ಆರೋಗ್ಯಕ್ಕಾಗಿ ಸೂಚನೆ ಪಾಲಿಸಿ
Team Udayavani, Jul 8, 2020, 6:54 AM IST
ಮುಳಬಾಗಿಲು: ಪ್ರತಿಯೊಬ್ಬ ಮನುಷ್ಯ ತನ್ನ ಆರೋಗ್ಯ ಕಾಪಾಡಿಕೊಳ್ಳಲು ಇಲಾಖೆಯ ಮುನ್ನೆಚ್ಚರಿಕೆ ಕ್ರಮಗಳನ್ನು ಪಾಲಿಸಬೇಕೆಂದು ತಹಶೀಲ್ದಾರ್ ಕೆ.ಎನ್. ರಾಜಶೇಖರ್ ತಿಳಿಸಿದರು. ತಾಲೂಕು ಆರೋಗ್ಯ ಇಲಾಖೆಯಿಂದ ರಾಷ್ಟ್ರೀಯ ಡೆಂಘೀ ನಿಯಂತ್ರಣ ದಿನಾಚರಣೆ ಅಂಗವಾಗಿ ನಗರದ ಮಿನಿವಿಧಾನಸೌಧ ಎದುರು ಪ್ರಚಾರ ವಾಹನಗಳಿಗೆ ಚಾಲನೆ ನೀಡಿ ಮಾತನಾಡಿದರು.
ಪ್ರತಿ ಮನೆಯಲ್ಲಿ ಸ್ವತ್ಛತೆ ಕಾಪಾಡಿಕೊಂಡು ಶುದಟಛಿ ಆಹಾರವನ್ನು ಸೇವಿಸಿ ಚರಂಡಿ ಮತ್ತು ರಸ್ತೆಗಳಲ್ಲಿ ತ್ಯಾಜ್ಯ ವಸ್ತು ಬಿಸಾಡದೇ ನಗರಸಭೆ ಸೂಚಿಸಿರುವ ಕಸದ ಬುಟ್ಟಿಗಳಲ್ಲಿಯೇ ಹಾಕಬೇಕು ಎಂದು ಒತ್ತಾಯಿಸಿದರು. ಅಲ್ಲದೇ, ಎಲ್ಲಿಯೂ ನೀರು ಶೇಖರಣೆಯಾಗದಂತೆ ಪ್ರತಿ ನಿತ್ಯ ತಮ್ಮ ಮನೆಗಳ ಸುತ್ತಮುತ್ತ ಸ್ವತ್ಛತೆ ಕಾಪಾಡಿ ಕೊಂಡು ಸೊಳ್ಳೆಗಳನ್ನು ನಿಯಂತ್ರಿಸಿ ಡೆಂಘೀ, ಚಿಕೂನ್ ಗುನ್ಯಾ, ಮಲೇರಿಯಾ ಫೈಲೇರಿಯಾಸಿಸ್ ಮತ್ತು ಮೆದುಳು ಜ್ವರಗಳ ಕಡಿವಾಣಕ್ಕೆ ಶ್ರಮಿಸಬೇಕು ಎಂದು ಹೇಳಿದರು.
ತಾಲೂಕು ಆರೋಗ್ಯಾಧಿಕಾರಿ ಡಾ.ವರ್ಣಶ್ರೀ ಮಾತನಾಡಿ, ಮೆದುಳು ಜ್ವರ, ಡೆಂಘೀ, ಚಿಕೂನ್‌ಗುನ್ಯಾ, ಇತರೆ ರೋಗ ಲಕ್ಷಣಗಳು ಕಂಡು ಬಂದಲ್ಲಿ ಕೂಡ ಲೇ ಸರ್ಕಾರಿ ಆಸ್ಪತ್ರೆಗೆ ಭೇಟಿ ನೀಡಿದಲ್ಲಿ ಉಚಿತ ಚಿಕಿತ್ಸೆ ನೀಡುವುದಾಗಿ ತಿಳಿಸಿದರು. ಕೋವಿಡ್-19 ಇರುವುದರಿಂದ ಪ್ರತಿಯೊಬ್ಬರೂ ವಿನಾಕಾರಣ ಓಡಾಡದೇ ಕಡ್ಡಾಯವಾಗಿ ಮಾಸ್ಕ್, ಸ್ಯಾನಿಟೈಸರ್ ಮೂಲಕ ಪ್ರತಿನಿತ್ಯ ಕೈಗಳನ್ನು ಸ್ವತ್ಛಗೊಳಿಸಿಕೊಂಡು ತಮ್ಮ ಕುಟುಂಬಸ್ಥರ ಆರೋಗ್ಯವನ್ನು ಕಾಪಾಡಿಕೊಳ್ಳಬೇಕು ಎಂದು ಆಗ್ರಹಿಸಿದರು. ಈ ಸಂದರ್ಭದಲ್ಲಿ ನಗರಸಭೆ ಆರೋಗ್ಯ ನಿರೀಕ್ಷಕ ಶಿವಾರೆಡ್ಡಿ, ಆಲಂಗೂರು ರಾಮಣ್ಣ, ಶಿವ, ಅಪ್ಪಿ ಇತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mulabagilu: ಭೀಕರ ಅಪಘಾತ: ದ್ವಿಚಕ್ರ ವಾಹನಗಳಿಗೆ ಬೊಲೆರೋ ಢಿಕ್ಕಿ, ನಾಲ್ವರ ಮೃತ್ಯು!
Agricultural: ಲಾರಿ ಚಾಲಕನ ಕೃಷಿ ಪಯಣಕ್ಕೆ ನರೇಗಾ ನೆರವು
Mulabagilu: ನಾಲ್ವರು ವಿದ್ಯಾರ್ಥಿನಿಯರು ಸಮುದ್ರ ಪಾಲು ಪ್ರಕರಣ: ಶಿಕ್ಷಕರ ಅಮಾನತು
Cyclone Fengal: ಚಿಕ್ಕಬಳ್ಳಾಪುರ, ಕೋಲಾರ ಜಿಲ್ಲೆಯ ಶಾಲೆ, ಕಾಲೇಜಿಗೆ ಡಿ.2ರಂದು ರಜೆ
Kolar: ಧಾರ್ಮಿಕ ಮೆರವಣಿಗೆಯಲ್ಲಿ ಯಾಂತ್ರಿಕ ಆನೆ ಬಳಕೆ!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: 16 ವರ್ಷದ ಬಾಲಕ ಮೃತ್ಯು, ಮೃತರ ಸಂಖ್ಯೆ 3ಕ್ಕೆ ಏರಿಕೆ
ನನ್ನ ಮಾರ್ಗದರ್ಶಕರನ್ನು ಕಳೆದುಕೊಂಡಿದ್ದೇನೆ… ಮಾಜಿ ಪ್ರಧಾನಿ ನಿಧನಕ್ಕೆ ರಾಹುಲ್ ಸಂತಾಪ
Gangavathi: 25 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ
Patna: “ರಘುಪತಿ ರಾಘವ’ ಭಜನೆ ಹಾಡಿದ ಗಾಯಕಿ ವಿರುದ್ಧ ಪ್ರತಿಭಟನೆ: ಹಾಡುಗಾರ್ತಿ ಕ್ಷಮೆ
Canada: ಮಾನವ ಕಳ್ಳಸಾಗಣೆಯಲ್ಲಿ ಕೆನಡಾದ 260 ಕಾಲೇಜು! ವಿದ್ಯಾರ್ಥಿ ವೀಸಾ ಮೂಲಕ ಆಮಿಷ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.