ತೃಣಮೂಲ ಕಾಂಗ್ರೆಸ್ ಸರಕಾರ ಕಿತ್ತೂಗೆಯಲು ಸಕಾಲ: ನಡ್ಡಾ
ಶ್ಯಾಮಪ್ರಸಾದ್ ಮುಖರ್ಜಿ ಜನ್ಮದಿನಾಚರಣೆಯಲ್ಲಿ ಗುಡುಗು ; ಪಶ್ಚಿಮ ಬಂಗಾಲದಲ್ಲಿ ಭ್ರಷ್ಟಾಚಾರ ಮಿತಿ ಮೀರಿದೆ ಎಂದು ಆತಂಕ
Team Udayavani, Jul 7, 2020, 6:15 AM IST
ಕೋಲ್ಕತಾ: ಟಿಎಂಸಿ ಆಡಳಿತವಿರುವ ಪಶ್ಚಿಮ ಬಂಗಾಲದಲ್ಲಿ ರಾಜಕಾರಣದ ಅಪರಾಧೀಕರಣ ಹಾಗೂ ಭ್ರಷ್ಟಾಚಾರ ಎಲ್ಲೆ ಮೀರಿವೆ.
ಇಂಥ ದುರುಳ ಸರಕಾರವನ್ನು ಕಿತ್ತೂಗೆಯುವ ಕಾಲ ಬಂದಿದೆ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ವಾಗ್ಧಾಳಿ ನಡೆಸಿದ್ದಾರೆ.
ಜನ ಸಂಘದ ಅಧ್ಯಕ್ಷ ಶ್ಯಾಮ ಪ್ರಸಾದ್ ಮುಖರ್ಜಿಯವರ ಜನ್ಮ ದಿನಾಚರಣೆ ನಿಮಿತ್ತ ಕೋಲ್ಕತಾದ ಬಿಜೆಪಿ ಕೇಂದ್ರ ಕಚೇರಿಯಲ್ಲಿ ಆಯೋಜಿಸಲಾಗಿದ್ದ ಸಮಾರಂಭದಲ್ಲಿ ಅವರು ಮಾತನಾಡಿದರು.
‘ಜವಾಹರಲಾಲ್ ನೆಹರೂ ಅವರ ಅನುಕೂಲ ಸಿಂಧು ರಾಜಕಾರಣವನ್ನು ಆರಂಭದಿಂದಲೇ ವಿರೋಧಿಸುತ್ತಾ ಬಂದಿದ್ದ ಶ್ಯಾಮ ಪ್ರಸಾದ್ ಮುಖರ್ಜಿ, ಭಾರತದ ಸಮಗ್ರ ಏಕತೆಗಾಗಿ ಹೋರಾಡಿದರು.
ಇಂದು, ಅವರ ಕನಸು ನನಸಾಗಿದೆ. ಜಮ್ಮು ಕಾಶ್ಮೀರದ ವಿಶೇಷ ಸ್ಥಾನಮಾನವನ್ನು ಮೋದಿ ಸರಕಾರ ಹಿಂಪಡೆದಿದೆ. ಇಂಥ ಸಂದರ್ಭದಲ್ಲೇ ನಾವು ಮುಖರ್ಜಿಯವರ ಹುಟ್ಟುಹಬ್ಬವನ್ನು ಆಚರಿಸುತ್ತಿರುವುದು ನಿಜಕ್ಕೂ ಅರ್ಥಪೂರ್ಣವಾದ ವಿಚಾರ” ಎಂದರು.
‘ಬಂಗಾಲದಲ್ಲಿ ರಾಜಕೀಯ ಅಪರಾಧೀಕರಣ ಮೇರೆ ಮೀರಿದೆ. ಪಶ್ಚಿಮ ಬಂಗಾಳದೆಲ್ಲೆಡೆ ಕಮೀಷನ್ ದಂಧೆ ಚಾಲ್ತಿಯಲ್ಲಿದೆ. ಕಮೀಷನ್ ಕೇಳುವ ರಾಜಕಾರಣಿಗಳನ್ನು ಅಧಿಕಾರದಿಂದ ಕೆಳಗಿಳಿಸಬೇಕಿದೆ. ಅಂದರೆ, ಟಿಎಂಸಿಯ ಜನವಿರೋಧಿ ಆಡಳಿತವನ್ನು ಕೊನೆಗಾಣಿಸಬೇಕಿದೆ. ಬಂಗಾಳದ ಗತವೈಭವವನ್ನು ಮರುಸ್ಥಾಪಿಸಬೇಕಿದೆ” ಎಂದು ಅವರು ವಿವರಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.