ಮಹಿಳಾ ವಿವಿಯ 6 ಸಿಬ್ಬಂದಿಗೆ ಸೋಂಕು
Team Udayavani, Jul 7, 2020, 11:57 AM IST
ವಿಜಯಪುರ: ಸೋಮವಾರ ಜಿಲ್ಲೆಯಲ್ಲಿ ಕೋವಿಡ್ ಸೋಂಕಿನ ಸ್ಫೋಟವಾಗಿದ್ದು, ಮಹಿಳಾ ವಿಶ್ವವಿದ್ಯಾಲಯದ 6 ಸಿಬ್ಬಂದಿ ಸೇರಿದಂತೆ 36 ಜನರಿಗೆ ಸೋಂಕು ದೃಢಪಟ್ಟಿದೆ. ಇದರೊಂದಿಗೆ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 594ಕ್ಕೆ ಏರಿಕೆಯಾಗಿದೆ.
ಮತ್ತೂಂದೆಡೆ ಸೋಂಕಿತರಲ್ಲಿ ಪರಿಣಾಮಕಾರಿ ಚಿಕಿತ್ಸೆಯಿಂದ ಇದೇ ದಿನ 20 ರೋಗಿಗಳು ಗುಣಮುಖರಾಗಿ ಆಸ್ಪತ್ರೆಯಿಂದ ಮನೆಗೆ ಮರಳಿದ್ದಾರೆ. ಈಚೆಗೆ ಕೋವಿಡ್ ಸೋಂಕಿನಿಂದ ಮೃತಪಟ್ಟ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ಪಿ-14479 ಸೋಂಕಿತ ಸಿಬ್ಬಂದಿಯ ಪ್ರಾಥಮಿಕ ಸಂಪರ್ಕದಿಂದ ವಿಶ್ವವಿದ್ಯಾಲಯದ ಮತ್ತೆ 6 ಜನರಲ್ಲಿ ಕೋವಿಡ್ ಸೋಂಕು ದೃಢಪಟ್ಟಿದೆ. ಈ ಆರು ಸೋಂಕಿತರು ಸೇರಿದಂತೆ ಎಲ್ಲ ರೋಗಿಗಳಿಗೆ ಕೋವಿಡ್ ಆಸ್ಪತ್ರೆಯಲ್ಲಿ ಸೂಕ್ತ ಚಿಕಿತ್ಸೆ ಮುಂದುವರೆಸಿದ್ದು, ಎಲ್ಲರ ಆರೋಗ್ಯ ಸ್ಥಿರವಾಗಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.
ಹೊಸದಾಗಿ ಸೋಂಕು ದೃಢಪಟ್ಟ 36 ಸೋಂಕಿತರು ಸೇರಿ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 594ಕ್ಕೆ ಏರಿಕೆಯಾಗಿದೆ. ಮತ್ತೂಂದೆಡೆ ಇದೇ ದಿನ 20 ಜನ ಸೋಂಕಿತರು ಆಸ್ಪತ್ರೆಯಿಂದ ಬಿಡುಗಡೆ ಆಗಿದ್ದು, ಇದರೊಂದಿಗೆ ಆಸ್ಪತ್ರೆಯಿಂದ ಬಿಡುಗಡೆ ಆದವರ ಸಂಖ್ಯೆ 424 ಏರಿಕೆಯಾಗಿದೆ. ಉಳಿದಂತೆ ಸೋಂಕಿತರಲ್ಲಿ ಕೋವಿಡ್ ಆಸ್ಪತ್ರೆಯಲ್ಲಿ 159 ರೋಗಿಗಳಿಗೆ ಚಿಕಿತ್ಸೆ ಮುಂದುವರೆದಿದೆ. ಈವರೆಗೆ ಸೋಂಕಿತರಲ್ಲಿ 11 ಜನರು ಮೃತಪಟ್ಟಿದ್ದಾರೆ ಎಂದು ಜಿಲ್ಲಾಧಿಕಾರಿ ವೈ.ಎಸ್. ಪಾಟೀಲ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura: 22 ಲಕ್ಷ ರೂ.ಮೌಲ್ಯದ ಗಾಂಜಾ ಜಪ್ತಿ, 2 ಕಾರು ವಶಕ್ಕೆ ಪಡೆದ ಪೊಲೀಸರು
Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್
Muddebihal: ತೆರೆದ ಬಾವಿಯಲ್ಲಿ ತಾಯಿ-ಮಗಳ ಶವ ಪತ್ತೆ
K.S.Eshwarappa;’ಕ್ರಾಂತಿವೀರ’ ಹೊಸ ಬ್ರಿಗೇಡ್ ಘೋಷಣೆ: ಫೆ.4ರಂದು ಉದ್ಘಾಟನೆ
Muddebihal; ಬೊಲೇರೊ-ಬೈಕ್ ಮುಖಾಮುಖಿ ಡಿಕ್ಕಿ: ಸವಾರ ಮೃ*ತ್ಯು
MUST WATCH
ಹೊಸ ಸೇರ್ಪಡೆ
Karnataka By Poll Results: ಮತಎಣಿಕೆ-ಚನ್ನಪಟ್ಟಣ, ಶಿಗ್ಗಾಂವಿ, ಸಂಡೂರು “ಕೈ” ಮುನ್ನಡೆ
By Election: ನಿಖಿಲ್ ವಿರುದ್ದ ಮುನ್ನಡೆ ಸಾಧಿಸಿದ ಯೋಗೇಶ್ವರ್; ಕುತೂಹಲದತ್ತ ಚನ್ನಪಟ್ಟಣ
Karkala: ಶಾಲಾ ವಾಹನಕ್ಕೆ ಢಿಕ್ಕಿ ಹೊಡೆದು ಬೈಕ್ ಸವಾರ ಸ್ಥಳದಲ್ಲೇ ಸಾವು
Zebra Movie Review: ಜೀಬ್ರಾ ಕ್ರಾಸ್‌ನಲ್ಲಿ ಕಣ್ಣಾ ಮುಚ್ಚಾಲೆ!
Wayanad: ಪ್ರಿಯಾಂಕಾ ಗಾಂಧಿ ‘ಕೈ’ ಹಿಡಿಯಲಿದ್ದಾರಾ ಮತದಾರರು… 85,000 ಮತಗಳಿಂದ ಮುನ್ನಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.