ಓರ್ವನಿಗೆ ಕೋವಿಡ್ ಪಾಸಿಟಿವ್
Team Udayavani, Jul 8, 2020, 1:12 PM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ಚಿತ್ರದುರ್ಗ: ಜಿಲ್ಲೆಯಲ್ಲಿ ಕೋವಿಡ್-19 ವೈರಸ್‌ಗೆ ಸಂಬಂಧಿಸಿದಂತೆ ಮಂಗಳವಾರದ ವರದಿಯಲ್ಲಿ ಓರ್ವ ವ್ಯಕ್ತಿಗೆ ಸೋಂಕು ದೃಢಪಟ್ಟಿದೆ. ಇದರಿಂದಾಗಿ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 90ಕ್ಕೆ ಏರಿಕೆಯಾದಂತಾಗಿದೆ. ಮಂಗಳವಾರದ ವರದಿಯಲ್ಲಿ ಹಿರಿಯೂರು ನಗರದ 54 ವರ್ಷದ ಪುರುಷರೊಬ್ಬರಿಗೆ ಕೋವಿಡ್ ಸೋಂಕು ದೃಢಪಟ್ಟಿದೆ. ಒಟ್ಟು 85 ಜನರ ಗಂಟಲು, ಮೂಗು ದ್ರವ ಮಾದರಿಯನ್ನು ಪರೀಕ್ಷೆಗೆ ಒಳಪಡಿಸಲಾಗಿದೆ.
ಜಿಲ್ಲೆಯ 90 ದೃಢಪಟ್ಟ ಪ್ರಕರಣಗಳಲ್ಲಿ ಈಗಾಗಲೇ 54 ಜನರು ಗುಣಮುಖರಾಗಿ ಬಿಡುಗಡೆ ಹೊಂದಿದ್ದು, 36 ಸಕ್ರಿಯ ಪ್ರಕರಣಗಳಿವೆ. ಚಿತ್ರದುರ್ಗದ ಕೋವಿಡ್ ಆಸ್ಪತ್ರೆಯಲ್ಲಿ 13, ಭರಮಸಾಗರ 4, ಹಿರಿಯೂರು ತಾಲೂಕು ಧರ್ಮಪುರದ ನಿಗದಿತ ಕೋವಿಡ್ ಹೆಲ್ತ್ ಕೇರ್‌ಸೆಂಟರ್‌ನಲ್ಲಿ 10, ಚಳ್ಳಕೆರೆ ತಾಲೂಕು ನಾಯಕನಹಟ್ಟಿಯಲ್ಲಿ 1, ಪರಶುರಾಂಪುರದಲ್ಲಿ 2, ಮೊಳಕಾಲ್ಮೂರು ತಾಲೂಕು ರಾಂಪುರದಲ್ಲಿ 4 ಹಾಗೂ ಹೊಸದುರ್ಗ ತಾಲೂಕು ಬೆಲಗೂರಿನ ನಿಗದಿತ ಕೋವಿಡ್ ಹೆಲ್ತ… ಕೇರ್‌ಸೆಂಟರ್‌ನಲ್ಲಿ ಇಬ್ಬರು ಸೋಂಕಿತರನ್ನು ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಸದ್ಯ ಜಿಲ್ಲೆಯಲ್ಲಿ ಒಟ್ಟು 20 ಕಂಟೇನ್ಮೆಂಟ್ ವಲಯಗಳಿವೆ.
