11 ಮಂದಿಗೆ ಕೋವಿಡ್ ಸೋಂಕು-ಮತ್ತೆರಡು ಸಾವು


Team Udayavani, Jul 6, 2020, 10:12 AM IST

11 ಮಂದಿಗೆ ಕೋವಿಡ್ ಸೋಂಕು-ಮತ್ತೆರಡು ಸಾವು

ದಾವಣಗೆರೆ: ದಾವಣಗೆರೆಯಲ್ಲಿ ಇದೇ ಮೊದಲ ಬಾರಿಗೆ ಒಂದೇ ದಿನ ಮಹಾಮಾರಿ ಕೋವಿಡ್ ದಿಂದ ಇಬ್ಬರು ಸಾವನ್ನಪ್ಪಿದ್ದಾರೆ. ದಾವಣಗೆರೆಯ ಆಜಾದ್‌ ನಗರದ ಒಂದನೇ ಮುಖ್ಯ ರಸ್ತೆ ಹನ್ನೊಂದನೇ ಕ್ರಾಸ್‌ ನಿವಾಸಿ 53 ವರ್ಷದ ವ್ಯಕ್ತಿ (ರೋಗಿ ನಂಬರ್‌ 18102) ಮೃತಪಟ್ಟಿದ್ದಾರೆ. ತೀವ್ರ ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ಅವರನ್ನು ಜು.1 ರಂದು ಆಸ್ಪತ್ರೆಗೆ ಸೇರಿಸಲಾಗಿತ್ತು. ಶನಿವಾರ ತಡರಾತ್ರಿ ಮೃತಪಟ್ಟಿದ್ದಾರೆ.

ಮೂಲತಃ ಬಳ್ಳಾರಿ ಜಿಲ್ಲೆಯ ಕೊಟ್ಟೂರಿನ 53 ವರ್ಷದ ವ್ಯಕ್ತಿ (ರೋಗಿ ನಂಬರ್‌ 21680) ಮೃತಪಟ್ಟಿದ್ದಾರೆ. ತೀವ್ರ ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ಅವರಿಗೆ ಕೋವಿಡ್ ಸೋಂಕು ದೃಢಪಟ್ಟಿತ್ತು. ಜೂ. 29 ರಂದು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಜಿಲ್ಲೆಯಲ್ಲಿ ಈವರೆಗೆ 11 ಜನರು ಕೋವಿಡ್ ದಿಂದ ಸಾವನ್ನಪ್ಪಿದ್ದಾರೆ. ಭಾನುವಾರ ಒಂದೇ ಕುಟುಂಬದ ನಾಲ್ವರು ಒಳಗೊಂಡಂತೆ 11 ಜನರಲ್ಲಿ ಹೊಸದಾಗಿ ಕೋವಿಡ್ ಸೋಂಕು ಕಾಣಿಸಿಕೊಂಡಿದೆ. ಬಳ್ಳಾರಿ ಜಿಲ್ಲೆಯ ಕೊಟ್ಟೂರಿನ 58 ವರ್ಷದ ವ್ಯಕ್ತಿ (ರೋಗಿ ನಂಬರ್‌ 21680) ತೀವ್ರ ಉಸಿರಾಟದ ಸಮಸ್ಯೆ ಹೊಂದಿದ್ದು ಕೋವಿಡ್ ದೃಢಪಟ್ಟಿದೆ.

