ತಿರುವನಂತಪುರಕ್ಕೆ ಟ್ರಿಪಲ್ ಲಾಕ್‌ಡೌನ್
ಕೋವಿಡ್ ಪ್ರಕರಣಗಳು ಹೆಚ್ಚಿದ ಹಿನ್ನೆಲೆಯಲ್ಲಿ 7 ದಿನ ನಿಯಮ
Team Udayavani, Jul 7, 2020, 12:32 PM IST
ರಾಜಸ್ಥಾನದ ಬಿಕಾನೇರ್‌ನಲ್ಲಿ ಹಾಲು ಅಂಗಡಿ ಮಾಲಕ ಉದ್ದನೆಯ ಪೈಪ್ ಮೂಲಕ ಗ್ರಾಹಕರಿಗೆ ಅಂತರ ಕಾಯ್ದುಕೊಂಡು ಸೋಮವಾರ ಹಾಲು ಮಾರಾಟ ಮಾಡುತ್ತಿರುವುದು.
ತಿರುವನಂತಪುರ: ಕೇರಳದ ರಾಜಧಾನಿ ತಿರುವನಂತಪುರದಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚಾದ ಹಿನ್ನೆಲೆಯಲ್ಲಿ ಜು. 6ರಿಂದ ತಿರುವನಂತಪುರ ಮಹಾ ನಗರ ಕಾರ್ಪೊರೇಷನ್ ಪರಿಧಿಯಲ್ಲಿ ಒಂದು ವಾರದ ಮಟ್ಟಿಗೆ ಟ್ರಿಪಲ್ ಲಾಕ್‌ಡೌನ್ ಜಾರಿಗೊಳಿಸಲಾಗಿದೆ. ಬೆಳಗ್ಗೆ 6ರಿಂದಲೇ ಜನತಾ ಕರ್ಫ್ಯೂವನ್ನು ಜಾರಿಗೊಳಿಸಲಾಗಿದ್ದು, ಅದನ್ನು ಉಲ್ಲಂಘಿಸಿದ ವಾಹನಗಳನ್ನು ಜಪ್ತಿ ಮಾಡಲಾಗಿದೆ. ನಿಯಮಗಳನ್ನು ಉಲ್ಲಂಘನೆ ಮಾಡಿದವರ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ. ಯಾರೂ ಮನೆಗಳಿಂದ ಹೊರಬರಬಾರದೆಂದು ಕಟ್ಟುನಿಟ್ಟಿನ ಸೂಚನೆ ಹೊರಡಿಸಲಾಗಿದೆ ಎಂದು ತಿರುವನಂತಪುರ ಜಿಲ್ಲಾ ಉಸ್ತುವಾರಿ ಸಚಿವರೂ ಆಗಿರುವ ಪ್ರವಾಸೋದ್ಯಮ ಸಚಿವ ಕೆ. ಸುರೇಂದ್ರನ್ ತಿಳಿಸಿದ್ದಾರೆ.
ಇದೇ ವೇಳೆ, ತಿರುವನಂತಪುರದಲ್ಲಿ ಕೊರೊನಾ ಸೋಂಕು ಸಮುದಾಯ ಮಟ್ಟದಲ್ಲಿ ಹರಡಿದೆಯೇ ಎಂಬುದು ಇನ್ನೂ ಖಚಿತವಾಗಿಲ್ಲ ಎಂದಿರುವ ಅವರು, “”ಪ್ರಕರಣಗಳು ಹೆಚ್ಚಾಗಿದ್ದರಿಂದ ಬಿಗಿ ನಿಲುವು ತಳೆಯಲಾಗಿದೆ. ಜನರ ಸಂಚಾರಕ್ಕೆ ನಿರ್ಬಂಧ ಹೇರಲಾಗಿದೆ. ಔಷಧಿ ಹಾಗೂ ವೈದ್ಯಕೀಯ ಸೇವೆಗಳಂಥ ಅಗತ್ಯ ಹಾಗೂ ತುರ್ತು ಸೇವೆಗಳಿಗಷ್ಟೇ ಅನುಮತಿ ನೀಡಲಾಗಿದೆ. ಇನ್ನು ಕಂಟೈನ್ಮೆಂಟ್ ವಲಯಗಳಲ್ಲಿ ಮತ್ತಷ್ಟು ಬಿಗಿ ಕ್ರಮಗಳನ್ನು ಜಾರಿಗೊಳಿಸಲಾಗಿದ್ದು, ಆ ಪ್ರಾಂತ್ಯಗಳಲ್ಲಿ ಆಹಾರ ಡೆಲಿವರಿ ಬಾಯ್‌ಗಳನ್ನು ಸಮಗ್ರ ಪರೀಕ್ಷೆ ನಡೆಸಿದ ನಂತರವಷ್ಟೇ ವಲಯಗಳ ಒಳಗೆ ಪ್ರವೇಶ ಕಲ್ಪಿಸಲಾಗುತ್ತದೆ” ಎಂದು ಅವರು ಹೇಳಿದ್ದಾರೆ. ಹೀಗಾಗಿ ಈ ಕಾಲಾವಧಿಯಲ್ಲಿ ನಡೆಯಬೇಕಿದ್ದ ಪರೀಕ್ಷೆಗಳನ್ನು ಕೇರಳ ವಿಶ್ವವಿದ್ಯಾಲಯ ರದ್ದುಗೊಳಿಸಿ ಆದೇಶ ಹೊರಡಿಸಿದೆ.
ಟ್ರಿಪಲ್ ಲಾಕ್‌ಡೌನ್ ಎಂದರೇನು?
ಇದು ಮೂರು ಹಂತದ ಲಾಕ್‌ಡೌನ್. ಮೊದಲ ಹಂತದಲ್ಲಿ ಯಾವುದೇ ವಾಹನವನ್ನು ತಿರುವನಂತಪುರ ಕಾರ್ಪೊರೇಷನ್ ಸರಹದ್ದಿನ ಒಳಗೆ ಹಾಗೂ ಅದರೊಳಗಿನ ಹೊರಗೆ ಹೋಗಲು ಅವಕಾಶ ಕೊಡುವುದಿಲ್ಲ. ಎರಡನೇ ಹಂತದಲ್ಲಿ, ಕೊರೊನಾ ಪ್ರಕರಣಗಳು ಹೆಚ್ಚು ದಾಖಲಾಗಿರುವ ಕಡೆಗಳಲ್ಲಿ ಬಿಗಿ ಲಾಕ್‌ಡೌನ್ ಜಾರಿಗೊಳಿಸಿ, ಅಲ್ಲಿಂದ ಸೋಂಕು ಅಕ್ಕಪಕ್ಕದ ವಲಯಗಳಿಗೆ ಹರಡದಂತೆ ಎಚ್ಚರ ವಹಿಸಲಾಗುತ್ತದೆ. ಮೂರನೇ ಹಂತದಲ್ಲಿ, ಕೊರೊನಾ ಸೋಂಕು ದೃಢಪಟ್ಟಿರುವ ಮನೆಗಳನ್ನು ಕಟ್ಟುನಿಟ್ಟಾಗಿ ಸೀಲ್ ಮಾಡಲಾಗುತ್ತದೆ. ಆ ಮನೆಯಿಂದ ಸೋಂಕು ಅಕ್ಕಪಕ್ಕದ ಮನೆಗಳಿಗೆ ಹರಡದಂತೆ ಕ್ರಮ ಕೈಗೊಳ್ಳಲಾಗುತ್ತದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.