ಮಹಾರಾಷ್ಟ್ರದಲ್ಲಿ ನಾಳೆಯಿಂದ ಹೊಟೇಲ್ ತೆರೆಯಲು ಅವಕಾಶ
Team Udayavani, Jul 7, 2020, 12:44 PM IST
ಸಾಂದರ್ಭಿಕ ಚಿತ್ರ
ಮುಂಬಯಿ: ಕೋವಿಡ್ ಲಾಕ್ಡೌನ್ ನಿಯಮಗಳನ್ನು ಮತ್ತಷ್ಟು ಸಡಿಲಿಸಿರುವ ಮಹಾರಾಷ್ಟ್ರ ಸರಕಾರ, ಕಂಟೈನ್ಮೆಂಟ್ ವಲಯ ಹೊರತುಪಡಿಸಿ, ಇತರೆಡೆಯಲ್ಲಿರುವ ಹೊಟೇಲ್ ಮತ್ತು ಇತರ ವಸತಿ ಗೃಹಗಳನ್ನು ಬುಧವಾರದಿಂದ ತೆರೆಯಲು ಅವಕಾಶ ನೀಡಿದೆ. ಲಾಡ್ಜ್ಗಳು ಮತ್ತು ಅತಿಥಿಗೃಹಗಳಿಗೂ ಇದು ಅನ್ವಯವಾಗಲಿದೆ. ಆದರೆ, ಒಟ್ಟು ಸಾಮರ್ಥ್ಯದ ಶೇ.33ರಷ್ಟು ಜನರಿಗೆ ಮಾತ್ರ ಅವಕಾಶ ಕಲ್ಪಿಸಬೇಕು. ಸಾಮಾಜಿಕ ಅಂತರ ಸೇರಿದಂತೆ ಕೊರೊನಾ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ಷರತ್ತು ವಿಧಿಸಿದೆ. ಮುಖ್ಯಮಂತ್ರಿ ಉದ್ಧವ್ ಠಾಕ್ರೆಯವರು ಹೊಟೇಲ್ ಹಾಗೂ ಇನ್ನಿತರ ಸಂಘಟನೆಗಳ ಪದಾಧಿಕಾರಿಗಳ ಜತೆ ಸಮಾಲೋಚನೆ ನಡೆಸಿದ ಒಂದು ದಿನದ ನಂತರ ಸರಕಾರದ ಈ ಆದೇಶ ಹೊರಬಿದ್ದಿದೆ. ಈ ಮಧ್ಯೆ, ರಾಜ್ಯದಲ್ಲಿ ಲಾಕ್ಡೌನ್ ಜುಲೈ 31ರವರೆಗೂ ಮುಂದುವರಿಯಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Madikeri: ಲಾರಿ ಡಿಕ್ಕಿಯಾಗಿ ರಸ್ತೆ ಬದಿ ನಡೆದುಕೊಂಡು ಹೋಗುತ್ತಿದ್ದ ಬಾಲಕಿ ಸಾವು
Mumbai Cricket: ಸಚಿನ್ ತೆಂಡೂಲ್ಕರ್ ಸಲಹೆಯನ್ನೂ ನಿರ್ಲಕ್ಷಿಸಿದರಾ ಪೃಥ್ವಿ ಶಾ..
Teacher: ಸ್ವಂತ ಖರ್ಚಲ್ಲಿ ಶಿಕ್ಷಕನಿಂದ ವಿದ್ಯಾರ್ಥಿಗಳಿಗೆ ವಿಮಾನ ಪ್ರವಾಸ!
Marriages: ನಗರದಲ್ಲಿ 1 ತಿಂಗಳಲ್ಲಿ 13,000 ಮದುವೆ!
High Court: ಗುರು ರಾಘವೇಂದ್ರ ಬ್ಯಾಂಕ್ ಅಧ್ಯಕಗೆ ಜಾಮೀನು ನಿರಾಕರಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.