ಒಂದೇ ದಿನ 51 ಜನರಿಗೆ ಕೋವಿಡ್ ಮಹಾಮಾರಿ
ಮಹಿಳಾ ವಿಶ್ವ ವಿದ್ಯಾಲಯದ ಏಳು ಜನರಲ್ಲಿ ಸೋಂಕು
Team Udayavani, Jul 6, 2020, 11:16 AM IST
ವಿಜಯಪುರ: ಜಿಲ್ಲೆಯಲ್ಲಿ ಕೋವಿಡ್ ಅಟ್ಟಹಾಸ ಮುಂದುವರೆದಿದ್ದು, ಭಾನುವಾರ ಒಂದೇ ದಿನ 51 ಜನರಲ್ಲಿ ಸೋಂಕು ದೃಢ ಪಡುವ ಮೂಲಕ ಕೋವಿಡ್ ಮಹಾಸ್ಫೋಟವಾಗಿದೆ. ಇದರೊಂದಿಗೆ ವಿಜಯಪುರ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 558ಕ್ಕೇರಿದೆ.
ಭಾನುವಾರ 51 ಜನರಿಗೆ ಸೋಂಕು ದೃಢಪಟ್ಟು ಒಟ್ಟು ಸೋಂಕಿತರ ಸಂಖ್ಯೆ 558ಕ್ಕೆ ಏರಿಕೆಯಾದ ಬೆನ್ನಲ್ಲೇ ಇದೇ ದಿನ 30 ಜನರು ಸೋಂಕು ಮುಕ್ತರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಇಂದು ಬಿಡುಗಡೆಯಾದವರು ಸೇರಿದಂತೆ ಈವರೆಗೆ ಕೋವಿಡ್ ಆಸ್ಪತ್ರೆಯಲ್ಲಿದ್ದ ಸೋಂಕಿತರಲ್ಲಿ 404 ಜನರು ಸೋಂಕುಮುಕ್ತರಾಗಿ ಮನೆಗೆ ಮರಳಿದಂತಾಗಿದೆ. ಇದರ ಮಧ್ಯೆ ಸೋಂಕಿತರಲ್ಲಿ ಈವರೆಗೆ ಮೃತಪಟ್ಟ 11 ಜನರ ಹೊರತಾಗಿಯೂ 143 ಸೋಂಕಿತರಿಗೆ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದೆ.
ಹೊಸದಾಗಿ ಸೋಂಕು ದೃಢಪಟ್ಟವರಲ್ಲಿ ಕಳೆದ ವಾರ ಕೋವಿಡ್ ಸೋಂಕಿನಿಂದ ಮೃತಪಟ್ಟಿರುವ ಸೋಂಕಿತ ಸಿಬ್ಬಂದಿಯ ಸಂಪರ್ಕದಿಂದ ಮಹಿಳಾ ವಿಶ್ವವಿದ್ಯಾಲಯದಲ್ಲಿ 7 ಜನರಿಗೆ ಸೋಂಕು ದೃಢಪಟ್ಟಿದೆ. ಎಲ್ಲ ಸೋಂಕಿತರಿಗೆ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆಸಲಾಗಿದೆ ಎಂದು ಜಿಲ್ಲಾಧಿಕಾರಿ ವೈ.ಎಸ್. ಪಾಟೀಲ ವಿವರಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura: 6ರ ಬಾಲಕನ ಮೇಲೆ ಅನೈಸರ್ಗಿಕ ಲೈಂಗಿಕ ದೌರ್ಜನ್ಯ: ಅಪರಾಧಿಗೆ 20 ವರ್ಷ ಜೈಲು
Vijayapura: ಮಹಾನಗರ ಪಾಲಿಕೆ ಉಪ ಚುನಾವಣೆ… ವಾರ್ಡ್ ನಂ.29ರಲ್ಲಿ ಬಿಜೆಪಿ ಗೆಲುವು
ಶಾಸಕರ ನಿವಾಸಕ್ಕೆ ಮುತ್ತಿಗೆ ಹಾಕಲು ಸಿದ್ಧತೆ.. ದಲಿತ ಮುಖಂಡರನ್ನು ವಶಕ್ಕೆ ಪಡೆದ ಪೊಲೀಸರು
Vijayapura: ಅಪಹರಿಸಿದ ಮಗು ಮರಳಿಸಿದ ಅಪರಿಚಿತ!: ಕಂದಮ್ಮನ ಕಿಡ್ನ್ಯಾಪ್ ಕೇಸ್ ಸುಖಾಂತ್ಯ
Nalatawad: ವಿದ್ಯುತ್ ಶಾಕ್ನಿಂದ ಮೃತಪಟ್ಟ ಕೋತಿಗೆ ಸ್ಥಳೀಯ ನಿವಾಸಿಗಳಿಂದ ಅಂತ್ಯಸಂಸ್ಕಾರ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.