ಸ್ಯಾಮ್ ಕರನ್‌ಗೆ ನೆಗೆಟಿವ್: ಅಭ್ಯಾಸಕ್ಕೆ ಅನುಮತಿ
Team Udayavani, Jul 5, 2020, 5:05 AM IST
ಸೌತಾಂಪ್ಟನ್: ಇಂಗ್ಲೆಂಡಿನ ಆಲ್‌ರೌಂಡರ್ ಸ್ಯಾಮ್ ಕರನ್ ಅವರ ಕೋವಿಡ್-19 ಫಲಿತಾಂಶ ಒಂದೇ ದಿನದಲ್ಲಿ ಪಾಸಿಟಿವ್‌ನಿಂದ ನೆಗೆಟಿವ್‌ಗೆ ತಿರುಗಿದೆ.
ಇದರಿಂದ ಅವರು ಪ್ರವಾಸಿ ವೆಸ್ಟ್ ಇಂಡೀಸ್ ಎದುರಿನ ಮೊದಲ ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಲಿದ್ದಾರೆ ಎಂದು ಇಸಿಬಿ ತಿಳಿಸಿದೆ.
“ಸರ್ರೆ ಆಲ್‌ರೌಂಡರ್ ಸ್ಯಾಮ್ ಕರನ್ ಅನಾರೋಗ್ಯಕ್ಕೆ ತುತ್ತಾಗಿದ್ದು, ಕೋವಿಡ್-19 ಪರೀಕ್ಷೆ ವೇಳೆ ಗುರುವಾರ ರಾತ್ರಿ ಪಾಸಿಟಿವ್ ಫಲಿತಾಂಶ ಬಂದಿತ್ತು. ಆದರೆ ಶುಕ್ರವಾರ ಇದು ನೆಗೆಟಿವ್ ಆಗಿದೆ.
ಈ ಅವಧಿಯಲ್ಲಿ ಅವರು ಏಗಸ್ ಬೌಲ್‌ನ ಹೊಟೇಲ್ ಕೋಣೆಯಲ್ಲಿ ಸೆಲ್ಫ್ ಐಸೊಲೇಶನ್‌ಗೆ ಒಳಗಾಗಿದ್ದರು. ತಂಡದ ವೈದ್ಯರು ಅವರ ಆರೋಗ್ಯವನ್ನು ಗಮನಿಸುತ್ತಿದ್ದಾರೆ.
ಮುಂದಿನ 48 ಗಂಟೆ ಒಳಗಾಗಿ ಅಭ್ಯಾಸಕ್ಕೆ ಇಳಿಯಲಿದ್ದಾರೆ’ ಎಂದು ಇಸಿಬಿ ತನ್ನ ಅಧಿಕೃತ ಪ್ರಕಟನೆಯಲ್ಲಿ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ
BBK11: ಸೆಡೆಗಳನ್ನೆಲ್ಲ ಕಳ್ಸಿಯೇ ನಾನು ಮನೆಗೆ ಹೋಗೋದು- ಮತ್ತೆ ಗುಡುಗಿದ ರಜತ್
Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ
Daily Horoscope: ಉದ್ಯೋಗ ಸ್ಥಾನದಲ್ಲಿ ಹಲವು ಬಗೆಯ ಅವಕಾಶಗಳು, ಆರೋಗ್ಯ ವೃದ್ಧಿ
ಬಾಲಕಿಯ ಅತ್ಯಾಚಾರ-ಗರ್ಭಪಾತ ಪ್ರಕರಣ: ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ; 50 ಸಾವಿರ ರೂ. ದಂಡ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.