ಸಂಡೇ ಲಾಕ್‌ಡೌನ್: ಕಾಫಿ ನಾಡು ಸ್ತಬ್ಧ
ಮನೆಯಲ್ಲೇ ಉಳಿದ ಜನತೆ ರಸ್ತೆಗಿಳಿಯದ ಬಸ್, ಆಟೋ, ಟ್ಯಾಕ್ಸಿ
Team Udayavani, Jul 6, 2020, 1:34 PM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ಚಿಕ್ಕಮಗಳೂರು: ಕೋವಿಡ್-19 ಸೋಂಕು ಹರಡುವುದನ್ನು ತಡೆಗಟ್ಟುವ ಉದ್ದೇಶದಿಂದ ರಾಜ್ಯ ಸರ್ಕಾರ ಭಾನುವಾರ ಲಾಕ್‌ಡೌನ್ ವಿಧಿಸಿದ್ದು, ಲಾಕ್‌ಡೌನ್‌ಗೆ ಕಾಫಿನಾಡಿನಲ್ಲಿ ಅಭೂತಪೂರ್ವ ಬೆಂಬಲ ವ್ಯಕ್ತವಾಯಿತು.
ಭಾನುವಾರ ಬೆಳಗ್ಗೆಯಿಂದಲೇ ಜನ ಮತ್ತು ವಾಹನ ಸಂಚಾರಕ್ಕೆ ಕಡಿವಾಣ ಹಾಕಲಾಯಿತು. ದಿನಸಿ ಅಂಗಡಿಗಳು ಸೇರಿದಂತೆ ಮೀನು ಮಾಂಸ ಮಾರುಕಟ್ಟೆಯನ್ನು ತೆರಯಲಾಗಿತ್ತು. ಜನದಟ್ಟಣೆ ಹೆಚ್ಚುತ್ತಿದ್ದ ಹಿನ್ನೆಲೆಯಲ್ಲಿ ದಿನಸಿ ಅಂಗಡಿ ಮತ್ತು ಮೀನು, ಮಾಂಸ ಮಾರುಕಟ್ಟೆಯನ್ನು ಪೊಲೀಸರು ಬಂದ್ ಮಾಡಿಸಿದರು. ನಗರದ ಎಂ.ಜಿ. ಎಸ್ತೆ, ಐ.ಜಿ. ರಸ್ತೆ, ಮಾರ್ಕೆಟ್ ರಸ್ತೆ, ಬಸವನಹಳ್ಳಿ ಮುಖ್ಯರಸ್ತೆ, ವಿಜಯಪುರ ರಸ್ತೆಗಳಲ್ಲಿ ಜನಸಂಚಾರವಿಲ್ಲದೆ ರಸ್ತೆಗಳು ಬಿಕೋ ಎನ್ನುತ್ತಿದ್ದ ದೃಶ್ಯ ಸಾಮಾನ್ಯವಾಗಿತ್ತು. ಪ್ರಮುಖ ರಸ್ತೆಗಳಲ್ಲಿರುವ ಬಟ್ಟೆ ಅಂಗಡಿ, ಗೃಹೋಪಯೋಗಿ ವಸ್ತುಗಳ ಅಂಗಡಿ, ಮೊಬೈಲ್ ಶಾಪ್ ಗಳನ್ನು ಸಂಪೂರ್ಣ ಬಂದ್ ಮಾಡಲಾಗಿತ್ತು. ಮೆಡಿಕಲ್ ಶಾಪ್ ಹಾಗೂ ಪೊಟ್ರೋಲ್ ಬಂಕ್, ಎಟಿಎಂಗಳು ಆಸ್ಪತ್ರೆಗಳು ಎಂದಿನಂತೆ ಕಾರ್ಯ ನಿರ್ವಹಿಸಿದವು.
