ಇಂದು ಲಾಕ್‌ಡೌನ್: ಜಿಲ್ಲಾದ್ಯಂತ 144 ಕಲಂ ಜಾರಿ
Team Udayavani, Jul 5, 2020, 8:58 AM IST
ರಾಯಚೂರು: ಮಹಾಮಾರಿ ಕೋವಿಡ್ ವೈರಸ್ ಹರಡುವುದನ್ನು ತಡೆಯುವ ನಿಟ್ಟಿನಲ್ಲಿ ಜು.5ರಂದು ರವಿವಾರ ಲಾಕ್‌ಡೌನ್ ಇರಲಿದ್ದು ಯಾವುದೇ ಅಹಿತಕರ ಘಟನೆಗಳು ನಡೆಯದಂತೆ 144 ಕಲಂ ಜಾರಿಗೊಳಿಸಿ, ಬಿಗಿ ಪೊಲೀಸ್ ಬಂದೋಬಸ್ತ್ ಕಲ್ಪಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ| ಸಿ.ಬಿ.ವೇದಮೂರ್ತಿ ತಿಳಿಸಿದ್ದಾರೆ.
ಕೋವಿಡ್ ಸೋಂಕು ನಿಯಂತ್ರಿಸಲು ರಾಜ್ಯ ಸರರ್ಕಾರದ ಆದೇಶದಂತೆ 144 ಕಲಂ ಜಾರಿಗೊಳಿಸಲಾಗಿದೆ. ನಾಲ್ಕಕ್ಕಿಂತ ಹೆಚ್ಚು ಜನರು ತಿರುಗಾಡುವಂತಿಲ್ಲ, ಗುಂಪು ಗುಂಪಾಗಿ ಕಂಡು ಬಂದಲ್ಲಿ ತಮ್ಮ ಮೇಲೆ ಸೂಕ್ತ ಶಿಸ್ತು ಕ್ರಮ ಕೈಗೊಳ್ಳಲಾಗುವದು ಎಂದು ತಿಳಿಸಿದ್ದಾರೆ. 10 ಡಿಎಆರ್ ತುಕಡಿ, 500 ಪೊಲೀಸ್ ಪೇದೆಗಳು, 40 ಪಿಎಸ್‌ಐ, 10 ಸಿಪಿಐ, 4 ಡಿವೈಎಸ್‌ಪಿ ಮತ್ತು ಇಬ್ಬರು ಎಸ್‌ಪಿ ಅವರ ನೇತೃತ್ವದಲ್ಲಿ ಜಿಲ್ಲೆಯಲ್ಲಿ ಸೂಕ್ತ ಬಂದೋಬಸ್ತ್ ಮಾಡಲಾಗಿದೆ ಎಂದು ತಿಳಿಸಿದ್ದಾರೆ.
