ಆನ್‌ಲೈನ್ ತರಗತಿ ನಡೆಯುವುದಾದರೆ ದೇಶ ಬಿಡಿ; ವಿದೇಶಿ ವಿದ್ಯಾರ್ಥಿಗಳಿಗೆ ಅಮೆರಿಕ ಆದೇಶ
ಆನ್‌ಲೈನ್ ತರಗತಿ ಪಡೆಯುವ ವಿದ್ಯಾರ್ಥಿಗಳ ವಿವರಕ್ಕೆ ಸೂಚನೆ
Team Udayavani, Jul 8, 2020, 10:05 AM IST
ಸಾಂದರ್ಭಿಕ ಚಿತ್ರ
ವಾಷಿಂಗ್ಟನ್: ಇತ್ತೀಚೆಗಷ್ಟೇ ಎಚ್-1ಬಿ ಸೇರಿದಂತೆ ಹಲವು ಉದ್ಯೋಗ ಸಂಬಂಧಿ ವೀಸಾಗಳನ್ನು ಈ ವರ್ಷಾಂತ್ಯದವರೆಗೆ ತಾತ್ಕಾಲಿಕವಾಗಿ ರದ್ದುಗೊಳಿಸಿ, ವಿದೇಶಿ ಕಾರ್ಮಿಕರಿಗೆ ಶಾಕ್ ನೀಡಿದ್ದ ಟ್ರಂಪ್ ಸರಕಾರ, ಈಗ ಮತ್ತೂಂದು ಆದೇಶದ ಮೂಲಕ ವಿದೇಶಿ ವಿದ್ಯಾರ್ಥಿಗಳಿಗೆ ಶಾಕ್ ನೀಡಿದೆ. ಕೋವಿಡ್ ಹಿನ್ನೆಲೆಯಲ್ಲಿ ಆನ್‌ಲೈನ್ ತರಗತಿಗಳ ಮೂಲಕವೇ ಪೂರ್ಣ ಪ್ರಮಾಣದಲ್ಲಿ ಪಾಠ ಮುಂದುವರಿಸಲು ಶಿಕ್ಷಣ ಸಂಸ್ಥೆಗಳು ನಿರ್ಧರಿಸಿದರೆ, ದೇಶದ ವಿವಿಧ ಶಿಕ್ಷಣ ಸಂಸ್ಥೆಗಳಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ವಿದೇಶಿ ವಿದ್ಯಾರ್ಥಿಗಳು ತಮ್ಮ ದೇಶಗಳಿಗೆ ಹಿಂದಿರುಗಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದೆ. ಅಮೆರಿಕದಲ್ಲಿರುವ ಭಾರತದ ಸಹಿತ ಲಕ್ಷಾಂತರ ವಿದೇಶಿ ವಿದ್ಯಾರ್ಥಿಗಳಲ್ಲಿ ಸರಕಾರದ ಈ ನಡೆ ಆತಂಕ ಉಂಟು ಮಾಡಿದೆ.
