ಪರ-ವಿರೋಧ ಎನ್ನದೆ ಅಭಿವೃದ್ಧಿ ಕೆಲಸ ಮಾಡೋಣ: ನಡಹಳ್ಳಿ
ಸರ್ಕಾರಿ ಪಪೂ ಕಾಲೇಜುಗಳ ಹೆಚ್ಚುವರಿ ಕೊಠಡಿ, ಶೌಚಾಲಯ ನಿರ್ಮಾಣ ಕಾಮಗಾರಿಗೆ ಚಾಲನೆ
Team Udayavani, Jul 4, 2020, 4:25 PM IST
ಮುದ್ದೇಬಿಹಾಳ: ಸರ್ಕಾರಿ ಪಪೂ ಕಾಲೇಜುಗಳ ಹೆಚ್ಚುವರಿ ಕೊಠಡಿ, ಶೌಚಾಲಯ ನಿರ್ಮಾಣ ಕಾಮಗಾರಿಗೆ ಶಾಸಕ ನಡಹಳ್ಳಿ ಭೂಮಿಪೂಜೆ ನೆರವೇರಿಸಿದರು
ಮುದ್ದೇಬಿಹಾಳ: ಚುನಾವಣೆ ಬಂದಾಗ ಮಾತ್ರ ಪಕ್ಷ, ಪಂಗಡ ಎನ್ನಬೇಕು. ಉಳಿದೆಲ್ಲ ದಿನಗಳಲ್ಲಿ ಜನರ ಏಳಿಗೆಗೋಸ್ಕರ, ಅಭಿವೃದ್ಧಿಗಾಗಿ ಪಕ್ಷಾತೀತವಾಗಿ ಕೆಲಸ ಮಾಡಬೇಕು ಎಂದು ಶಾಸಕ ಎ.ಎಸ್. ಪಾಟೀಲ ನಡಹಳ್ಳಿ ಹೇಳಿದ್ದಾರೆ.
ಪಟ್ಟಣದ ಪುರಸಭೆ ಆವರಣದಲ್ಲಿ ಫಲಾನುಭವಿಗಳಿಗೆ ವಿವಿಧ ಸೌಲಭ್ಯ ಹಸ್ತಾಂತರಿಸುವ ಕಾರ್ಯಕ್ರಮಕ್ಕೆ ಶುಕ್ರವಾರ ಚಾಲನೆ ನೀಡಿ ಅವರು ಮಾತನಾಡಿದರು. ಪಟ್ಟಣ ಪ್ರದೇಶದ ಅಭಿವೃದ್ಧಿ ಜವಾಬ್ದಾರಿ ನನ್ನ ತಲೆ ಮೇಲಿದೆ. ಅಭಿವೃದ್ಧಿ ವಿಷಯದಲ್ಲಿ ಯಾರೂ ಪೂರ್ವಾಗ್ರಹ ಪೀಡಿತರಾಗಬಾರದು. ಶಾಸಕರು ಬಿಜೆಪಿಯವರು ನಾವು, ಕಾಂಗ್ರೆಸ್, ಜೆಡಿಎಸ್ ನವರು. ನಮಗೆ ಮಹತ್ವ ಕೊಡ್ತಾರೋ, ಇಲ್ವೋ ಅನ್ನೋ ಶಂಕೆ, ಅಪನಂಬಿಕೆ ಬೇಡ. ನಾವೆಲ್ಲರೂ ಜನರ ಸೇವಕರು ಅನ್ನೋದನ್ನ ಅರಿತುಕೊಳ್ಳಬೇಕು. ಸಂದರ್ಭ ಬಂದಾಗ ಮಾನವೀಯತೆ ದೃಷ್ಟಿಯಿಂದ ನಾವೆಲ್ಲ ಒಂದಾಗಿ ಕೆಲಸ ಮಾಡಬೇಕು. ಪುರಸಭೆ ಅನುದಾನದಲ್ಲಿ ಶಾಸಕನಾಗಿ ನಾನು ಹಸ್ತಕ್ಷೇಪ ಮಾಡುವುದಿಲ್ಲ. ಅದು ಪುರಸಭೆ ಸದಸ್ಯರ ಹಕ್ಕು. ಅದೇ ರೀತಿ ಶಾಸಕರ ಅನುದಾನ ಪ್ರಶ್ನಿಸುವ ಹಕ್ಕು ಬೇರೆಯವರಿಗೆ ಇಲ್ಲ. ಇಲ್ಲಿ ಪರಸ್ಪರ ಒಬ್ಬರಿಗೊಬ್ಬರು ಸಹಕಾರ ನೀಡಿ ಕೆಲಸ ಮಾಡಬೇಕಾಗುತ್ತದೆ. ಪರ, ವಿರೋಧ ಎನ್ನದೆ ಎಲ್ಲರೂ ಸೇರಿ ಅಭಿವೃದ್ಧಿ ಕೆಲಸ ಮಾಡೋಣ ಎಂದರು.
