ನಗರಾದ್ಯಂತ ಜ್ವರ ತಪಾಸಣಾ ಕೇಂದ್ರ
Team Udayavani, Jul 8, 2020, 6:22 AM IST
ಬೆಂಗಳೂರು: ನಗರದಲ್ಲಿ ಹೆಚ್ಚುತ್ತಿರುವ ಸೋಂಕು ಪ್ರಕರಣಗಳು ಹಾಗೂ ಜ್ವರ ತಪಾಸಣಾ ಕೇಂದ್ರಕ್ಕೆ ನಿತ್ಯ ಸಾವಿರಕ್ಕೂ ಅಧಿಕ ಜನ ಭೇಟಿ ನೀಡುತ್ತಿರುವ ಹಿನ್ನೆಲೆ ಯಲ್ಲಿ ಬಿಬಿಎಂಪಿ ವ್ಯಾಪ್ತಿಯ ಎಲ್ಲ ಪ್ರಾಥಮಿಕ ಆರೋಗ್ಯ ಕೇಂದ್ರ ಹಾಗೂ ರೆಫರಲ್ ಆಸ್ಪತ್ರೆಗಳಲ್ಲಿ ಜ್ವರ ತಪಾಸಣಾ ಕೇಂದ್ರ ತೆರೆಯಲು ಬಿಬಿಎಂಪಿ ಮುಂದಾಗಿದೆ.
ನಗರದಲ್ಲಿ ಕೋವಿಡ್ 19 ಸೋಂಕಿನ ಲಕ್ಷಣ ಇರುವವರ ಗಂಟಲು ದ್ರವದ ಮಾದರಿಯ ಸಂಗ್ರಹಣೆ ಮತ್ತು ಹೆಚ್ಚಿನ ಚಿಕಿತ್ಸೆಗೆ ಶಿಫಾರಸು ಮಾಡಲು ಜ್ವರ ಚಿಕಿತ್ಸಾಲಯಗಳ ಸಂಖ್ಯೆ ಹೆಚ್ಚಿಸಬೇಕಾಗಿದ್ದು, ಬಿಬಿಎಂಪಿ ವ್ಯಾಪ್ತಿಯ 133 ನಗರ ಪ್ರಾಥಮಿಕ ಆರೋಗ್ಯ ಕೇಂದ್ರಗಳು ಮತ್ತು ಆರು ರೆಫರಲ್ ಆಸ್ಪತ್ರೆಗಳನ್ನು ಜ್ವರ ತಪಾಸಣಾ ಕೇಂದ್ರಗಳನ್ನಾಗಿ ಪರಿವರ್ತಿಸಲಾಗಿದೆ.
ಈ ಚಿಕಿತ್ಸಾಲಯಗಳಲ್ಲಿ ಶಂಕಿತ ಸೋಂಕಿತರ ಗಂಟಲು ದ್ರವ ಮಾದರಿ ಸಂಗ್ರಹಣೆ ಮಾಡಲಾಗುತ್ತದೆ ಬಿಬಿಎಂಪಿ ಮುಖ್ಯ ಆರೋಗ್ಯಾಧಿಕಾರಿ ಡಾ. ವಿಜಯೇಂದ್ರ ತಿಳಿಸಿದರು. ಈ ಕೇಂದ್ರಗಳಲ್ಲಿ ತಪಾಸಣೆಗೆ ಒಳಗಾಗುವವರ ಗಂಟಲು ದ್ರವದ ಮಾದರಿಯನ್ನು ನಿಗದಿಪಡಿಸಿದ ಕೋವಿಡ್ -19 ಪ್ರಯೋಗಾಲಯಕ್ಕೆ ಕರೆದುಕೊಂಡು ಹೋಗಲು ವ್ಯವಸ್ಥೆ ಮಾಡಿಕೊಳ್ಳಲಾಗಿದ್ದು, ಚಿಕಿತ್ಸಾಲಯಗಳಲ್ಲಿ ಸಂಗ್ರಹಿಸಿದ ಗಂಟಲು ದ್ರವದ ಪರೀಕ್ಷಾ ವೆಚ್ಚವನ್ನು ಪಾಲಿಕೆಯೇ ಭರಿಸಲಿದೆ ಎಂದರು.
