ಪರಿಸ್ಥಿತಿ ನಿಯಂತ್ರಣದಲ್ಲಿದೆ, ಭಯ ಬೇಡ : ಸಚಿವ ಸುಧಾಕರ್
Team Udayavani, Jul 5, 2020, 8:03 PM IST
ಬೆಂಗಳೂರು : ರಾಜ್ಯ ಮತ್ತು ರಾಜಧಾನಿ ಬೆಂಗಳೂರಿನಲ್ಲಿ ಕೋವಿಡ್ ನಿಯಂತ್ರಣದಲ್ಲಿದ್ದು ಜನರು ಆತಂಕಪಡುವ ಅಗತ್ಯವಿಲ್ಲ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ ಹೇಳಿದ್ದಾರೆ.
ಕೆಲ ಮಾಧ್ಯಮಗಳ ವರದಿಗಳಿಂದ ಜನರು ಭಯಭೀತರಾಗಿದ್ದಾರೆ. ಇದೊಂದು ಮಾರಣಾಂತಿಕ ರೋಗ ಎಂಬ ಭೀತಿಯಲ್ಲಿ ಅನೇಕರು ಮಾನಸಿಕ ಒತ್ತಡ ಮತ್ತು ಖಿನ್ನತೆಗೆ ಒಳಗಾಗಿದ್ದಾರೆ. ಅಂತಹ ಆತಂಕಕಾರಿ ಪರಿಸ್ಥಿತಿ ಇಲ್ಲ ಎಂದು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಜಗತ್ತಿನಾದ್ಯಂತ 1,13,87,499 ಮಂದಿ ಸೋಂಕಿತರಿದ್ದಾರೆ. ಇದರಲ್ಲಿ 64,45,410 ಮಂದಿ ಗುಣಮುಖರಾಗಿದ್ದಾರೆ, ಶೇಕಡವಾರು ಪ್ರಮಾಣ 56.60 ಇದೆ. 5,33,621 ಮಂದಿ ಸಾವಿಗೀಡಾಗಿದ್ದಾರೆ.ಸಾವಿನ ಶೇಕಡಾವಾರು ಪ್ರಮಾಣ 4.68 ರಷ್ಟಿದೆ. ಭಾರತದಲ್ಲಿ 6,74,313 ಸೋಂಕಿತರಿದ್ದು, ಶೇಕಡಾ 60.67 ರಷ್ಟು ಮಂದಿ ಗುಣಮುಖರಾಗಿದ್ದಾರೆ. ಸಾವಿನ ಪ್ರಮಾಣ ಶೇಕಡಾ 2.86 ರಷ್ಟಿದೆ. ಆದರೆ ರಾಜ್ಯದಲ್ಲಿ ಇದು ರಾಷ್ಟ್ರದ ಪ್ರಮಾಣಕ್ಕಿಂತ ಕಡಿಮೆ. ನಮ್ಮಲ್ಲಿ ಸಾವಿನ ಪ್ರಮಾಣ ಶೇಕಡಾ 1.55ರಷ್ಟಿದೆ. ಇನ್ನೂ ದೇಶದ ಮಹಾನಗರಗಳಾದ ದಿಲ್ಲಿ, ಮುಂಬಯಿ, ಚೆನ್ನೈಗಳಿಗೆ ಹೋಲಿಕೆ ಮಾಡಿದಾಗ ಬೆಂಗಳೂರು ನಗರದಲ್ಲಿ ಮರಣ ಪ್ರಮಾಣ ಶೇಕಡಾ 1.46ರಷ್ಟು. ಹೀಗಾಗಿ ಯಾರೊಬ್ಬರು ಭಯ ಪಡಬೇಕಿಲ್ಲ ಎಂದು ವಿವರಿಸಿದರು.
ಕಳೆದ ಹತ್ತು ದಿನಗಳಿಂದ ಈಚೆಗೆ ಸೋಂಕಿತರ ಸಂಖ್ಯೆ ಹೆಚ್ಚುತ್ತಿದೆ. ಅವರಿಗೆ ಚಿಕಿತ್ಸೆ ನೀಡಲು ಮತ್ತು ನಿಗಾ ವಹಿಸಲು ಅಗತ್ಯ ಕ್ರಮ ಕೈಗೊಳ್ಳಲಾಗಿದೆ.
ನಗಗರದ ವಾಡ್‌೯ನಿಂದ ಗ್ರಾಮದ ಹಂತದವರೆಗೆ ಕಾಯ೯ಪಡೆಗಳನ್ನು ರಚಿಸಲಾಗಿದೆ. ಇದರ ಉಸ್ತುವಾರಿಗಾಗಿಯೇ ಹಿರಿಯ ಅಧಿಕಾರಿ ಅತೀಕ್ ಅವರನ್ನು ನಿಯೋಜಿಸಲಾಗಿದೆ.
ಈ ಸಮಿತಿಗಳು ಹೊಸದಾಗಿ ಹೊರಡಿಸಿರುವ ಮಾಗ೯ಸೂಚಿ ಅನ್ವಯ ರೋಗ ಲಕ್ಷಣ ಇಲ್ಲದ ರೋಗಿಗಳ ಕ್ವಾರಂಟೈನ್ ವ್ಯವಸ್ಥೆ, ಜ್ವರ ಲಕ್ಷಣ ಇರುವವರು, ಇತರೆ ಗಂಭೀರ ಕಾಯಿಲೆಗಳಿಂದ ಬಳಲುತ್ತಿರುವ ಹಿರಿಯ ನಾಗರೀಕರನ್ನು ಗುರುತಿಸಿ ಟೆಸ್ಟ್‌ಗೆ ಒಳಪಡಿಸುವ ಜವಾಬ್ದಾರಿ ನಿವ೯ಹಿಸಲಿದ್ದಾರೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Shimoga: ಎಸ್ಐಟಿ ರಚನೆ ಮೂಲಕ ಕಾಂಗ್ರೆಸ್ ಹಗೆ ತೀರಿಸಿಕೊಳ್ಳುತ್ತಿದೆ: ಆರಗ ಜ್ಞಾನೇಂದ್ರ
Organ Donation: ಸಾವಿನ ನಂತರವೂ ನೆರವಾದ ಜೀವ
Anandapura: ಸಾಲದ ಬಾಧೆ ತಾಳಲಾರದೆ ರೈತ ಆತ್ಮಹ*ತ್ಯೆ
Maharashtra Election: ಅಮಿತ್ ಶಾ ಅವರ ಬ್ಯಾಗ್ ಪರೀಕ್ಷಿಸಿದ ಚುನಾವಣಾ ಅಧಿಕಾರಿಗಳು
Bengaluru: ವೈದ್ಯೆಗೆ ಲೈಂಗಿಕ ಕಿರುಕುಳ: ಪಿಎಸ್‌ಐ ವಿರುದ್ದ ಪೊಲೀಸ್ ಆಯುಕ್ತರಿಗೆ ದೂರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.