ಸೋಂಕಿತರಿಗೆ ಸಂಬಂಧಿಸಿದಂತೆ ಒಟ್ಟು 1619 ಜನ ಪ್ರಾಥಮಿಕ ಹಾಗೂ ದ್ವಿತೀಯ ಹಂತದ ಸಂಪರ್ಕಿತರನ್ನು ಗುರುತಿಸಲಾಗಿದೆ. ಇದುವರೆಗೆ ಸಾರಿ ಮತ್ತು ಐಎಲ್ ಐ, ಯುಆರ್‌ಐನ ಒಟ್ಟು 2431 ಜನರನ್ನು ಪರೀಕ್ಷೆಗೆ ಒಳಪಡಿಸಲಾಗಿದೆ. 488 ಜನ ಹೋಂ ಕ್ವಾರಂಟೈನ್ ನಲ್ಲಿ ಹಾಗೂ ಮೂವರು ಸಾಂಸ್ಥಿಕ ಕ್ವಾರಂಟೈನ್ ನಲ್ಲಿ ಇದ್ದಾರೆ. 7274 ಜನರ ಗಂಟಲು ದ್ರವ ಮಾದರಿ ಸಂಗ್ರಹಿಸಲಾಗಿದ್ದು, 5388 ಜನರ ವರದಿ ನೆಗೆಟಿವ್ ಬಂದಿದೆ. ಉಳಿದ 180 ಮಾದರಿಗಳು ಪರೀಕ್ಷೆಗೆ ಒಳಪಡಿಸುವ ಅಗತ್ಯವಿಲ್ಲದ ಕಾರಣ ತಿರಸ್ಕೃತಗೊಂಡಿವೆ ಎಂದು ಡಿಎಚ್‌ಒ ಡಾ| ಪಾಲಾಕ್ಷ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chitradurga: ಅಡಿಕೆ ಖರೀದಿಸಿ ಹಣ ನೀಡದೆ ವಂಚನೆ; ಆತ್ಮಹ*ತ್ಯೆಗೆ ಶರಣಾದ ವ್ಯಾಪಾರಿ
Talk Fight: ಬಿ.ಎಸ್.ಯಡಿಯೂರಪ್ಪ ಬಗ್ಗೆ ಹಗುರ ಮಾತು ಸಲ್ಲ: ಬಿ.ವೈ.ವಿಜಯೇಂದ್ರ ಎಚ್ಚರಿಕೆ
Waqf Property: ಸಚಿವ ಜಮೀರ್ ಅಹ್ಮದ್‌ರನ್ನು ಗಡೀಪಾರು ಮಾಡಿ: ಬಿ.ವೈ.ವಿಜಯೇಂದ್ರ
ಬಿಜೆಪಿಯವರಿಗೆ ಕಾಳಜಿಯಿದ್ದರೆ ಕೇಂದ್ರದಿಂದ ಬೆಳೆ ಪರಿಹಾರ ಹೆಚ್ಚಿಸಲಿ: ಕೃಷ್ಣ ಬೈರೇಗೌಡ
Rain: ಚಿತ್ರದುರ್ಗದಲ್ಲಿ ತಡರಾತ್ರಿ ವರುಣನ ಅಬ್ಬರ… ಕೆರೆಯಂತಾದ ನಾಯಕನಹಟ್ಟಿ ಪೊಲೀಸ್ ಠಾಣೆ
MUST WATCH
ಹೊಸ ಸೇರ್ಪಡೆ
Mangaluru: ಪಂಪ್‌ವೆಲ್-ಪಡೀಲ್ ನಡುವಿನ ಚತುಷ್ಪಥ ಕಾಮಗಾರಿ 3 ವರ್ಷ ಕಳೆದರೂ ಅಪೂರ್ಣ
Thirthahalli: ಶಾಸಕ ಸ್ಥಾನವನ್ನು ಗಿರವಿ ಇಟ್ಟರಾ ಆರಗ ಜ್ಞಾನೇಂದ್ರ ?
Kundapura: ಅಕಾಲಿಕ ಮಳೆ; ಭತ್ತ ಕಟಾವಿಗೆ ಅಡ್ಡಿ; ಬೆಳೆ ನಾಶದ ಭೀತಿಯಲ್ಲಿ ರೈತರು
Ullal: ತೊಕ್ಕೊಟ್ಟು-ಮುಡಿಪು ರಸ್ತೆಗೆ ತೇಪೆ ಕಾಮಗಾರಿ
Bengaluru: ಮುನಿರತ್ನ ವಿರುದ್ಧ ಹನಿಟ್ರ್ಯಾಪ್ ಕೇಸ್: ಪಿಐ ಸೆರೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.