ಮತ್ತೆ 3 ಪಾಸಿಟಿವ್; ಸೋಂಕಿತರು 80
Team Udayavani, Jul 4, 2020, 12:44 PM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ಚಿತ್ರದುರ್ಗ: ಜಿಲ್ಲೆಯಲ್ಲಿ ಕೋವಿಡ್-19 ವೈರಸ್ಗೆ ಸಂಬಂಸಿದಂತೆ ಶುಕ್ರವಾರದ ವರದಿಯಲ್ಲಿ 3 ಜನರಲ್ಲಿ ಸೋಂಕು ದೃಢಪಟ್ಟಿದೆ. ಇದರಿಂದಾಗಿ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 80ಕ್ಕೆ ಏರಿಕೆಯಾದಂತಾಗಿದೆ.
ಗುರುವಾರ ಚಳ್ಳಕೆರೆಯಲ್ಲಿ 61 ವರ್ಷದ ವ್ಯಕ್ತಿ, ಹಿರಿಯೂರಿನಲ್ಲಿ 9 ವರ್ಷದ ಬಾಲಕಿ ಹಾಗೂ ಹೊಳಲ್ಕೆರೆಯ 55 ವರ್ಷದ ಮಹಿಳೆಗೆ ಸೋಂಕು ತಗುಲಿರುವುದು ದೃಢಪಟ್ಟಿತ್ತು. ಶುಕ್ರವಾರದ ವರದಿಯಲ್ಲಿ ಮತ್ತೆ 3 ಜನರಿಗೆ ಸೋಂಕು ದೃಢಪಟ್ಟಿದೆ. ರಾಂಪುರದ 12 ವರ್ಷದ ಬಾಲಕಿ, ಚಳ್ಳಕೆರೆಯ 55 ವರ್ಷದ ಮಹಿಳೆ ಹಾಗೂ ಹಿರಿಯೂರಿನ 13 ವರ್ಷದ ಬಾಲಕಿಗೆ ಕೋವಿಡ್ ಸೋಂಕು ಪತ್ತೆಯಾಗಿದೆ. ಶುಕ್ರವಾರ ಒಟ್ಟು 66 ಜನರ ಗಂಟಲು, ಮೂಗು ದ್ರವ ಮಾದರಿಯನ್ನು ಪರೀಕ್ಷೆಗೆ ಒಳಪಡಿಸಲಾಗಿದ್ದು, 59 ಜನರ ವರದಿ ನೆಗೆಟಿವ್ ಬಂದಿದೆ. ಇನ್ನೂ 4 ಜನರ ವರದಿ ಬರುವುದು ಬಾಕಿ ಇದೆ ಎಂದು ಡಿಎಚ್ಒ ಡಾ| ಪಾಲಾಕ್ಷ ತಿಳಿಸಿದ್ದಾರೆ.
ಚಿತ್ರದುರ್ಗದ ಕೋವಿಡ್ ಆಸ್ಪತ್ರೆಯಲ್ಲಿ 19, ಹಿರಿಯೂರು ತಾಲೂಕು ಧರ್ಮಪುರದ ನಿಗದಿತ ಕೋವಿಡ್ ಹೆಲ್ತ್ ಕೇರ್ ಸೆಂಟರ್ನಲ್ಲಿ 11, ಭರಮಸಾಗರ 4, ಮೊಳಕಾಲ್ಮೂರು ತಾಲೂಕು ರಾಂಪುರದಲ್ಲಿ 3 ಹಾಗೂ ಹೊಸದುರ್ಗ ತಾಲೂಕು ಬೆಲಗೂರಿನ ನಿಗದಿತ ಕೋವಿಡ್ ಹೆಲ್ತ್ ಕೇರ್ ಸೆಂಟರ್ನಲ್ಲಿ 1 ಸೋಂಕಿತರನ್ನು ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chitradurga: ನಿವೃತ್ತ ಶಿಕ್ಷಕಿ ಬಳಿ ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ರೇಡ್
Challakere: ಗೆಳೆಯನ ವಿವಾಹದಲ್ಲಿ ಕುಣಿವಾಗ ಕುಸಿದು ಬಿದ್ದು ಯುವಕ ಸಾವು
Bharamasagara: 3 ತಿಂಗಳ ಹಿಂದೆ ಮದುವೆಯಾಗಿ ಊರಿಗೆ ವಾಪಸ್ ಆದ ಯುವಕನ ಹತ್ಯೆ
Chitradurga: ಒಟ್ಟು 6 ಜನ ಅಕ್ರಮ ಬಾಂಗ್ಲಾ ವಲಸಿಗರ ಪತ್ತೆ
Chitradurga: ಪತಿ ಸಾವು: ಜಿಗುಪ್ಸೆಯಿಂದ ಪತ್ನಿ, ಪುತ್ರಿ ನೇಣಿಗೆ ಶರಣು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.