ಮದ್ಯ ಮಾರಾಟ ನಿಷೇಧ: ಜು.5ರಂದು ಲಾಕ್‌ಡೌನ್ ಜಾರಿಯಲ್ಲಿರುವುದರಿಂದ ಮದ್ಯ ಮಾರಾಟ ಮತ್ತು ಸಾಗಣೆ ಸಂಪೂರ್ಣ ನಿಷೇಧಿಸಿ ಜಿಲ್ಲಾಧಿಕಾರಿ ವೆಂಕಟೇಶಕುಮಾರ ಆದೇಶಿಸಿದ್ದಾರೆ. ಅಬಕಾರಿ ಕಾಯ್ದೆ 1965 ರ ಕಲಂ.21(1) ರಂತೆ ಜಿಲ್ಲಾದ್ಯಂತ ಮುಂದಿನ ನಾಲ್ಕು ರವಿವಾರಗಳಂದು ಪೂರ್ಣ ಲಾಕ್‌ಡೌನ್ ಜಾರಿಗೊಳಿಸಲಾಗುತ್ತಿದೆ. ಜಿಲ್ಲಾದಂತ್ಯ ರಾತ್ರಿ 8ರಿಂದ ಮರುದಿನ ಬೆಳಗ್ಗೆ 5 ಗಂಟೆಯವರೆಗೆ ರಾತ್ರಿ ಕರ್ಫ್ಯೂ ಜಾರಿಯಲ್ಲಿರುತ್ತದೆ. ಸೋಮವಾರದಿಂದ ಶನಿವಾರದವರೆಗೆ ರಾತ್ರಿ 8ರವರೆಗೆ ಎಲ್ಲ ಮಾರಾಟ ಮಳಿಗೆಗಳನ್ನು ಮುಚ್ಚಬೇಕು. ಅಗತ್ಯ ವಸ್ತುಗಳು ಹೊರತಾಗಿಸಿ ಬೇರಾವುದೇ ಅಂಗಡಿ ಮುಂಗಟ್ಟುಗಳನ್ನು= ತೆಗೆಯುವಂತಿಲ್ಲ. ಈ ಅವಧಿಯಲ್ಲಿ ಹೊರಗಿನಿಂದ ಮದ್ಯ ಇತ್ಯಾದಿಗಳನ್ನು ತಂದು ಮಾರುವುದು ಕಂಡು ಬಂದಲ್ಲಿ ಅಂಥವರ ವಿರುದ್ಧ ಕಾನೂನು ಕ್ರಮ ಜರುಗಿಸುವುದಾಗಿ ಜಿಲ್ಲಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Raichur: ರಾಜ್ಯದಿಂದ ತೆಲಂಗಾಣಕ್ಕೆ ಭತ್ತ ಸಾಗಣೆ ನಿರ್ಬಂಧ ತೆರವಿಗೆ ಆಗ್ರಹ
ಸಿಂಧನೂರು: ಲಾರಿ ಪಲ್ಟಿಯಾಗಿ ರಸ್ತೆ ಬದಿ ನಿಂತಿದ್ದ ಇಬ್ಬರು ಇಂಜಿನಿಯರ್ ಸೇರಿ ಮೂವರ ದುರ್ಮರಣ
Raichur: ಪಿಡಿಒ ಪ್ರಶ್ನೆಪತ್ರಿಕೆ ವಿಳಂಬ ಗಲಾಟೆ; ಈಗ ವಿಡಿಯೋ ವೈರಲ್
Raichur; ಬೇಡಿಕೆ ಕುಸಿತ: ಆರ್‌ಟಿಪಿಎಸ್ 5 ವಿದ್ಯುತ್ ಘಟಕ ಸ್ಥಗಿತ
Sirwar: ಹಳೆ ದ್ವೇಷ-ಯುವಕನ ಕೊಲೆ; ಮೂವರ ಬಂಧನ
MUST WATCH
ಹೊಸ ಸೇರ್ಪಡೆ
Atlee Kumar; ಸಲ್ಮಾನ್ ಖಾನ್ ಜತೆಗೆ ಅಟ್ಲಿ ಸಿನಿಮಾ
ಪ್ರಧಾನ ಸಂಪಾದಕ ನ್ಯೂಯಾರ್ಕ್ ನ ಬೆಂಕಿ ಬಸಣ್ಣ ವಿರಚಿತ ‘ವಿಶ್ವಕನ್ನಡ ಕೂಟಗಳ ಕೈಪಿಡಿ’ ಬಿಡುಗಡೆ
Tumkur: ನೀರಾವರಿ ವಿದ್ಯುತ್ ಬಿಲ್ ಪಾವತಿ ಮಾಡುವಂತೆ ಸಿದ್ದಗಂಗಾ ಮಠಕ್ಕೆ ಪತ್ರ
Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾ*ವು
Kadur: ದೇಗುಲ ಕಂಪೌಂಡ್ ಪ್ರವೇಶಿಸಿದರೆಂದು ದಲಿತರಿಗೆ ದಂಡ; ಸವರ್ಣೀಯರಿಂದ ದೇಗುಲಕ್ಕೆ ಬೀಗ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.