ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಕೋವಿಡ್ ಸೋಂಕಿಗೆ 9ನೇ ಬಲಿ
ಗಡಿ ಜಿಲ್ಲೆಯಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ 268ಕ್ಕೆ
Team Udayavani, Jul 7, 2020, 7:36 PM IST
ಚಿಕ್ಕಬಳ್ಳಾಪುರ: ಜಿಲ್ಲೆಯಲ್ಲಿ ಸತತ ಮೂರು ದಿನಗಳಿಂದ ಕೋವಿಡ್-19ನ ಸಾವಿನ ಸರಣಿ ಮುಂದುವರೆದಿದ್ದು ಮಂಗಳವಾರ ಚಿಕ್ಕಬಳ್ಳಾಪುರ ನಗರದಲ್ಲಿ 45 ವರ್ಷದ ವ್ಯಕ್ತಿಯೊಬ್ಬರು ಕೋವಿಡ್ ಗೆ ಬಲಿಯಾಗಿದ್ದು ಇದುವರೆಗೂ ಜಿಲ್ಲೆಯಲ್ಲಿ ಕೋವಿಡ್-19ಗೆ ಬಲಿಯಾದವರ ಸಂಖ್ಯೆ 9ಕ್ಕೆ ಏರಿದೆ.
ಜಿಲ್ಲೆಯಲ್ಲಿ ಕಳೆದೊಂದು ವಾರದಿಂದ ಕೋವಿಡ್ ಸೋಂಕಿತರ ಸಂಖ್ಯೆ ಏರಿಕೆ ಆಗುತ್ತಲೇ ಇದ್ದು ಮಂಗಳವಾರ ಹೊಸದಾಗಿ 3 ಪಾಸಿಟೀವ್ ಪ್ರಕರಣಗಳು ಕಂಡು ಬಂದು ಇದುವರೆಗೂ ಸೋಂಕಿತರ ಸಂಖ್ಯೆ ಜಿಲ್ಲೆಯಲ್ಲಿ 268ಕ್ಕೆ ಏರಿಕೆ ಕಂಡಿದೆ. ಹೊಸ ಪ್ರಕರಣಗಳ ಪೈಕಿ ಚಿಕ್ಕಬಳ್ಳಾಪುರ ನಗರದಲ್ಲಿ 2, ಚಿಂತಾಮಣಿ ನಗರದಲ್ಲಿ 1 ಪ್ರಕರಣ ಪತ್ತೆಯಾಗಿದೆ. ಮೂವರಲ್ಲಿ ಇಬ್ಬರು ಮಹಿಳೆಯರು ಹಾಗೂ ಒಬ್ಬ ಪುರುಷನಾಗಿದ್ದಾನೆಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಯೋಗೇಶ್ ತಿಳಿಸಿದ್ದಾರೆ.