ತೀವ್ರ ಶೀತದಿಂದ ದಾವಣಗೆರೆಯ ನಿಟುವಳ್ಳಿಯ 25 ವರ್ಷದ ಯುವಕ(ರೋಗಿ ನಂಬರ್‌ 21681) ಮತ್ತು ಹರಿಹರದ ಎಪಿಎಂಸಿ ಪ್ರದೇಶ ನಿವಾಸಿ 30 ವರ್ಷದ ವ್ಯಕ್ತಿಗೆ (ರೋಗಿ ನಂಬರ್‌ 21682) ಸೋಂಕು ಹರಡಿದೆ. ರೋಗಿ ನಂಬರ್‌ 10389 ಸಂಪರ್ಕದಿಂದ ದಾವಣಗೆರೆಯ ಬೀಡಿ ಲೇಔಟ್‌ನ 48 ವರ್ಷದ ವ್ಯಕ್ತಿ (ರೋಗಿ ನಂಬರ್‌ 21683),26 ವರ್ಷದ ಮಹಿಳೆ (ರೋಗಿ ನಂಬರ್‌ 21685) ಸೋಂಕು ಕಾಣಿಸಿಕೊಂಡಿದೆ. ರೋಗಿ ನಂಬರ್‌ 16672 ಸಂಪರ್ಕದಿಂದ ಹೊನ್ನಾಳಿ ತಾಲೂಕಿನ ಕ್ಯಾಸಿನಕೆರೆಯ 39 ವರ್ಷದ ಮಹಿಳೆ (ರೋಗಿ ನಂಬರ್‌ 21684) ಸೋಂಕು ಹರಡಿದೆ. ರೋಗಿ ನಂಬರ್‌ 21687 ಸಂಪರ್ಕದಿಂದ ದಾವಣಗೆರೆಯ ನಂದಿನಿ ರೆಸ್ಟೋರೆಂಟ್‌ನಲ್ಲಿ ಕೆಲಸ ಮಾಡುತ್ತಿದ್ದ 32 ವರ್ಷದ ಮಹಿಳೆಗೆ (ರೋಗಿ ನಂಬರ್‌ 216868) ಸೋಂಕು ದೃಢಪಟ್ಟಿದೆ.

ತೆಲಂಗಾಣ ರಾಜಧಾನಿ ಹೈದರಾಬಾದ್‌ನಿಂದ ವಾಪಾಸ್ಸಾಗಿರುವ ದಾವಣಗೆರೆಯ ಎಸ್‌.ಎಸ್‌. ಅಪಾರ್ಟ್ ಮೆಂಟ್‌ ಲೇ ಔಟ್‌ನ 38 ವರ್ಷದ ವ್ಯಕ್ತಿ (ರೋಗಿ ನಂಬರ್‌ 21687), 32 ವರ್ಷದ ಮಹಿಳೆ (ರೋಗಿ ನಂಬರ್‌ 21688), 5 ವರ್ಷದ ಬಾಲಕಿ (ರೋಗಿ ನಂಬರ್‌ 21689), 7 ವರ್ಷದ ಬಾಲಕ (ರೋಗಿ ನಂಬರ್‌ 21690) ಸೋಂಕು ಕಾಣಿಸಿಕೊಂಡಿದೆ. ಕೋವಿಡ್ ದಿಂದ ಗುಣಮುಖರಾದ ರೋಗಿ ನಂಬರ್‌ 10986, 15376, 15377, 15378, 15381, 15382, 15387 ಭಾನುವಾರ ಜಿಲ್ಲಾ ಕೋವಿಡ್‌ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಜಿಲ್ಲೆಯಲ್ಲಿ 356 ಪ್ರಕರಣಗಳಲ್ಲಿ ಈವರೆಗೆ 301 ಜನರು ಡಿಸ್ಚಾರ್ಜ್‌ ಆಗಿದ್ದಾರೆ. 11 ಜನರು ಸಾವನ್ನಪ್ಪಿದ್ದಾರೆ. 44 ಸಕ್ರಿಯ ಪ್ರಕರಣಗಳಿವೆ.

ಟಾಪ್ ನ್ಯೂಸ್

bidar

Road Mishap: ಬೀದರ್ ನಲ್ಲಿ ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಮೃತ್ಯು, ಮಹಿಳೆ ಗಂಭೀರ

