ಅಗತ್ಯ ವಸ್ತುಗಳಿಲ್ಲದೇ ಸಾರ್ವಜನಿಕರ ಪರದಾಟ
Team Udayavani, Jul 5, 2020, 6:42 AM IST
ಕನಕಪುರ: ಸೀಲ್‌ಡೌನ್ ಮಾಡಿರುವ ವ್ಯಾಪ್ತಿಗಳಲ್ಲಿ ಅಧಿಕಾರಿಗಳ ಬೇಜವಾಬ್ದಾರಿಯಿಂದ ಅಗತ್ಯ ವಸ್ತುಗಳ ಪೂರೈಕೆಯಿಲ್ಲದೆ ಪರದಾಡುವಂತಾಗಿದೆ ಎಂದು ಧರ್ಮರಾಜು ವರ್ಕ್‌ಶಾಪ್ ರಸ್ತೆ ಸಾರ್ವಜನಿಕರು ಆರೋಪಿಸಿದ್ದಾರೆ. ತಾಲೂಕಿನಲ್ಲಿ ಕೊರೊನಾ ಹಾವಳಿ ಹೆಚ್ಚುತ್ತಿದೆ. ಈವರೆಗೆ ಸೋಂಕಿತರ ಪ್ರಾಥಮಿಕ ಹಾಗೂ ದ್ವಿತೀಯ ಸಂಪರ್ಕ ಹೊಂದಿದ್ದ, 1300ಕ್ಕೂ ಹೆಚ್ಚು ಫಲಿತಾಂಶಗಳು ಬಾಕಿಯಿವೆ.
ಪ್ರತಿ ದಿನ ಎರಡು ಮೂರು ಸೋಂಕಿತ ಪ್ರಕರಣಗಳು ದಾಖಲಾಗುತ್ತಿದ್ದು, ಸಾರ್ವಜನಿಕರಲ್ಲಿ ಆತಂಕ ಹೆಚ್ಚಿದೆ. ಕೋವಿಡ್-19 ನಿಯಮಗಳ ಪ್ರಕಾರ ಸೋಂಕಿತ ವ್ಯಕ್ತಿ ವಾಸಿಸುತ್ತಿದ್ದ 100 ಮೀ. ವ್ಯಾಪ್ತಿ ಸೀಲ್ ಡೌನ್ ಮಾಡಿ, ಆ ವ್ಯಾಪ್ತಿಯ ಸಾರ್ವಜನಿಕರಿಗೆ ಅಗತ್ಯ ವಸ್ತು ಪೂರೈಸಲು ಸ್ಥಳದಲ್ಲಿ ಒಬ್ಬ ಸಿಬ್ಬಂದಿ ನೇಮಿಸಬೇಕು. ಆದರೆ ನಗರ ಸೇರಿದಂತೆ ಗ್ರಾಮೀಣ ಭಾಗದ ಸೀಲ್‌ಡೌನ್ ಪ್ರದೇಶಗಳಲ್ಲಿ ಅಗತ್ಯವಸ್ತುಗಳು ಸಮರ್ಪಕವಾಗಿ ಪೂರೈಕೆಯಾಗುತ್ತಿಲ್ಲ.
ಇನ್ನು ಕೆಲವು ಕಡೆಗಳಲ್ಲಿ ಅಧಿಕಾರಿಗಳು ಕಟ್ಟುನಿಟ್ಟಾಗಿ ಸಾರ್ವಜನಿಕರು ಹೋರಬರದಂತೆ ಸೀಲ್‌ಡೌನ್ ಮಾಡಿ, ಅಗತ್ಯ ವಸ್ತುಗಳ ಪೂರೈಕೆಗೆ ಸಿಬ್ಬಂದಿ ನೇಮಿಸಿಲ್ಲ ಎಂಬ ಆರೋಪ ವ್ಯಕ್ತವಾಗುತ್ತಿದೆ. ನಗರದ ವಾಣಿ ಚಿತ್ರಮಂದಿರದ ಎದುರಿನ ಧರ್ಮರಾಜು ವರ್ಕ್‌ಶಾಪ್ ರಸ್ತೆಯ ನಿವಾಸಿ ವಿಶ್ವೇಶ್ವರಾಯ ಬ್ಯಾಂಕ್‌ನ ಸಿಬ್ಬಂದಿಗೆ ಸೋಂಕು ಕಾಣಿಸಿದ ಹಿನ್ನೆಲೆಯಲ್ಲಿ ಆ ರಸ್ತೆಯ ಎರಡು ಭಾಗಗಳಲ್ಲಿ ಸೀಲ್‌ಡೌನ್ ಮಾಡಿರುವ ಅಧಿಕಾರಿಗಳು ಕಳೆದ 15 ದಿನಗಳಿಂದ ಅಗತ್ಯವಸ್ತುಗಳ ಪೂರೈಕೆಗೆ ಒಬ್ಬ ಸಿಬ್ಬಂದಿ ನೇಮಿಸಿಲ್ಲ.