ಚಿಕ್ಕಬಳ್ಳಾಪುರದಲ್ಲಿ ನಾಲ್ಕು ಸಾವು:
ಜಿಲ್ಲೆಯಲ್ಲಿ ಕೋವಿಡ್ ಪಾಸಿಟೀವ್ ಪ್ರಕರಣಗಳ ಒಂದಡೆ ಏರಿಕೆಯಾಗುತ್ತಿರುವುದು ಜಿಲ್ಲೆಯ ಜನರಲ್ಲಿ ತೀವ್ರ ಆತಂಕದ ಕ್ಷಣಗಳನ್ನು ಸೃಷ್ಟಿಸಿದ್ದರೆ ಅಷ್ಟೆ ಸಾವಿನ ಪ್ರಕರಣಗಳು ವರದಿಯಾಗಿ ಜಿಲ್ಲೆಯ ಜನರ ನಿದ್ದೆಗೆಡಿಸಿದೆ. ಸತತ ಮೂರು ದಿನಗಳಿಂದ ಜಿಲ್ಲೆಯಲ್ಲಿ ಸಾವಿನ ಪ್ರಕರಣಗಳು ವರದಿಯಾಗಿದ್ದು ಚಿಕ್ಕಬಳ್ಳಾಪುರದಲ್ಲಿ 45 ವರ್ಷದ ವ್ಯಕ್ತಿ ತೀವ್ರ ಉಸಿರಾಟದಿಂದ ಆಸ್ಪತ್ರೆ ಸೇರಿದ್ದು ಆತನಿಗೆ ಕೋವಿಡ್-19 ಪಾಸಿಟೀವ್ ಬಂದಿದ್ದು ಮಂಗಳವಾರ ಚಿಕಿತ್ಸೆ ಫಲಿಸದೇ ಮೃತ ಪಟ್ಟಿರುವುದರಿಂದ ಚಿಕ್ಕಬಳ್ಳಾಪುರದಲ್ಲಿ ಕೋವಿಡ್-19 ಸಾವಿನ ಸಂಖ್ಯೆ 4ಕ್ಕೆ ಏರಿದರೆ ಇಡೀ ಜಿಲ್ಲೆಯಲ್ಲಿ 9ಕ್ಕೆ ಏರಿದೆ. ಈಗಾಗಲೇ ಚಿಕ್ಕಬಳ್ಳಾಪುರ 4, ಗೌರಿಬಿದನೂರು 4, ಚಿಂತಾಮಣಿ 1 ಒಬ್ಬರು ಕೋವಿಡ್-19ಗೆ ಬಲಿಯಾಗಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belgavi; ವೇಶ್ಯಾವಾಟಿಕೆ ಆರೋಪ: ತಾಯಿ, ಮಗಳನ್ನು ರಸ್ತೆಗೆ ಎಳೆದು ಹಲ್ಲೆ!
Snehamayi Krishna ವಿರುದ್ಧ ಕಾಂಗ್ರೆಸ್‌ನಿಂದ ಪೊಲೀಸರಿಗೆ ಮತ್ತೊಂದು ದೂರು
Covid ವೇಳೆ ಜೀವ ಉಳಿಸುವ ಕೆಲಸ ಮಾಡಿದ್ದೇವೆ: ಬಿಎಸ್‌ವೈ
Waqf issue; ಬಿಜೆಪಿಯಿಂದ ಕೋಮು ಗಲಭೆಗೆ ಯತ್ನ: ಕಾಂಗ್ರೆಸ್
Kumaraswamy ಅವರಿಗೆ ಜತೆಗಿರುವಾಗ ಕೊಚ್ಚೆ ವಾಸನೆ ಬರಲಿಲ್ಲವೇ?: ಚಲುವರಾಯಸ್ವಾಮಿ ತಿರುಗೇಟು
MUST WATCH
ಹೊಸ ಸೇರ್ಪಡೆ
Belgavi; ವೇಶ್ಯಾವಾಟಿಕೆ ಆರೋಪ: ತಾಯಿ, ಮಗಳನ್ನು ರಸ್ತೆಗೆ ಎಳೆದು ಹಲ್ಲೆ!
Snehamayi Krishna ವಿರುದ್ಧ ಕಾಂಗ್ರೆಸ್‌ನಿಂದ ಪೊಲೀಸರಿಗೆ ಮತ್ತೊಂದು ದೂರು
Covid ವೇಳೆ ಜೀವ ಉಳಿಸುವ ಕೆಲಸ ಮಾಡಿದ್ದೇವೆ: ಬಿಎಸ್‌ವೈ
Waqf issue; ಬಿಜೆಪಿಯಿಂದ ಕೋಮು ಗಲಭೆಗೆ ಯತ್ನ: ಕಾಂಗ್ರೆಸ್
Kumaraswamy ಅವರಿಗೆ ಜತೆಗಿರುವಾಗ ಕೊಚ್ಚೆ ವಾಸನೆ ಬರಲಿಲ್ಲವೇ?: ಚಲುವರಾಯಸ್ವಾಮಿ ತಿರುಗೇಟು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.