ಒಟ್ಟು 13 ಕೋಟಿ ರೂ. ಅನುದಾನವನ್ನು ಸರ್ಕಾರದಿಂದ ಮಂಜೂರು ಮಾಡಿಸಿದ್ದೇನೆ. ಇನ್ನೂ ಹೆಚ್ಚಿನ ಅನುದಾನ ಬಿಡುಗಡೆ ಮಾಡಿಸುತ್ತೇನೆ. ಎಲ್ಲ 23 ವಾರ್ಡ್‌ಗಳೂ ಅಭಿವೃದ್ಧಿ ಹೊಂದಬೇಕು. ಎಲ್ಲವನ್ನೂ ಹಂತ ಹಂತವಾಗಿ ಅಭಿವೃದ್ಧಿ ಮಾಡಲಾಗುತ್ತದೆ. ಶಾಸಕನಾದ ಕೆಲವೇ ತಿಂಗಳಲ್ಲಿ ಸಾಕಷ್ಟು ಸವಾಲು ಎದುರಿಸಿ 13 ಕೋಟಿ ರೂ. ಮಂಜೂರು ಮಾಡಿಸಿದ್ದು ಸಾಧನೆ. ಇನ್ನೂ ಹೆಚ್ಚು ಸಾಧನೆ ಮಾಡಿ ತೋರಿಸಬೇಕಿದೆ. ಪಟ್ಟಣದಲ್ಲಿ ಹಾಯ್ದು ಹೋಗುವ ರಾಜ್ಯ ಹೆದ್ದಾರಿಯನ್ನು ಸುಂದರವಾಗಿ ಕಾಣುವಂತೆ ಮಾಡಲು ಸಾಕಷ್ಟು ಕಷ್ಟಪಟ್ಟಿದ್ದೇನೆ. ತಾಲೂಕಿನಲ್ಲಿ ವಿದ್ಯುತ್ ಸಮಸ್ಯೆ ಹೋಗಲಾಡಿಸಲು 5 ಕಡೆ ಸಬ್ ಸ್ಟೇಷನ್ ಮಂಜೂರಿಸಲಾಗಿದೆ. ತೆರಿಗೆ ಸಂಗ್ರಹಿಸಿ ಪುರಸಭೆಯನ್ನು ಬಲಗೊಳಿಸಲು ಸದಸ್ಯರೆಲ್ಲರೂ ಸಹಕರಿಸಬೇಕು ಎಂದರು.
ಕೋವಿಡ್ ಹೊಡೆದೋಡಿಸಲು ಮಾಸ್ಕ್ ಧರಿಸಿ, ಸ್ಯಾನಿಟೈಸರ್ ಬಳಸಲು ಪ್ರತಿಯೊಬ್ಬ ಸದಸ್ಯ ತಮ್ಮ ವಾರ್ಡ್‌ಗಳಲ್ಲಿ ಜಾಗೃತಿ ಅಭಿಯಾನ ನಡೆಸಬೇಕು. ಆರೋಗ್ಯ ಇಲಾಖೆ ಪ್ರಯತ್ನಗಳಿಗೆ ಸಾರ್ವಜನಿಕರೆಲ್ಲರೂ ಸಹಕರಿಸಬೇಕು ಎಂದರು. ಪುರಸಭೆ ಎಲ್ಲ ಸದಸ್ಯರು, ಮುಖ್ಯಾಧಿಕಾರಿ ಗೋಪಾಲ ಕಾಸೆ ಅವರು ಶಾಸಕರ ಜೊತೆ ಜಂಟಿಯಾಗಿ 2017ರಿಂದ 2020ನೇ ಸಾಲಿನವರೆಗೆ ಎಸ್‌ಎಫ್‌ಸಿ, ಪುರಸಭೆ ಅನುದಾನದಲ್ಲಿ ವಿಕಲಚೇತನರಿಗೆ ತ್ರಿಚಕ್ರ ವಾಹನ, ಎಸ್ಸಿ-ಎಸ್ಟಿ ಅರ್ಹರಿಗೆ ಹೊಲಿಗೆ ಯಂತ್ರ ವಿತರಿಸಿದರು.
ಶಿಷ್ಟಾಚಾರ ಪಾಲಿಸಿ: ಕಾರ್ಯಕ್ರಮ ವೇದಿಕೆಯಲ್ಲಿ ಶಾಸಕರ ಜೊತೆ ಬಿಜೆಪಿ ಮುಖಂಡರನ್ನು ಕೂಡಿಸಲಾಗಿತ್ತು. ಇದಕ್ಕೆ ತಕರಾರು ತೆಗೆದ ಕಾಂಗ್ರೆಸ್ ಸದಸ್ಯರು ನೆಲದ ಮೇಲೆ ಕುಳಿತು ಅಸಮಾಧಾನ ತೋಡಿಕೊಂಡರು. ಕೆಲವರು ಮುಖ್ಯಾಧಿಕಾರಿ ಜೊತೆ ವಾಗ್ವಾದ ನಡೆಸಿ ಸದಸ್ಯರನ್ನು ವೇದಿಕೆಗೆ ಕರೆಯದೆ ಅಗೌರವ ತೋರಿಸಲಾಗಿದೆ. ಸರ್ಕಾರಿ ಕಾರ್ಯಕ್ರಮವಾಗಿದ್ದು ಶಿಷ್ಟಾಚಾರ ಪಾಲನೆ ಆಗಿಲ್ಲ ಎಂದು ತಕರಾರು ತೆಗೆದು ಗೊಂದಲ ಮೂಡಿಸಿದರು. ಕೊನೆಗೆ ಶಾಸಕರೇ ಎಲ್ಲರನ್ನೂ ಸಮಾಧಾನಪಡಿಸಿ ಕಾರ್ಯಕ್ರಮ ಸುಲಲಿತವಾಗಿ ನಡೆಯಲು ಸಹಕರಿಸಿದರು.