ಕೇಂದ್ರ ವಲಸೆ ವಿಭಾಗದ ಅಧಿಕಾರಿಗಳು ಸೋಮವಾರ ಈ ಸಂಬಂಧ ಮಾರ್ಗಸೂಚಿ ಹೊರಡಿಸಿದ್ದು, ವಲಸೆಯೇತರ ಎಫ್-1ಮತ್ತು ಎಂ-1 ವೀಸಾದಡಿ ಆಗಮಿಸಿರುವ ವಿದ್ಯಾರ್ಥಿಗಳು ಅಮೆರಿಕದಲ್ಲಿ ಇದ್ದುಕೊಂಡು ಸಂಪೂರ್ಣವಾಗಿ ಆನ್‌ಲೈನ್ ಮೂಲಕವೇ ಶಿಕ್ಷಣ ಪಡೆಯಲು ಸಾಧ್ಯವಿಲ್ಲ. ತರಗತಿಗಳಿಗೆ ಹೋಗಲೇಬೇಕಾಗುತ್ತದೆ ಇಲ್ಲವೇ ತಮ್ಮ ದೇಶಗಳಿಗೆ ತೆರಳಬೇಕಾಗುತ್ತದೆ ಎಂದು ಸ್ಪಷ್ಟಪಡಿಸಿದೆ. ಅಲ್ಲದೆ, ಆನ್‌ಲೈನ್ ತರಗತಿಗೆ ಹಾಜರಾಗುತ್ತಿರುವ ವಿದ್ಯಾರ್ಥಿಗಳ ವಿವರ ನೀಡುವಂತೆ ವಿಶ್ವವಿದ್ಯಾಲಯಗಳಿಗೆ ಸೂಚನೆ ನೀಡಿದೆ. ಕೊರೊನಾ ಹಿನ್ನೆಲೆಯಲ್ಲಿ ಹಾರ್ವರ್ಡ್ ಸೇರಿದಂತೆ ದೇಶದ ಹಲವು ಪ್ರಮುಖ ಶಿಕ್ಷಣ ಸಂಸ್ಥೆಗಳು ಆನ್‌ಲೈನ್ ಶಿಕ್ಷಣದ ಮೊರೆ ಹೋಗಿದ್ದು, ಸರಕಾರದ ಈ ಆದೇಶದಿಂದಾಗಿ ಈಗ ಅವು ಬಾಗಿಲು ತೆರೆಯಲೇಬೇಕಾಗಿದೆ. ಶಾಲಾ-ಕಾಲೇಜುಗಳು ಶೀಘ್ರವೇ ಮಾಮೂಲಿ ಶಿಕ್ಷಣ ಕ್ರಮಕ್ಕೆ ಮರಳಬೇಕು ಎಂದು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಇತ್ತೀಚೆಗಷ್ಟೇ ಸೂಚಿಸಿದ್ದರು. ಇದರ ಬೆನ್ನಿಗೇ ಮಾರ್ಗದರ್ಶಿ ಸೂತ್ರಗಳನ್ನು ವಲಸೆ ವಿಭಾಗ ಪ್ರಕಟಿಸಿದೆ.
ವಿಪಕ್ಷಗಳ ನಾಯಕರು ಸರಕಾರದ ಈ ನಿರ್ಧಾರವನ್ನು ಟೀಕಿಸಿದ್ದಾರೆ. ಸರಕಾರದ ಈ ಮಾರ್ಗದರ್ಶಿ ಸೂತ್ರಗಳು ಗಾಬರಿ ಉಂಟು ಮಾಡುವಂತಿವೆ ಎಂದು ಅಮೆರಿಕದ ಶಿಕ್ಷಣ ಮಂಡಳಿ ಪ್ರತಿಕ್ರಿಯಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Pakistan;ಬಲೂಚಿಸ್ಥಾನದಲ್ಲಿ ಉಗ್ರರ ವಿರುದ್ಧ ಸಮಗ್ರ ಕಾರ್ಯಾಚರಣೆಗೆ ಮುಂದಾದ ಪಾಕ್
Modi; 56 ವರ್ಷಗಳಲ್ಲಿ ಗಯಾನಾಗೆ ಭೇಟಿ ನೀಡಿದ ಮೊದಲ ಭಾರತೀಯ ಪ್ರಧಾನಿ
‘New Phase’ of War: ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುತಿನ್ ಅಣ್ವಸ್ತ್ರ ದಾಳಿ ಎಚ್ಚರಿಕೆ!
Copper: ಕಾಂಗೋದಲ್ಲಿ ಕುಸಿದ ಪರ್ವತ: ಸಾವಿರಾರು ಟನ್ ತಾಮ್ರ ಪ್ರತ್ಯಕ್ಷ!
bomb cyclone: ಶೀಘ್ರ ಅಮೆರಿಕ ಕರಾವಳೀಲಿ “ಬಾಂಬ್ ಸೈಕ್ಲೋನ್’ ಸ್ಫೋಟ!
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.