ಮುಂಬಯಿ,ಮಹಾರಾಷ್ಟ್ರದ ಕೆಲವು ಭಾಗಗಳಲ್ಲಿ ಮುಂದುವರೆದ ಮಳೆಯ ಆರ್ಭಟ
ಜನ ಜೀವನ ಅಸ್ತವ್ಯಸ್ತ
Team Udayavani, Jul 5, 2020, 6:30 PM IST
ಮುಂಬಯಿ: ಮುಂಬಯಿ, ಥಾಣೆ ಮತ್ತು ಕೊಂಕಣ ಮಹಾರಾಷ್ಟ್ರದ ಇತರ ಭಾಗಗಳಲ್ಲಿ ರವಿವಾರ ಸತತ ಮೂರನೇ ದಿನವೂ ಭಾರೀ ಮಳೆಯಾಗಿದೆ.
ಎಡೆಬಿಡದೆ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ಮಹಾನಗರದ ಕೆಲವು ತಗ್ಗು ಪ್ರದೇಶಗಳು ಜಲಾವೃತಗೊಂಡು ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ.
ಮುಂದಿನ 24 ಗಂಟೆಗಳಲ್ಲಿ ನಗರ ಮತ್ತು ಉಪನಗರಗಳ ಪ್ರತ್ಯೇಕ ಸ್ಥಳಗಳಲ್ಲಿ ಭಾರೀ ಮಳೆ ಬೀಳುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಮುನ್ಸೂಚನೆ ನೀಡಿದೆ.
ಮಧ್ಯ ಮುಂಬಯಿಯ ಹಿಂದ್‌ಮಮಾತಾ ಮತ್ತು ಪೂರ್ವ ಉಪನಗರ ಚೆಂಬೂರು ಸೇರಿದಂತೆ ನಗರದ ಕೆಲವು ತಗ್ಗು ಪ್ರದೇಶಗಳು ಮುಳುಗಡೆಯಾಗಿವೆ.
ದಕ್ಷಿಣ ಮುಂಬಯಿಯ ಕೊಲಾಬಾ ವೀಕ್ಷಣಾಲಯವು ರವಿವಾರ ಬೆಳಗ್ಗೆ 8.30ರ ವರೆಗೆ ಕಳೆದ 24 ಗಂಟೆಗಳ ಅವಧಿಯಲ್ಲಿ 129.6 ಮಿ.ಮೀ. ಮಳೆ ದಾಖಲಿಸಿದರೆ, ಪಶ್ಚಿಮ ಉಪನಗರಗಳ ಸಾಂತಾಕ್ರೂಜ್ ಹವಾಮಾನ ಕೇಂದ್ರವು ಈ ಅವಧಿಯಲ್ಲಿ 200.8 ಮಿ.ಮೀ. ಮಳೆಯನ್ನು ದಾಖಲಿಸಿದೆ ಎಂದು ಐಎಂಡಿ ತಿಳಿಸಿದೆ.
ಸಯಾನ್, ದಾದರ್, ಮಿಲನ್ ಸಬ್‌ವೇ, ಕಾಂದಿವಲಿ, ಮಲಾಡ್, ಗೋರೆಗಾಂವ್ ಮತ್ತು ದಹಿಸರ್ ಪ್ರದೇಶಗಳಲ್ಲಿ ಮನೆಗಳು ಮತ್ತು ಅಂಗಡಿಗಳಿಗೆ ನೀರು ನುಗ್ಗಿರುವ ಬಗ್ಗೆ ವರದಿಯಾಗಿದೆ.
ನಿರಂತರ ಮಳೆಯಿಂದಾಗಿ ಮೀಠಿ ನದಿಯ ನೀರಿನ ಮಟ್ಟವೂ ಏರುತ್ತಿದೆ. ವಿವಿಧೆಡೆ ಕಟ್ಟಡಗಳ ಪಾರ್ಶ್ವ ಭಾಗ ಮತ್ತು ಗೋಡೆ ಕುಸಿತದಂತಹ ಘಟನೆಗಳು ಕೂಡ ವರದಿಯಾಗಿವೆ.
ನೆರೆಯ ಥಾಣೆ, ನವಿಮುಂಬಯಿ ಮತ್ತು ಸಿಂಧುದುರ್ಗ ಸೇರಿದಂತೆ ಕೊಂಕಣ ಪ್ರದೇಶದ ಇತರ ಕೆಲವು ಪ್ರದೇಶಗಳಲ್ಲೂ ಭಾರೀ ಮಳೆ ಮುಂದುವರಿದಿದೆ.