1-s-v

Belgavi;ಸುವರ್ಣ ವಿಧಾನ ಸೌಧದ ಸುತ್ತ ನಿಷೇಧಾಜ್ಞೆ

congress

Maharashtra ಮತದಾನ ಮುಗಿದ ನಂತರ 7% ಹೆಚ್ಚಳ : ECI ಸ್ಪಷ್ಟಪಡಿಸಬೇಕು ಎಂದ ಕಾಂಗ್ರೆಸ್

Mumbai: ಆತ್ಮಹತ್ಯೆಗೂ 15 ನಿಮಿಷದ ಮೊದಲು ತಾಯಿಗೆ ಕರೆ ಮಾಡಿ ಖುಷಿಯಲ್ಲೇ ಮಾತನಾಡಿದ್ದ ಪೈಲೆಟ್

Mumbai: ಆತ್ಮಹತ್ಯೆಗೂ 15 ನಿಮಿಷದ ಮೊದಲು ತಾಯಿಗೆ ಕರೆ ಮಾಡಿ ಖುಷಿಯಲ್ಲೇ ಮಾತನಾಡಿದ್ದ ಪೈಲೆಟ್

Vijayapura: ಬಿಚ್ಚಿಟ್ಟರೆ ಬಣ್ಣ ಬಯಲು, ಬಾಯಿ ಮುಚ್ಚಿ ಕುಳಿತರೆ ಒಳ್ಳೆಯದು: ಯತ್ನಾಳ್

ಬಾಯಿ ಮುಚ್ಚಿ ಕುಳಿತರೆ ಒಳ್ಳೆಯದು, ಇಲ್ಲದಿದ್ದರೆ.. ಸ್ವಪಕ್ಷೀಯರ ವಿರುದ್ಧವೇ ಯತ್ನಾಳ್ ಕಿಡಿ

fir

Karnataka ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ವಿರುದ್ಧ ಲೈಂಗಿ*ಕ ದೌರ್ಜನ್ಯ ಪ್ರಕರಣ

1-ajmir

Ajmer dargah ಶಿವ ದೇವಾಲಯ?; ಕೋಮು ಸೌಹಾರ್ದತೆಗೆ ಭಂಗ ತರುವ ಕುತಂತ್ರ: ಖಾದಿಮರ ಮನವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Davanagere: ಗೆಳೆಯನನ್ನೇ ಕೊಲೆ ಮಾಡಿದ ಪ್ರಕರಣ… ಆರೋಪಿಗೆ ಜೀವಾವಧಿ ಶಿಕ್ಷೆ

Davanagere: ಗೆಳೆಯನನ್ನೇ ಕೊಲೆ ಮಾಡಿದ ಪ್ರಕರಣ… ಆರೋಪಿಗೆ ಜೀವಾವಧಿ ಶಿಕ್ಷೆ

ಮೀಸಲಾತಿಗೆ ಒತ್ತಾಯಿಸಿ ಡಿ.10ರಂದು ಸುವರ್ಣ ಸೌಧಕ್ಕೆ ಮುತ್ತಿಗೆ: ಬಸವ ಜಯಮೃತ್ಯುಂಜಯ ಸ್ವಾಮೀಜಿ

ಮೀಸಲಾತಿಗೆ ಒತ್ತಾಯಿಸಿ ಡಿ.10ರಂದು ಸುವರ್ಣ ಸೌಧಕ್ಕೆ ಮುತ್ತಿಗೆ: ಬಸವ ಜಯಮೃತ್ಯುಂಜಯ ಸ್ವಾಮೀಜಿ

ಯಡಿಯೂರಪ್ಪ

Politics: ಬಿಜೆಪಿ-ಜೆಡಿಎಸ್ ಸಮ್ಮಿಶ್ರ ಸರ್ಕಾರ ರಚನೆಗೆ ಪ್ರಯತ್ನ: ಬಿಎಸ್‌ ಯಡಿಯೂರಪ್ಪ

DVG-Tagaru

Davanagere: ʼಸೋಲಿಲ್ಲದ ಸರದಾರʼ ಎನಿಸಿದ್ದ ʼಬೆಳ್ಳೂಡಿ ಕಾಳಿʼ ಟಗರು ಅನಾರೋಗ್ಯದಿಂದ ನಿಧನ

Renukacharya

Davanagere: ಬಿ.ವೈ.ವಿಜಯೇಂದ್ರ ನೇತೃತ್ವದಲ್ಲಿ ರಚನೆಯಾದ 3 ತಂಡಗಳೇ ಅಧಿಕೃತ: ರೇಣುಕಾಚಾರ್ಯ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

Untitled-5

Puttur: ಮಾದಕ ಪದಾರ್ಥ ಸಹಿತ ಆರೋಪಿ ಸೆರೆ

1-reee

Udupi; ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷರಾಗಿ ರಮೇಶ್‌ ಕಾಂಚನ್‌ ಆಯ್ಕೆ

bidar

Road Mishap: ಬೀದರ್ ನಲ್ಲಿ ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಮೃತ್ಯು, ಮಹಿಳೆ ಗಂಭೀರ

1-s-v

Belgavi;ಸುವರ್ಣ ವಿಧಾನ ಸೌಧದ ಸುತ್ತ ನಿಷೇಧಾಜ್ಞೆ

congress

Maharashtra ಮತದಾನ ಮುಗಿದ ನಂತರ 7% ಹೆಚ್ಚಳ : ECI ಸ್ಪಷ್ಟಪಡಿಸಬೇಕು ಎಂದ ಕಾಂಗ್ರೆಸ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.