ಸಾಮಾಜಿಕ ಅಂತರ ಮರೆತು ಚಿಕ್ಕಬಳ್ಳಾಪುರ ಜಿಲ್ಲಾಸ್ಪತ್ರೆಯಲ್ಲಿ ಬರ್ತ್ ಡೇ ಪಾರ್ಟಿ!
ಜಿಲ್ಲಾಸ್ಪತ್ರೆಯಲ್ಲಿ ಘಟನೆ:ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ಪೋಟೋಗಳು
Team Udayavani, Jul 7, 2020, 9:22 PM IST
ಚಿಕ್ಕಬಳ್ಳಾಪುರ: ಕೋವಿಡ್-19 ನಿಯಂತ್ರಣಕ್ಕೆ ಇಡೀ ವಿಶ್ವವೇ ಹರಸಾಹಸ ಮಾಡುತ್ತಿದೆ, ರಾಜ್ಯದಲ್ಲಿ ಅಂತೂ ಕೋವಿಡ್-19 ಪ್ರಕರಣಗಳ ಸಂಖ್ಯೆ ಹೆಚ್ಚುತ್ತಲೇ ಇದೆ. ಆದರೆ ಇಲ್ಲಿನ ಜಿಲ್ಲಾಸ್ಪತ್ರೆಯಲ್ಲಿ ಮಂಗಳವಾರ ಸಾಮಾಜಿಕ ಅಂತರಕ್ಕೆ ತಿಲಾಂಜಲಿ ಇಟ್ಟು ಯಾರು ಮಾಸ್ಕ್ ಧರಿಸಿಕೊಳ್ಳದೇ ಸಿಬ್ಬಂದಿಯೊಬ್ಬರ ಬರ್ತ್ ಡೇ ಪಾರ್ಟಿ ಭರ್ಜರಿಯಾಗಿ ಆಚರಿಸುವ ಮೂಲಕ ಸಾರ್ವಜನಿಕ ವಲಯದಲ್ಲಿ ಟೀಕೆಗೆ ಗುರಿಯಾಗಿದ್ದಾರೆ.
ಕೋವಿಡ್ ನಿಯಂತ್ರಣಕ್ಕಾಗಿ ಪ್ರತಿಯೊಬ್ಬರು ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು, ಮಾಸ್ಕ್ ಧರಿಸಬೇಕೆಂಬ ನಿಯಮ ಇದ್ದರೂ ಜಿಲ್ಲಾಸ್ಪತ್ರೆಯಲ್ಲಿ ಯಾವುದನ್ನೂ ಲೆಕ್ಕಿಸದೇ ಜನ ಸಾಮಾನ್ಯರಿಗೆ ಬುದ್ದಿ ಹೇಳಬೇಕಾದ ಜಿಲ್ಲಾಸ್ಪತ್ರೆಯ ವೈದ್ಯರು, ಪ್ರಯೋಗಾಲಯ ಸಿಬ್ಬಂದಿ, ನೊಂದಣಿ ವಿಭಾಗದ ಸಿಬ್ಬಂದಿ ಸೇರಿ ಸಾಮಾಜಿಕ ಅಂತರ ಕಾಪಾಡದೇ ಹುಟ್ಟು ಹಬ್ಬ ಆಚರಿಸಿ ಕೇಕ್ ಕತ್ತರಿಸಿರುವ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ಸಾಕಷ್ಟು ವೈರಲ್ ಆಗುತ್ತಿದ್ದು ಜಿಲ್ಲಾಸ್ಪತ್ರೆಯಲ್ಲಿ ಕೆಲಸ ಮಾಡುವ ಸಿಬ್ಬಂದಿ ಹಾಗೂ ವೈದ್ಯರ ಕಾರ್ಯವೈಖರಿ ಬಗ್ಗೆ ಸಾರ್ವಜನಿಕ ವಲಯದಲ್ಲಿ ಹಾಗೂ ನೆಟ್ಟಿಗರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ರಾಜ್ಯ ಸರ್ಕಾರ ಕೋವಿಡ್-19 ವಿಚಾರದಲ್ಲಿ ಹೊರಡಿಸಿರುವ ಆದೇಶ, ಮಾರ್ಗಸೂಚಿಗಳು ಪಾಲನೆಯಲ್ಲಿ ಅಧಿಕಾರಿಗಳಿಗೆ, ಸಿಬ್ಬಂದಿಗೆ ಅನ್ವಯಿಸುವುದಿಲ್ಲವೇ, ಸಾಮಾನ್ಯ ಜನರಿಗೊಂದು? ಅಧಿಕಾರಿಗಳಿಗೆ ಒಂದು ಕಾನೂನು ಇರುತ್ತದೆಯೆ ಎಂದು ನೆಟ್ಟಿಗರು ಈ ಪೋಟೋಗಳನ್ನು ಆಪ್‌ಲೋಡ್ ಮಾಡಿ ಆಕ್ರೋಶ ಹೊರ ಹಾಕುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮಕ್ಕಳನ್ನು ಶಾಲೆಗೆ ಸೇರಿಸೋದು ಮುಖ್ಯವಲ್ಲ, ನಿತ್ಯವೂ ಕಳುಹಿಸಿ… :ಸಚಿವ ಮಧು ಬಂಗಾರಪ್ಪ
Protest: ಡಿ.10 ರಂದು ಸುವರ್ಣಸೌಧಕ್ಕೆ 5 ಸಾವಿರ ಟ್ರ್ಯಾಕ್ಟರ್ ಮುತ್ತಿಗೆ; ಕೂಡಲಸಂಗಮ ಶ್ರೀ
Dandeli: ಬೇಡರ ಶಿರಗೂರಿನ ರೈತರ ಗದ್ದೆಗಳಲ್ಲಿ ಮತ್ತೆ ಕಾಣಿಕೊಂಡ ಕಾಡಾನೆಗಳು
Nalatawad: ವಿದ್ಯುತ್ ಶಾಕ್‌ನಿಂದ ಮೃತಪಟ್ಟ ಕೋತಿಗೆ ಸ್ಥಳೀಯ ನಿವಾಸಿಗಳಿಂದ ಅಂತ್ಯಸಂಸ್ಕಾರ
JDS: ದೇವೇಗೌಡರು ಕಟ್ಟಿದ ಪಕ್ಷವನ್ನು ಕುಮಾರಸ್ವಾಮಿ ನೆಲಸಮ ಮಾಡ್ತಾವ್ರೆ: ಜಿ.ಟಿ.ದೇವೇಗೌಡ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Stock Market: ಷೇರುಪೇಟೆ ಸೂಚ್ಯಂಕ 1,300 ಅಂಕ ಜಿಗಿತ; ಅದಾನಿ ಗ್ರೂಪ್ ಷೇರು ಮೌಲ್ಯ ಏರಿಕೆ
Bidar: ವಕ್ಫ್ ಹೋರಾಟ ಆರಂಭಿಸಿದ ಯತ್ನಾಳ್- ಜಾರಕಿಹೊಳಿ ತಂಡ
ಮಕ್ಕಳನ್ನು ಶಾಲೆಗೆ ಸೇರಿಸೋದು ಮುಖ್ಯವಲ್ಲ, ನಿತ್ಯವೂ ಕಳುಹಿಸಿ… :ಸಚಿವ ಮಧು ಬಂಗಾರಪ್ಪ
Protest: ಡಿ.10 ರಂದು ಸುವರ್ಣಸೌಧಕ್ಕೆ 5 ಸಾವಿರ ಟ್ರ್ಯಾಕ್ಟರ್ ಮುತ್ತಿಗೆ; ಕೂಡಲಸಂಗಮ ಶ್ರೀ
Drink & Drive Case: ಕುಡಿದು ವಾಹನ ಚಾಲನೆ; ʼಮಂಜುಮ್ಮೆಲ್ ಬಾಯ್ಸ್ʼ ನಟ ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.