ಕಾನ್ಪುರ್ ಎನ್ ಕೌಂಟರ್ ಕೇಸ್; ವಿಕಾಸ್ ದುಬೆ ಕ್ರಿಮಿನಲ್ ಕೃತ್ಯಕ್ಕೆ ಪತ್ನಿ ರಿಚಾ ಬೆಂಗಾವಲು!
ಅಷ್ಟೇ ಅಲ್ಲ ಆಕೆ ಪೂರ್ಣ ಪ್ರಮಾಣದ ಬೆಂಬಲ ಕೂಡಾ ನೀಡಿರುವುದಾಗಿ ಪೊಲೀಸರು ಆರೋಪಿಸಿದ್ದಾರೆ.
Team Udayavani, Jul 6, 2020, 6:10 PM IST
ಕಾನ್ಪುರ್(ಉತ್ತರಪ್ರದೇಶ): ಎಂಟು ಮಂದಿ ಪೊಲೀಸರ ಹತ್ಯೆ ಪ್ರಕರಣದಲ್ಲಿನ ಹೊಣೆಗಾರಿಕೆ ಲೋಪದ ಆರೋಪದಡಿ ಇಬ್ಬರು ಸಬ್ ಇನ್ಸ್ ಪೆಕ್ಟರ್ ಹಾಗೂ ಕಾನ್ಸ್ ಟೇಬಲ್ ಸೇರಿದಂತೆ ಮೂವರನ್ನು ಸೋಮವಾರ ಅಮಾನತು ಮಾಡಲಾಗಿದೆ ಎಂದು ವರದಿ ತಿಳಿಸಿದೆ.
ಪ್ರಾಥಮಿಕ ತನಿಖೆಯ ಆಧಾರದ ಮೇಲೆ ಚೌಬೇಪುರ್ ಪೊಲೀಸ್ ಠಾಣೆಯಲ್ಲಿ ಕರ್ತವ್ಯಕ್ಕೆ ನಿಯೋಜಿಸಿದ್ದ ಸಬ್ ಇನ್ಸ್ ಪೆಕ್ಟರ್ ಗಳಾದ ಕನ್ವರ್ ಪಾಲ್, ಕೃಷ್ಣ ಕುಮಾರ್ ಶರ್ಮಾ ಮತ್ತು ಕಾನ್ಸ್ ಟೇಬಲ್ ರಾಜೀವ್ ಸೇರಿದಂತೆ ಮೂವರು ಕರ್ತವ್ಯದಿಂದ ಅಮಾನತುಗೊಂಡಿದ್ದಾರೆ ಎಂದು ಕಾನ್ಪುರ್ ಎಸ್ ಎಸ್ ಪಿ ದಿನೇಶ್ ಕುಮಾರ್ ವಿವರಿಸಿದ್ದಾರೆ. ಮೂವರ ವಿರುದ್ದ ಎಫ್ ಐಆರ್ ಕೂಡಾ ದಾಖಲಾಗಿದೆ. ಒಂದು ವೇಳೆ ಅವರು ವಿಚಾರಣೆಯಲ್ಲಿ ತಪ್ಪಿತಸ್ಥರು ಎಂದು
ಸಾಬೀತಾದಲ್ಲಿ ಮುಂದಿನ ಕ್ರಮ ಎದುರಿಸಬೇಕಾಗಲಿದೆ ಎಂದು ಎಸ್ ಎಸ್ ಪಿ ತಿಳಿಸಿದ್ದಾರೆ.
ಗ್ಯಾಂಗ್ ಸ್ಟರ್ ವಿಕಾಸ್ ದುಬೆ ಪತ್ನಿ ರಿಚಾ ದುಬೆ ಈತನ ಎಲ್ಲಾ ಕ್ರಿಮಿನಲ್ ಚಟುವಟಿಕೆಗಳಿಗೆ ನೆರವು ನೀಡುತ್ತಿದ್ದಿರುವುದಾಗಿ ಪೊಲೀಸರು ಶಂಕಿಸಿದ್ದಾರೆ. ಪೊಲೀಸ್ ವರದಿ ಪ್ರಕಾರ, ವಿಕಾಸ್ ಪತ್ನಿ ರಿಚಾ ಬಿಹಾರದ ಧಿಮೌ ಗ್ರಾಮದ ಜಿಲ್ಲಾ ಪಂಚಾಯತ್ ಚುನಾವಣೆಯಲ್ಲಿ ಸ್ಪರ್ಧಿಸಿ ಗೆಲುವು ಸಾಧಿಸಿದ್ದಳು. ಗಂಡನ ಎಲ್ಲಾ ಕಾನೂನು ಬಾಹಿರ ಚಟುವಟಿಕೆ ಬಗ್ಗೆ ಆಕೆಗೆ ತಿಳಿದಿತ್ತು. ಅಷ್ಟೇ ಅಲ್ಲ ಆಕೆ ಪೂರ್ಣ ಪ್ರಮಾಣದ ಬೆಂಬಲ ಕೂಡಾ ನೀಡಿರುವುದಾಗಿ ಪೊಲೀಸರು ಆರೋಪಿಸಿದ್ದಾರೆ. ವಿಕಾಸ್ ದುಬೆ ಎಲ್ಲಾ ಆಸ್ತಿಯನ್ನು ಆಕೆ ಹೆಸರಿಗೆ ಬರೆದಿರುವುದಾಗಿ ವರದಿ ವಿವರಿಸಿದೆ.
ಏತನ್ಮಧ್ಯೆ ನಟೋರಿಯಸ್ ಗ್ಯಾಂಗ್ ಸ್ಟರ್, ಕ್ರಿಮಿನಲ್ ಪಾತಕಿ ವಿಕಾಸ್ ದುಬೆ ಕುರಿತು ಮಾಹಿತಿ ನೀಡಿದವರಿಗೆ 2.25 ಲಕ್ಷ ರೂಪಾಯಿ ಬಹುಮಾನ ನೀಡುವುದಾಗಿ ಉತ್ತರಪ್ರದೇಶ ಡಿಜಿಪಿ ಸೋಮವಾರ ಘೋಷಿಸಿದ್ದಾರೆ. ಈ ಮೊದಲು ಒಂದು ಲಕ್ಷ ರೂಪಾಯಿ ಬಹುಮಾನ ಘೋಷಿಸಲಾಗಿತ್ತು.
ಕಾನ್ಪುರ್ ಎನ್ ಕೌಂಟರ್ ಪ್ರಕರಣದ ಪ್ರಮುಖ ಆರೋಪಿಯಾಗಿರುವ ವಿಕಾಸ್ ದುಬೆ ಮನೆ ಶೋಧದ ವೇಳೆ ಪೊಲೀಸರು ಅಪಾರ ಪ್ರಮಾಣದ ಸ್ಫೋಟಕ, ಶಸ್ತ್ರಾಸ್ತ್ರ ವಶಪಡಿಸಿಕೊಂಡಿದ್ದರು. ಇದರಲ್ಲಿ ಕೆಲವು ಆಯುಧ ಸಹಚರರ ಹೆಸರಿನಲ್ಲಿ ಲೈಸೆನ್ಸ್ ಹೊಂದಿದ್ದವು. ಆದರೆ ಅದನ್ನು ಉಪಯೋಗಿಸುತ್ತಿದ್ದದ್ದು ವಿಕಾಸ್ ದುಬೆ ಎಂದು ಪೊಲೀಸರು ತಿಳಿಸಿದ್ದಾರೆ.
ಪೊಲೀಸ್ ಮೂಲಗಳ ಪ್ರಕಾರ 8 ಮಂದಿ ಪೊಲೀಸರನ್ನು ಹತ್ಯೆಗೈದು ಪರಾರಿಯಾಗಿರುವ ಗ್ಯಾಂಗ್ ಸ್ಟರ್ ವಿಕಾಸ್ ದುಬೆ ಮಧ್ಯಪ್ರದೇಶ ಅಥವಾ ರಾಜಸ್ಥಾನದಲ್ಲಿ ಅಡಗಿರುವ ಶಂಕೆ ವ್ಯಕ್ತಪಡಿಸಿದ್ದಾರೆ. ಈತನ ಬಂಧನಕ್ಕಾಗಿ ಉತ್ತರಪ್ರದೇಶ, ನೇಪಾಳ ಗಡಿ ಸೇರಿದಂತೆ ಎಲ್ಲಾ ಪ್ರಮುಖ ಸ್ಥಳಗಳಲ್ಲಿ ವಿಕಾಸ್ ದುಬೆ ಪೋಸ್ಟರ್ ಅಂಟಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
ಇಸ್ಪೀಟ್ ಅಡ್ಡೆಯ ಮೇಲೆ ಡಿವೈಎಸ್ಪಿ ದಾಳಿ; ಮಾಜಿ ಅಧ್ಯಕ್ಷ-ಹಾಲಿ ಉಪಾಧ್ಯಕ್ಷ ಸೇರಿ 8 ಜನರ ಬಂಧನ
Anthyarambha: ನ.28ರಂದು ಕೊಂಕಣಿ ಚಲನಚಿತ್ರ “ಅಂತ್ಯಾರಂಭ’ ಪ್ರದರ್ಶನ
Belagavi Session: ರಾಜಕೀಯ ಕಿತ್ತಾಟ ಏನಿದ್ದರೂ ಸದನದ ಹೊರಗೆ ನಡೆಸಿ: ಯು.ಟಿ. ಖಾದರ್
Bharamasagara: 3 ತಿಂಗಳ ಹಿಂದೆ ಮದುವೆಯಾಗಿ ಊರಿಗೆ ವಾಪಸ್ ಆದ ಯುವಕನ ಹತ್ಯೆ
Kiccha Sudeepa: ಕ್ರಿಸ್ಮಸ್ ಗೆ ಬರುತ್ತಿದೆ ʼಮ್ಯಾಕ್ಸ್ʼ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.