ಅಂಕೆ ಮೀರಿದ ಸೋಂಕು: ಮಂಗಳೂರಿನಲ್ಲಿ ಒಂದೇ ದಿನ ಮೂರು ಬಲಿ ಪಡೆದ ಕೋವಿಡ್
Team Udayavani, Jul 4, 2020, 11:50 AM IST
Representative Image
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋವಿಡ್ ಮರಣ ಮೃದಂಗ ಮುಂದುವರಿದಿದೆ. ಇಂದು ಒಂದೇ ದಿನ ಮೂರು ಕೋವಿಡ್ ಸೋಂಕಿತರು ಸಾವನ್ನಪ್ಪಿದ ಬಗ್ಗೆ ವರದಿಯಾಗಿದೆ.
ಇಬ್ಬರು ಮಹಿಳೆಯರು ಮತ್ತು ಓರ್ವ ಪುರುಷ ಇಂದು ಸೋಂಕಿಗೆ ಬಲಿಯಾಗಿರುವ ಬಗ್ಗೆ ವರದಿಯಾಗಿದೆ. ಇದರಿಂದ ಜಿಲ್ಲೆಯ ಸೋಂಕಿತರ ಸಾವಿನ ಸಂಖ್ಯೆ 22ಕ್ಕೆ ಏರಿಕೆಯಾಗಿದೆ.
ಶುಕ್ರವಾರ ಸಾವನ್ನಪ್ಪಿದ ಸುಳ್ಯದ ಮಹಿಳೆಗೆ ಕೋವಿಡ್-19 ಸೋಂಕು ತಾಗಿರುವುದು ಇಂದು ಬೆಳಿಗ್ಗೆ ದೃಢವಾಗಿತ್ತು. ಈಕೆ ಹೃದಯಾಘಾತದಿಂದ ಮರಣ ಹೊಂದಿದ್ದರು. ಇದಾದ ನಂತರ ಈಗ ಮತ್ತೆ ಓರ್ವ ಮಹಿಳೆ ಮತ್ತು ಓರ್ವ ಪುರುಷ ಸೋಂಕಿಗೆ ಬಲಿಯಾಗಿರುವ ಬಗ್ಗೆ ವರದಿಯಾಗಿದೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳೆದ ಕೆಲವು ದಿನಗಳಿಂದ ಸೋಂಕಿತರ ಸಂಖ್ಯೆಯಲ್ಲಿ ಭಾರಿ ಏರಿಕೆ ಕಾಣುತ್ತಿದೆ. ಶುಕ್ರವಾರ ಒಂದೇ ದಿನ ಜಿಲ್ಲೆಯಲ್ಲಿ 97 ಜನರಿಗೆ ಸೋಂಕು ದೃಢವಾಗಿತ್ತು. ಇದರಿಂದ ಜಿಲ್ಲೆಯ ಕೋವಿಡ್ -19 ಸೋಂಕಿತರ ಸಂಖ್ಯೆ 1012ಕ್ಕೆ ಏರಿಕೆ ಕಂಡಿತ್ತು. ಇದುವರೆಗೆ ಜಿಲ್ಲೆಯಲ್ಲಿ 20 ಮಂದಿ ಸೋಂಕಿತರು ಕೋವಿಡ್ ಕಾರಣದಿಂದ ಮೃತಪಟ್ಟಿದ್ದರೆ, ಇಬ್ಬರು ಸೋಂಕಿತರು ಕೋವಿಡ್ ಅಲ್ಲದ ಅನ್ಯ ಕಾರಣದಿಂದ ಸಾವನ್ನಪ್ಪಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru: ವೆನ್ಲಾಕ್ ಆಸ್ಪತ್ರೆ ಹೊರರೋಗಿ ವಿಭಾಗ ವಿಸ್ತರಣೆ
Mangaluru: 7 ಕೆರೆ, ಪಾರ್ಕ್ ಅಭಿವೃದ್ಧಿಗೆ ಅಮೃತ 2.0
Belagavi Session: ರಾಜಕೀಯ ಕಿತ್ತಾಟ ಏನಿದ್ದರೂ ಸದನದ ಹೊರಗೆ ನಡೆಸಿ: ಯು.ಟಿ. ಖಾದರ್
Fraud Case: ಹೂಡಿಕೆ ನೆಪ: ಮಹಿಳೆಯಿಂದ 56.64 ಲಕ್ಷ ರೂ. ವಂಚನೆ
Kulai ಜೆಟ್ಟಿ ಕಾಮಗಾರಿ: ಚೆನ್ನೈ ಐಐಟಿಯಿಂದ ವರದಿ ಪಡೆಯಲು ಮೀನುಗಾರಿಕೆ ಸಚಿವರ ನಿರ್ಧಾರ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.