ಗೃಹ ದಿಗ್ಬಂಧನ ಉಲ್ಲಂಘನೆ; 6 ಜನರ ವಿರುದ್ಧ ಪ್ರಕರಣ
Team Udayavani, Jul 4, 2020, 12:05 PM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ಯಾದಗಿರಿ: ಗೃಹ ದಿಗ್ಬಂಧನ ಉಲ್ಲಂಘಿಸಿದ ಹೊರ ರಾಜ್ಯದಿಂದ ಆಗಮಿಸಿದ 6 ಜನರ ವಿರುದ್ಧ ಒಟ್ಟು 4 ಪ್ರಕರಣ ದಾಖಲಾಗಿವೆ ಎಂದು ಅಪರ ಜಿಲ್ಲಾಧಿಕಾರಿ ಪ್ರಕಾಶ ಜಿ. ರಜಪೂತ ತಿಳಿಸಿದ್ದಾರೆ.
ಸಾಂಸ್ಥಿಕ ಕ್ವಾರಂಟೈನ್‌ನಲ್ಲಿ ನಿಗದಿತ ಅವಧಿ ಮುಕ್ತಾಯಗೊಂಡ ನಂತರ ಸ್ಟ್ಯಾಂಪಿಂಗ್ ಮತ್ತು ಹೆಲ್ತ್ ಸ್ಕ್ರೀನಿಂಗ್ ಮಾಡಿ ಹೋಂ ಕ್ವಾರಂಟೈನ್‌ನಲ್ಲಿ ಇರುವಂತೆ ಸೂಚಿಸಲಾಗಿತ್ತು. ಆದರೂ 6 ಜನರು ಕೋವಿಡ್ ಸೋಂಕು ಹರಡುವ ದುರುದ್ದೇಶದಿಂದ ಗ್ರಾಮ, ತಾಂಡಾ, ತಾಲೂಕುಗಳಲ್ಲಿ ತಿರುಗಾಡಿದ್ದು, ಹೋಂ ಕ್ವಾರಂಟೈನ್ ನಿಯಮ ಉಲ್ಲಂಘಿಸಿದ್ದಾರೆ. ಹುಣಸಗಿ ತಾಲೂಕಿನ ಕೊಡೇಕಲ್ ಗ್ರಾಮದ 3 ಜನ, ಮಾವಿನಗಿಡ ತಾಂಡಾದ ಒಬ್ಬ ವ್ಯಕ್ತಿ, ಜುಮಲಪುರ ದೊಡ್ಡ ತಾಂಡಾದ ಒಬ್ಬ ವ್ಯಕ್ತಿ ವಿರುದ್ಧ ಕೊಡೇಕಲ್ಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಅಲ್ಲದೆ ಸುರಪುರ ತಾಲೂಕಿನ ರಂಗಂಪೇಟೆಯ ಒಬ್ಬ ವ್ಯಕ್ತಿ ವಿರುದ್ಧ ಸುರುಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆದಿದೆ. ಈ ಆರೋಪಿಗಳನ್ನು ಪುನಃ ಸಾಂಸ್ಥಿಕ ಕ್ವಾರಂಟೈನ್ ನಲ್ಲಿ ಇರಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Dharmasthala: ಎರಡನೇ ದಿನದ ಕೆರೆಕಟ್ಟೆ ಉತ್ಸವ ಸಂಪನ್ನ
Moodbidri: ಬಾಂಗ್ಲಾದಲ್ಲಿ ಕೃಷ್ಣದಾಸ ಪ್ರಭು ಸೆರೆ: ಮೂಡುಬಿದಿರೆ ಭಟ್ಟಾರಕ ಶ್ರೀ ಖಂಡನೆ
Mangaluru: ಪೌರಕಾರ್ಮಿಕರ ವಿಮೆ 5 ಲಕ್ಷ ರೂ.ಗೆ ಏರಿಕೆ: ಜಿಲ್ಲಾಧಿಕಾರಿ ಸೂಚನೆ
Udupi: ಗೀತಾರ್ಥ ಚಿಂತನೆ-108: ಕರ್ತವ್ಯಚ್ಯುತಿಯ ದುಃಖದಿಂದ ಆತ್ಮವಿಕಾಸ
Manipal: ಮಾಹೆಯ ಪ್ರಸನ್ನ ಸ್ಕೂಲ್ ಆಪ್ ಪಬ್ಲಿಕ್ ಹೆಲ್ತ್‌ಗೆ ಶ್ರೇಷ್ಠತೆಯ ಮಾನ್ಯತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.