ಲಾಕ್ಡೌನ್ಗೆ ಜನ ಬೆಂಬಲ
Team Udayavani, Jul 6, 2020, 9:23 AM IST
ಯಾದಗಿರಿ: ಜಿಲ್ಲೆಯಲ್ಲಿ ಕೋವಿಡ್ ಮಹಾಮಾರಿ ನಿತ್ಯ ಅಟ್ಟಹಾಸ ಮೆರೆಯುತ್ತಿರುವುದರಿಂದ ಆತಂಕ ಗೊಂಡಿರುವ ಜನರು ರವಿವಾರ ರಾಜ್ಯ ಸರ್ಕಾರ ಜಾರಿಗೊಳಿಸಿರುವ ಸಂಪೂರ್ಣ ಲಾಕ್ಡೌನ್ಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತಪಡಿಸಿದ್ದಾರೆ.
ಜಿಲ್ಲೆಯಲ್ಲಿ ಹೆಚ್ಚಾಗಿ ಮಹಾರಾಷ್ಟ್ರದಿಂದ ಹಿಂತಿರುಗಿರುವ ಜನರಲ್ಲಿಯೇ ಕೋವಿಡ್ ಸೋಂಕು ದೃಢವಾಗುತ್ತಿದೆ. ಸರ್ಕಾರ ಮಾರ್ಚ್ನಲ್ಲಿ ಸೋಂಕಿತರೇ ಇಲ್ಲದಿರುವ ವೇಳೆ ಎರಡು ತಿಂಗಳಿಗೂ ಅಧಿಕ ಕಾಲ ಲಾಕ್ಡೌನ್ ಜಾರಿ ಮಾಡಿತ್ತು. ಇದೀಗ ಸೋಂಕಿತರು ಹೆಚ್ಚಾಗಿ ಪತ್ತೆಯಾಗುತ್ತಿರುವ ಸಂದರ್ಭದಲ್ಲಿ ಅನ್ಲಾಕ್ ಮಾಡಿದ್ದಾರೆ ಎನ್ನುವ ಅಸಮಾಧಾನ ವ್ಯಕ್ತವಾಗಿತ್ತು.
ಜಿಲ್ಲೆಯಲ್ಲಿ ಈ ವರೆಗೆ 971 ಸೋಂಕಿತರು ಪತ್ತೆಯಾಗಿದ್ದು, ಜನರಲ್ಲಿ ಸಾಕಷ್ಟು ಭಯ ಹುಟ್ಟಿಸಿದ್ದು ಅವರಲ್ಲಿ 868 ಜನರು ಗುಣಮುಖವಾಗಿದ್ದು ಸಮಾಧಾನದ ಸಂಗತಿಯಾಗಿದ್ದರೂ ಕೂಡ ಜಿಲ್ಲೆಯಲ್ಲಿ ಸೋಂಕಿನ ಮೂಲವೇ ಪತ್ತೆಯಾಗದಿರುವವರಲ್ಲಿ ಸೋಂಕು ಪತ್ತೆಯಾಗುತ್ತಿದ್ದರಿಂದ ಎಲ್ಲಿ ಸಮುದಾಯಕ್ಕೆ ಹರಡಿದೆಯೋ ಎನ್ನುವ ಭಯವೂ ಇದೆ. ಸರ್ಕಾರ ನಿಯಮದಂತೆ ಯಾದಗಿರಿಯಲ್ಲಿ ಎಲ್ಲಾ ಅಂಗಡಿ ಮುಂಗಟ್ಟುಗಳನ್ನು ಬಂದ್ ಮಾಡಲಾಗಿತ್ತು, ಅಲ್ಲದೆ ಖಾಸಗಿ, ಸರ್ಕಾರಿ ಸಾರಿಗೆ ವ್ಯವಸ್ಥೆಯೂ ಸಂಪೂರ್ಣ ಬಂದ್ ಮಾಡಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Yadagiri: ಮನೆ ಮೇಲೆ ಗಾಂಜಾ ಗಿಡ ಬೆಳೆದ ವ್ಯಕ್ತಿ ಬಂಧನ
Yadagiri: ರೈತರಿಗೆ ಭೂಮಿ ನೀಡಿದ್ದೇ ಕಾಂಗ್ರೆಸ್ ಪಕ್ಷ: ವಿ.ಎಸ್.ಉಗ್ರಪ್ಪ
ಕಳ್ಳರ ಮಾಹಿತಿ ನೀಡಿದ್ದೇ ಮುಳುವಾಯ್ತು… ಜೈಲಿನಿಂದ ಬರುತ್ತಿದ್ದಂತೆ ವ್ಯಕ್ತಿಯ ಹತ್ಯೆ
Hunasagi: ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಕಾಷ್ಟ ಶಿಲ್ಪಿ ಕಂಚಗಾರ ಇನ್ನಿಲ್ಲ
Yadgiri: ಯಾವುದೇ ರೈತರ ಭೂಮಿ ವಕ್ಫ್ ಗೆ ವರ್ಗಾವಣೆಯಾಗಿಲ್ಲ: ಸಚಿವ ದರ್ಶನಾಪುರ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.