿ ಕಟ್ಟಡ ಉದ್ಘಾಟನೆಗೆ ಸಿದ್ಧ

KMC

Health Card: ಮಣಿಪಾಲ ಆರೋಗ್ಯಕಾರ್ಡ್ ನೋಂದಾವಣೆಗೆ ಐದು ದಿನ ಬಾಕಿ: ನ.30 ಕೊನೆಯ ದಿನ 

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.