ಭೂಮಿಪೂಜೆ: ಇದಕ್ಕೂ ಮುನ್ನ ಶಾಸಕರು ಸರ್ಕಾರಿ ಪಪೂ ಕಾಲೇಜಿಗೆ 2019-20ನೇ ಸಾಲಿನಲ್ಲಿ ರಾಜ್ಯ ಬಂಡವಾಳ ವೆಚ್ಚದಡಿ ಮಂಜೂರಾದ ಹೆಚ್ಚುವರಿ ಕೊಠಡಿ, ಶೌಚಾಲಯ ಕಾಮಗಾರಿಗೆ ಭೂಮಿಪೂಜೆ ನಡೆಸಿದರು. ಪುರಸಭೆ ಸದಸ್ಯರಾದ ಸಂಗಮ್ಮ ದೇವರಳ್ಳಿ, ಸಹನಾ ಬಡಿಗೇರ, ಸದಾಶಿವ ಮಾಗಿ, ಪಪೂ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಆರ್.ಎ. ಜಹಾಗಿರದಾರ, ಪಪೂ ಕಾಲೇಜುಗಳ ಪ್ರಾಂಶುಪಾಲರ ಮಹಾಮಂಡಳದ ಅಧ್ಯಕ್ಷ ಪ್ರಾ| ಎಸ್.ಎಸ್. ಹೊಸಮನಿ, ಪ್ರಾ| ಎಸ್. ಎಸ್. ಅಂಗಡಿ ಸೇರಿದಂತೆ ಹಲವರು ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಬಾಯಿ ಮುಚ್ಚಿ ಕುಳಿತರೆ ಒಳ್ಳೆಯದು, ಇಲ್ಲದಿದ್ದರೆ.. ಸ್ವಪಕ್ಷೀಯರ ವಿರುದ್ಧವೇ ಯತ್ನಾಳ್ ಕಿಡಿ
Panchamasali;ಈಗಲೂ ಮೀಸಲಾತಿ ಹೋರಾಟ ಮಾಡುತ್ತಿದ್ದೇನೆ: ಲಕ್ಷ್ಮೀ ಹೆಬ್ಬಾಳಕರ್
Vijayapura: 6ರ ಬಾಲಕನ ಮೇಲೆ ಅನೈಸರ್ಗಿಕ ಲೈಂಗಿಕ ದೌರ್ಜನ್ಯ: ಅಪರಾಧಿಗೆ 20 ವರ್ಷ ಜೈಲು
Vijayapura: ಮಹಾನಗರ ಪಾಲಿಕೆ ಉಪ ಚುನಾವಣೆ… ವಾರ್ಡ್ ನಂ.29ರಲ್ಲಿ ಬಿಜೆಪಿ ಗೆಲುವು
ಶಾಸಕರ ನಿವಾಸಕ್ಕೆ ಮುತ್ತಿಗೆ ಹಾಕಲು ಸಿದ್ಧತೆ.. ದಲಿತ ಮುಖಂಡರನ್ನು ವಶಕ್ಕೆ ಪಡೆದ ಪೊಲೀಸರು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Jammu Kashmir: ದೊಡ್ಡ ಯೋಜನೆ ವಿಫಲ; ಉಗ್ರರ ಅಡಗುತಾಣವನ್ನು ಧ್ವಂಸ ಮಾಡಿದ ಸೇನೆ
Shahapur: ಕಾರು-ಬೈಕ್ ಮುಖಾಮುಖಿ ಡಿಕ್ಕಿ- ಇಬ್ಬರ ಸಾವು
Dandeli: ಕೆನರಾ ಬ್ಯಾಂಕ್ ಎಟಿಎಂ ಕೇಂದ್ರದೊಳಗೆ ಹಾವು ಪ್ರತ್ಯಕ್ಷ
BGT 2024: ಟೀಂ ಇಂಡಿಯಾಗೆ ಶುಭ ಸುದ್ದಿ; ತಂಡಕ್ಕೆ ಮರಳಿದ ಪ್ರಮುಖ ಆಟಗಾರ
ED Raids: ಬೆಳ್ಳಂಬೆಳಗ್ಗೆ ಉದ್ಯಮಿ ರಾಜ್ ಕುಂದ್ರಾ ಮನೆ, ಕಚೇರಿ ಮೇಲೆ ಇಡಿ ದಾಳಿ…
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.