ಗೊಂದಲಕ್ಕೊಳಗಾದ ಜನತೆ
ಅಗತ್ಯ ವಸ್ತುಗಳ ಮಾರಾಟ ಮಳಿಗೆಗಳು ತೆರೆಯಲಿದ್ದು ಉಳಿದಂತೆ ಎಲ್ಲಾ ವ್ಯಾಪಾರ- ವಹಿವಾಟುಗಳು ಸಂಪೂರ್ಣ ಬಂದ್ ಆಗಲಿವೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದರು. ಭಾನುವಾರ ಲಾಕ್‌ಡೌನ್‌ಗೆ ಕಾರ್ಯ ಪ್ರವೃತ್ತರಾದ ಪೊಲೀಸ್ ಸಿಬ್ಬಂದಿ ಅಗತ್ಯ ವಸ್ತುಗಳ ಮಾರಾಟ ಮಳಿಗೆಗಳನ್ನು ಬಂದ್ ಮಾಡಿಸಿದರು. ಇದರಿಂದ ಅಗತ್ಯ ವಸ್ತುಗಳ ಖರೀದಿಗೆ ಬಂದಿದ್ದ ಗ್ರಾಹಕರು ಮತ್ತು ಅಂಗಡಿ ಮಾಲೀಕರಲ್ಲಿ ಗೊಂದಲಕ್ಕೆ ಕಾರಣವಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮದುವೆಯಾಗಿದ್ದೇವೆ… ನಮಗೆ ರಕ್ಷಣೆ ನೀಡಿ ಎಂದು ಠಾಣೆ ಮೆಟ್ಟಿಲೇರಿದ ಪ್ರೇಮಿಗಳು
Chikkamagaluru: ಮೂರು ದಿನದ ಬಾಣಂತಿ ಮೃತ್ಯು; ವೈದ್ಯರ ನಿರ್ಲಕ್ಷ್ಯವೇ ಕಾರಣವೆಂದು ಆರೋಪ
Kottigehara: ನಿರ್ದೇಶಕ ಉಪೇಂದ್ರ ಅವರ ‘ಯುಐ’ ಚಿತ್ರದಲ್ಲಿ ಖಳನಟನಾಗಿ ನಟಿಸಿದ ಬಣಕಲ್ ನಿವಾಸಿ
Save Life: ಚಾರ್ಮಾಡಿ ಘಾಟ್‌ನಲ್ಲಿ ವ್ಯಕ್ತಿ ಆತ್ಮಹತ್ಯೆಗೆ ಯತ್ನ; ಜೀವ ರಕ್ಷಿಸಿದ ಪೊಲೀಸರು
Elephant: ಕಾಫಿನಾಡಿನಲ್ಲಿ ಕಾಡಾನೆ ನೈಟ್ ರೌಂಡ್ಸ್… ಇದು ಮುಗಿಯದ ಗೋಳು ಎಂದ ಗ್ರಾಮಸ್ಥರು
MUST WATCH
ಹೊಸ ಸೇರ್ಪಡೆ
Dharwad: ಜಿಲ್ಲಾಧಿಕಾರಿ ಕಚೇರಿಯಲ್ಲಿ ಬ್ಯಾಟರಿ ಕಳ್ಳತನ
K.V.Narayana: ವಿಮರ್ಶಕ ಪ್ರೊ.ಕೆ.ವಿ.ನಾರಾಯಣಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ
Shiva Rajkumar: ಚಿಕಿತ್ಸೆಗಾಗಿ ಅಮೆರಿಕದತ್ತ ಶಿವಣ್ಣ; ಚಿತ್ರರಂಗದ ಶುಭ ಹಾರೈಕೆ
Alert…! ವಿಮಾನಕ್ಕೆ ಬೆದರಿಕೆ ಹಾಕಿದ್ರೆ 1 ಕೋಟಿವರೆಗೆ ದಂಡ ತೆರಲು ಸಿದ್ಧರಾಗಿ!
Donald Trump: ನೀವು ತೆರಿಗೆ ಹಾಕಿದರೆ ನಾವೂ ಹಾಕುತ್ತೇನೆ… ಭಾರತಕ್ಕೆ ಟ್ರಂಪ್ ಎಚ್ಚರಿಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.