ಸಿಂಧುದುರ್ಗದಲ್ಲಿ ನದಿಗಳು ಪ್ರವಾಹಕ್ಕೆ ಸಿಲುಕಿದ್ದು, ಭತ್ತದ ಗದ್ದೆಗಳು ನೀರಿನ ಅಡಿಯಲ್ಲಿ ಮುಳುಗಿವೆ ಮತ್ತು ಹೆಚ್ಚಿನ ವೇಗದ ಗಾಳಿಯಿಂದಾಗಿ ಮರ ಕುಸಿತದಂತಹ ಘಟನೆಗಳು ವರದಿಗಳು ವರದಿಯಾಗಿವೆ. ಮುಂಬಯಿ ಗೋವಾ ಹೆದ್ದಾರಿಯ ಮೊರ್ಗಾಂವ್‌ನಲ್ಲಿ ಭೂಕುಸಿತದ ಘಟನೆ ವರದಿಯಾಗಿದೆ. ಅದೇ, ಉಪನಗರ ಬಾಂದ್ರಾದಲ್ಲಿ ಶಿಥಿಲಗೊಂಡ ಕಟ್ಟಡದ ಒಂದು ಭಾಗ ಕುಸಿದಿದೆ ಆದರೆ ಈ ಎರಡೂ ಘಟನೆಗಳಲ್ಲಿ ಯಾರೂ ಗಾಯಗೊಂಡಿಲ್ಲ.
ಹವಾಮಾನ ಇಲಾಖೆಯ ಕಡೆಯಿಂದ ಎಚ್ಚರಿಕೆಯ ಹಿನ್ನೆಲೆಯಲ್ಲಿ ಜನರಿಗೆ ಮನೆಗಳಿಂದ ಹೊರಬಾರದಂತೆ ಮನವಿ ಮಾಡಲಾಗಿದೆ. ಹೈಟೈಡ್ ಹಿನ್ನೆಲೆಯಲ್ಲಿ ಜನರಿಗೆ ಕಡಲ ತೀರಗಳಿಂದ ದೂರ ಉಳಿಯುವಂತೆಯೂ ಕೇಳಿಕೊಳ್ಳಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನಾನು ಶೀಶಮಹಲ್ ಕಟ್ಟಿಲ್ಲ, ಜನರಿಗೆ ಮನೆ ಕಟ್ಟಿಸಿದ್ದೇನೆ: ಕೇಜ್ರಿವಾಲ್ ಗೆ ಮೋದಿ ಟಾಂಗ್
Governor: ಮಣಿಪುರದ 19 ನೇ ರಾಜ್ಯಪಾಲರಾಗಿ ಅಜಯ್ ಭಲ್ಲಾ ಪ್ರಮಾಣ ವಚನ ಸ್ವೀಕಾರ
Back to Life: ಸತ್ತ ವ್ಯಕ್ತಿಯನ್ನು ಬದುಕಿಸಿದ ರೋಡ್ ಹಂಪ್… ರಸ್ತೆಯಲ್ಲೇ ನಡೆಯಿತು ಪವಾಡ
Shocking: ಹೆರಿಗೆ ವೇಳೆ ಹೃದಯಾಘಾತ: ಮಹಿಳೆ ಮೃತ್ಯು, ಮಗುವನ್ನು ಉಳಿಸುವ ಯತ್ನವೂ ವಿಫಲವಾಯಿತು
Tragedy: ರೈಲು ಹಳಿ ಮೇಲೆ ಕೂತು PUBG ಆಡುತ್ತಿದ್ದ ಮೂವರು ಯುವಕರ ದೇಹ ಛಿದ್ರ ಛಿದ್ರ…
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಗದಗ: ಮಾವು ಬಂಪರ್ ಬೆಳೆ ನಿರೀಕ್ಷೆ- ಬೆಳೆಗಾರರಿಗೆ ಸಂತಸ
Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್
Test Cricket; ರೋಹಿತ್ ಆಯ್ತು, ಈಗ ವಿರಾಟ್..: ಬಿಸಿಸಿಐ ಕಳಿಸಿದ ʼಆʼ ಸಂದೇಶದಲ್ಲಿ ಏನಿದೆ?
Gangolli: ಪಂಚಾಯತ್‌ನೊಳಗೆ ನಮಾಜ್; ಹಿಂದೂ ಹಿತರಕ್ಷಣಾ ಸಮಿತಿ ಪ್ರತಿಭಟನೆ
Anandpur: ಮುಂದುವರೆದ ಕಾಡಾನೆಗಳ ದಾಳಿ… ಇಲಾಖೆ ವಿರುದ್ಧ ರೈತರ ಆಕ್ರೋಶ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.