ವಿವಿಧ ಯೋಜನೆಗೆ ಅನುದಾನ ವಿತರಣೆ
Team Udayavani, Jul 7, 2020, 6:57 AM IST
ಕೋಲಾರ: ತಾಲೂಕು ಶಿಬಿರ ಕಚೇರಿಯಲ್ಲಿ ಕೋಚಿಮುಲ್ ನಿರ್ದೇಶಕ ಡಿ.ವಿ.ಹರೀಶ್, ಹಾಲು ಉತ್ಪಾದಕರಿಗೆ ಒಕ್ಕೂಟದಿಂದ ದೊರೆಯುವ ವಿವಿಧ ಯೋಜನೆಗಳ ಅನುದಾನ ವಿತರಿಸಿದರು. ರಾಸುಗಳ ಗುಂಪು ವಿಮೆ ಮೊತ್ತ 10 ಲಕ್ಷ ರೂ., ಮಹಿಳಾ ಹಾಲು ಉತ್ಪಾದಕರ ಸಂಘಗಳಲ್ಲಿ ಹಾಲು ಉತ್ಪಾದನೆ ಹೆಚ್ಚಿಸಲು 2 ಲಕ್ಷ ರೂ., ಬಿಎಂಸಿ ಸಿವಿಲ್ ಕಾಮಗಾರಿಗೆ 1 ಲಕ್ಷ ರೂ. ಮತ್ತು ನೂತನ ಕಟ್ಟಡ ಅನುದಾನ 3 ಲಕ್ಷ ರೂ. ವಿತರಿಸಿ ಹರೀಶ್ ಮಾತನಾಡಿದರು.
ಕೋವಿಡ್ 19ದಿಂದ ರೈತರು ಬೆಳೆದಿರುವ ಬೆಳೆಗೆ ಸೂಕ್ತ ಬೆಲೆ ದೊರೆಯದೆ ಕಂಗಾಲಾಗಿದ್ದು, ಇಂತಹ ಕ್ಲಿಸ್ಟಕರ ಪರಿಸ್ಥಿತಿಯಲ್ಲಿ ಹೈನುಗಾರಿಕೆ ನಡೆಸುವ ರೈತರಿಗೆ ಯಾವುದೇ ತರಹ ತೊಂದರೆಯಾಗದಂತೆ ಸಕಾಲಕ್ಕೆ ಬಟವಾಡೆ ಮತ್ತು ಒಕ್ಕೂಟದಿಂದ ಸಿಗುವ ಸೌಲಭ್ಯಗಳನ್ನು ತಲುಪಿಸುವಲ್ಲಿ ಯಶಸ್ವಿ ಆಗಿದ್ದೇವೆ ಎಂದು ವಿವರಿಸಿದರು. ಸಂಘಗಳಲ್ಲಿ ಕಡ್ಡಾಯವಾಗಿ ಸೂಚನಾ ಫಲಕಗಳನ್ನು ಅಳವಡಿಸಲು ಮತ್ತು ವಾರ್ಷಿಕ ಸಭೆಗಳಲ್ಲಿ ಬ್ಯಾನರ್ ಹಾಕುವಂತೆ ತಿಳಿಸಿದರು.
ಕೇಂದ್ರ ಸರ್ಕಾರದ ಆದೇಶದಂತೆ ಹಾಲು ಉತ್ಪಾದಕರು ಮತ್ತು ಸದಸ್ಯರಿಗೆ ಕೆ.ಸಿ.ಸಿ. (ಕಿಸಾನ್ ಕ್ರೆಡಿಟ್ ಕಾರ್ಡ್) ನೋಂದಾಯಿಸಿ ಕೊಂಡ ಆದರ ಪ್ರಯೋಜನೆಗಳನ್ನು ಪಡೆಯಲು ತಿಳಿಸಿದರು. ಶಿಬಿರದ ಉಪವ್ಯವಸ್ಥಾಪಕ ಡಾ.ಎ.ಸಿ. ಶ್ರೀನಿವಾಸಗೌಡ ವಾರ್ಷಿಕ ಸಭೆಗಳ ಬಗ್ಗೆ ಮಾಹಿತಿ ನೀಡಿದರು. ಸಭೆಯಲ್ಲಿ ವಿಸ್ತಾರಣಾಧಿಕಾರಿ ಶ್ರೀನಿವಾಸ್, ವಿ.ರಾಜಬಾಬು, ಎಸ್. ನಾಗಪ್ಪ, ಅಣ್ಣಪ್ಪ, ಭರತ್, ಸಮೀರ್ ನಾಗೇಂದ್ರ, ರಾಮಾಂಜಿನಪ್ಪ ತಾಲೂಕಿನ ಆಯ್ದ ಸಂಘಗಳ ಅಧ್ಯಕ್ಷರು, ಕಾರ್ಯದರ್ಶಿಗಳು, ಫಲಾನುಭವಿಗಳು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kolara: ಹೈಕೋರ್ಟ್ ಅನುಮತಿ ಬಳಿಕ ಬಿಗಿ ಭದ್ರತೆಯಲ್ಲಿ ಆರೆಸ್ಸೆಸ್ ಪಥಸಂಚಲನ
Kolar: “ಗೃಹಲಕ್ಷ್ಮಿ’ಗೆ ಆಸಕ್ತಿ ತೋರದ 21 ಸಾವಿರ ಕೋಲಾರ ಸ್ತ್ರೀಯರು
Kolara: ಏಲಕ್ಕಿ ಬಾಳೆಕಾಯಿ ಬೆಲೆ ಕುಸಿತ: 3 ಎಕರೆ ಬೆಳೆ ಕಡಿದು ಹಾಕಿದ ರೈತ
Mulabagilu: ಭೀಕರ ಅಪಘಾತ: ದ್ವಿಚಕ್ರ ವಾಹನಗಳಿಗೆ ಬೊಲೆರೋ ಢಿಕ್ಕಿ, ನಾಲ್ವರ ಮೃತ್ಯು!
Agricultural: ಲಾರಿ ಚಾಲಕನ ಕೃಷಿ ಪಯಣಕ್ಕೆ ನರೇಗಾ ನೆರವು
MUST WATCH
ಹೊಸ ಸೇರ್ಪಡೆ
Alcohol: ಬಿಯರ್ ದರ ಏರಿಕೆ ಚರ್ಚೆ ಹಂತದಲ್ಲಿದೆ: ಅಬಕಾರಿ ಸಚಿವ ತಿಮ್ಮಾಪುರ ಸ್ಪಷ್ಟನೆ
Mudhol: ಭೀಕರ ಅಪಘಾತ… ಕಾರು ಚಾಲಕ ಸ್ಥಳದಲ್ಲೇ ಮೃತ್ಯು
Bantwal: ಕಾಂಟ್ರಾಕ್ಟ್ ಕ್ಯಾರೇಜ್ ಬಸ್ ಪ್ರಯಾಣ ದರ ಏರಿಕೆ
Special Train ಮಕರ ಸಂಕ್ರಾಂತಿ: ಇಂದು ಬೆಂಗಳೂರಿನಿಂದ ಕರಾವಳಿಗೆ ವಿಶೇಷ ರೈಲು
Daily Horoscope: ಅನಿರೀಕ್ಷಿತ ಧನಾಗಮ, ಅವಿವಾಹಿತರಿಗೆ ಯೋಗ್ಯ ಸಂಗಾತಿ ಲಭ್ಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.