ಸೀಲ್‌ಡೌನ್ ಆದಾಗಿನಿಂದಲೂ ಈವರೆಗೆ ಯಾವೊಬ್ಬ ಅಧಿಕಾರಿಯು ಇತ್ತ ತಲೆ ಹಾಕಿಲ್ಲ. ನಮಗೆ ಪ್ರತಿ ದಿನ ಅಗತ್ಯ ವಸ್ತು ಸಿಗದೆ ಪರದಾಡುವಂತಾಗಿದೆ. ಅದರಿಂದ ನಮಗೂ ಮಾನಸಿಕವಾಗಿ ಹಿಂಸೆ ಅನುಭವಿಸುವಂತಾಗಿದೆ ಎಂದು ಧರ್ಮರಾಜು ವಕ್ ìಶಾಪ್ ರಸ್ತೆ ಮಹದೇವಪ್ಪ ಪತ್ರಿಕೆ ವರದಿಗಾರರಿಗೆ ದೂರವಾಣಿ ಮೂಲಕ ನೋವು ತೋಡಿಕೊಂಡರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ
Fraud: “ವಿಡಿಯೋಗೆ ಲೈಕ್ ನೀಡಿ’ 13.97 ಲಕ್ಷ ಕಳೆದುಕೊಂಡರು!
C.P.Yogeshwara; ಜಮೀರ್ ಹೇಳಿಕೆ ಪರಿಣಾಮ…: ಸೋಲಿನ ಆತಂಕ ಹೊರ ಹಾಕಿದ ಸೈನಿಕ?!
By Election: ದೇವೇಗೌಡರನ್ನು 1994ರಲ್ಲಿ ಮುಖ್ಯಮಂತ್ರಿ ಮಾಡಿದ್ದೇ ನಾನು: ಸಿಎಂ ಸಿದ್ದರಾಮಯ್ಯ
Ramanagara: ಆರು ಟ್ರಾನ್ಸ್ ಫಾರ್ಮರ್ ಗಳ ಕಳವು
MUST WATCH
ಹೊಸ ಸೇರ್ಪಡೆ
ಅಂಬಾಗಿಲು: ಚಾಲಕನ ನಿಯಂತ್ರಣ ತಪ್ಪಿ ಸಿಮೆಂಟ್ ರೆಡಿಮಿಕ್ಸ್ ವಾಹನ ಪಲ್ಟಿ… ತಪ್ಪಿದ ಅವಘಡ
BGT 24: ಕೆಎಲ್ ರಾಹುಲ್ ಔಟ್ ಅಥವಾ ನಾಟೌಟ್: ಏನಿದು ವಿವಾದ? ಇಲ್ಲಿದೆ ಅಂಪೈರ್ ಉತ್ತರ
Belthangady: ನ. 21- ಮೇ 23: ಧರ್ಮಸ್ಥಳ ಮೇಳದಿಂದ ಯಕ್ಷ ಗಾನ ಸೇವೆ
Chikkamagaluru: ನಾವು ನಡೆದಿದ್ದೇ ದಾರಿ, ನಡಿ ಮಗಾ….ಮರಿ ಆನೆಗೆ ನಡೆಯಲು ಕಲಿಸಿದ ತಾಯಿ ಆನೆ
Mangaluru: ಜೀವನ ಶೈಲಿ ಸಂಬಂಧಿ ಕಾಯಿಲೆಗೆ ಪರಿಹಾರ ಅಗತ್ಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.