ನಗರದ ಜ್ವರ ತಪಾಸಣಾ ಕೇಂದ್ರಗಳಲ್ಲಿ ಕೋವಿಡ್ 19 ಸೋಂಕಿನ ಲಕ್ಷಣಗಳಾದ ಜ್ವರ, ಕೆಮ್ಮು, ಶೀತ, ಉಸಿರಾಟ ದ ಸಮಸ್ಯೆ ಎದುರಿಸುತ್ತಿರುವವರಿಗೆ ಚಿಕಿತ್ಸೆ ನೀಡಲಾಗು ತ್ತಿದೆ. ಈ ಕೇಂದ್ರಗಳಿಂದ ಶೀತ ಸಂಬಂಧಿತ ಕಾಯಿಲೆಗ ಳಿಂದ ಬಳಲುತ್ತಿರುವ ವ್ಯಕ್ತಿಗಳ ತಪಾಸಣೆ ನಡೆಸಿ, ಸೋಂಕು ಪ್ರಕರಣ ಪತ್ತೆಹಚ್ಚಲು ಸಹಕಾರಿಯಾಗಿದೆ. 20ಸಾವಿರಕ್ಕೂ ಹೆಚ್ಚು ತಪಾಸಣೆ ನಡೆದಿದೆ ಎಂದರು.
ಸೇವಾ ಸಮಯ: ಬೆಳಗ್ಗೆ 9ರಿಂದ ಸಂಜೆ 4ರವರೆಗೆ ಈ ಕೇಂದ್ರಗಳು ಕಾರ್ಯನಿರ್ವಹಿಸಲಿವೆ. ನಿತ್ಯ ಗಂಟಲು ಮಾದರಿ ದ್ರವದ ಪರೀಕ್ಷೆಗೆ ಟೋಕನ್ ವಿತರಿಸುವ ವ್ಯವಸ್ಥೆ ಮಾಡಲಾಗಿದ್ದು, ಬೆಳಗ್ಗೆ 10ರಿಂದ ಮಧ್ಯಾಹ್ನ 1ರವರೆಗೆ ತಪಾಸಣೆ ನಡೆಯಲಿದ್ದು, ಶುಲ್ಕ ಇರುವುದಿಲ್ಲ ಎಂದು ಹೇಳಿದರು.
ಬಿಬಿಎಂಪಿ ಕಚೇರಿಗೆ ಪ್ರವೇಶ ನಿಷೇಧ: ಬಿಬಿಎಂಪಿಯ ಸಿಬ್ಬಂದಿ ಹಾಗೂ ಅಧಿಕಾರಿಗಳಲ್ಲಿ ಕೋವಿಡ್ 19 ಸೋಂಕು ದೃಢಪಡುತ್ತಿರುವ ಹಿನ್ನೆಲೆಯಲ್ಲಿ ಜುಲೈ 9ರಿಂದ ಜುಲೈ 24ರ ವರೆಗೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಕೇಂದ್ರ ಕಚೇರಿಗೆ ಸಾರ್ವಜನಿಕ ಪ್ರವೇಶವನ್ನು ನಿಷೇಧಿಸಿ ಬಿಬಿಎಂಪಿ ಆಯುಕ್ತ ಬಿ.ಎಚ್.ಅನಿಲ್ ಕುಮಾರ್ ಆದೇಶ ಮಾಡಿದ್ದಾರೆ. ಸಾರ್ವಜನಿಕರ ಸೇವೆಗೆ ಆನ್‌ಲೈನ್ ಅವಕಾಶ ಮಾಡಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.