ಒಂದೇ ದಿನ 24,912 ಪ್ರಕರಣಗಳು: ವಿಶ್ವದ ಸೋಂಕಿತರ ಪಟ್ಟಿಯಲ್ಲಿ ಮೂರನೇ ಸ್ಥಾನಕ್ಕೇರಿದ ಭಾರತ
Team Udayavani, Jul 6, 2020, 8:39 AM IST
ಹೊಸದಿಲ್ಲಿ: ದೇಶದಲ್ಲಿ ಕೋವಿಡ್-19 ಸೋಂಕಿನ ನಂಜು ದಿನದಿಂದ ದಿನಕ್ಕೆ ಏರಿಕೆ ಕಾಣುತ್ತಿದೆ. ಸದ್ಯ ಅತೀ ಹೆಚ್ಚು ಸೋಂಕಿತರಿರುವ ದೇಶಗಳ ಪಟ್ಟಿಯಲ್ಲಿ ಭಾರತವು ರಷ್ಯಾವನ್ನು ಹಿಂದಿಕ್ಕಿ ಮೂರನೇ ಸ್ಥಾನಕ್ಕೇರಿದೆ.
ರವಿವಾರ ಒಂದೇ ದಿನ ಭಾರತದಲ್ಲಿ ಹತ್ತಿರ ಹತ್ತಿರ 25 ಸಾವಿರ ಸೋಂಕು ಪ್ರಕರಣಗಳು ದೃಢವಾಗಿದೆ. ಅಷ್ಟೇ ಅಲ್ಲದೆ ಒಂದೇ ದಿನ 421 ಸಾವು ಪ್ರಕರಣಗಳು ಕೋವಿಡ್ -19 ಕಾರಣದಿಂದ ನಡೆದಿದೆ. ಜುಲೈ ತಿಂಗಳ ಮೊದಲ ಐದು ದಿನವೇ 2300 ಜನರು ಕೋವಿಡ್ ಸೋಂಕಿನಿಂದ ಸಾವನ್ನಪ್ಪಿದ್ದಾರೆ.
ರವಿವಾರ ಭಾರತದಲ್ಲಿ ಒಂದೇ ದಿನ 24,912 ಹೊಸ ಕೋವಿಡ್-19 ಸೋಂಕು ಪ್ರಕರಣಗಳು ದೃಢವಾಗಿದೆ. ಜೂನ್ ತಿಂಗಳಲ್ಲಿ ಒಟ್ಟು ನಾಲ್ಕು ಲಕ್ಷ ಹೊಸ ಪ್ರಕರಣಗಳು ಪತ್ತೆಯಾಗಿತ್ತು. ಆದರೆ ಜುಲೈ ತಿಂಗಳ ಮೊದಲ ಐದು ದಿನದಲ್ಲೇ ಒಂದು ಲಕ್ಷಕ್ಕಿಂತ ಹೆಚ್ಚಿನ ಸೋಂಕು ಪ್ರಕರಣಗಳು ಪತ್ತೆಯಾಗಿದೆ. ಹೀಗಾಗಿ ಸೋಂಕಿನ ವೇಗ ಏರಿಕೆ ಕಾಣುತ್ತಿದ್ದು, ಜನರನ್ನು ಆತಂಕಕ್ಕೆ ದೂಡಿದೆ.
ಸದ್ಯ ಭಾರತ ಸೋಂಕಿತರ ಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿದೆ. ಮೂರನೇ ಸ್ಥಾನದಲ್ಲಿದ್ದ ರಷ್ಯಾ ರವಿವಾರ ನಾಲ್ಕನೇ ಸ್ಥಾನಕ್ಕೆ ಜಾರಿ ಸಮಾಧಾನ ಪಟ್ಟುಕೊಂಡಿದೆ. ಮೊದಲೆರಡು ಸ್ಥಾನಗಳಲ್ಲಿ ಅಮೇರಿಕಾ ಮತ್ತು ಬ್ರೆಜಿಲ್ ದೇಶಗಳಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha:ರೈಲಿನಲ್ಲಿ ಪ್ರಯಾಣಿಕರಿಗೆ ನೀಡುವ ಹೊದಿಕೆ ಎಷ್ಟು ದಿನಗಳಿಗೊಮ್ಮೆ ತೊಳೆಯಲಾಗುತ್ತದೆ
Oath: ಕೇರಳ ಸೀರೆ ತೊಟ್ಟು, ಕೈಯಲ್ಲಿ ಸಂವಿಧಾನ ಹಿಡಿದು ಪ್ರಮಾಣ ವಚನ ಸ್ವೀಕರಿಸಿದ ಪ್ರಿಯಾಂಕಾ
Railway: ಪ್ರತಿ ಪ್ರಯಾಣದ ಬಳಿಕ ಹೊದಿಕೆಗಳನ್ನು ತೊಳೆಯುತ್ತಾರಾ? ಸಚಿವರು ಕೊಟ್ಟ ಉತ್ತರವೇನು?
Cyber Fraud Case: ದಾಳಿ ನಡೆಸಲು ಹೋದ ಇಡಿ ಅಧಿಕಾರಿಗಳ ಮೇಲೆಯೇ ತಂಡದಿಂದ ಹಲ್ಲೆ
Ranchi: ಪ್ರೇಯಸಿಯನ್ನು ಕೊಂದು 40ರಿಂದ 50 ತುಂಡು ಮಾಡಿದ ಕಟುಕ!
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Bangladesh:ಇಸ್ಕಾನ್ ನಿಷೇಧಿಸಲು ನಿರಾಕರಿಸಿದ ಬಾಂಗ್ಲಾದೇಶ ಹೈಕೋರ್ಟ್,ಸರ್ಕಾರಕ್ಕೆ ಮುಖಭಂಗ
Kota: ರಾಷ್ಟ್ರೀಯ ಹೆದ್ದಾರಿಯಲ್ಲಿ ಸೌಲಭ್ಯ ಕೊರತೆ
Hubli: ಸಮಾಜದಹಿತಕ್ಕಾಗಿ ಪಕ್ಷ ಮರೆತು ಹೋರಾಡಬೇಕು: ಕಾಶನ್ನಪ್ಪನವರ ವಿರುದ್ದ ಬೆಲ್ಲದ್ ಟೀಕೆ
Mangaluru: ವೆನ್ಲಾಕ್ ಆಸ್ಪತ್ರೆ ಹೊರರೋಗಿ ವಿಭಾಗ ವಿಸ್ತರಣೆ
Bengaluru ಭಯೋ*ತ್ಪಾದಕ ಚಟುವಟಿಕೆ ಆರೋಪಿ, ಉ*ಗ್ರ ಖಾನ್ ರುವಾಂಡದಿಂದ ಭಾರತಕ್ಕೆ ಗಡಿಪಾರು!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.