ಎಂ.ಪಿ.ರೇಣುಕಾಚಾರ್ಯ ಆಪ್ತ ಸಿಬ್ಬಂದಿಗೆ ಕೋವಿಡ್ ಸೊಂಕು ದೃಢ
Team Udayavani, Jul 8, 2020, 2:15 PM IST
ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪನವರ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ ಅವರ ಆಪ್ತ ಸಿಬ್ಬಂದಿಗೆ ಕೋವಿಡ್ 19 ಸೊಂಕು ಇರುವುದು ದೃಢಪಟ್ಟಿದೆ. ಕಳೆದ ಸೋಮವಾರವಷ್ಟೆ ಕಾಲುನೋವಿಗೆಂದು ಚಿಕಿತ್ಸೆ ಪಡೆಯಲು ಪೋರ್ಟಿಸ್ ಆಸ್ಪತ್ರೆಗೆ ಈ ಸಿಬ್ಬಂದಿ ದಾಖಲಾಗಿದ್ದರು. ಈ ಸಮಯದಲ್ಲಿ ಕೋವಿಡ್ ಪರೀಕ್ಷೆಗೊಳಪಡಿಸಿದಾಗ ಸೊಂಕು ಇರುವುದು ದೃಢಪಟ್ಟಿದೆ.
ಈ ಬಗ್ಗೆ ಸ್ವತಃ ರೇಣುಕಾಚಾರ್ಯ ಅವರು ಮಾಹಿತಿ ನೀಡಿದ್ದು, ಬೆಂಗಳೂರಿನ ನನ್ನ ಸರ್ಕಾರಿ ಅಧಿಕೃತ ಕಚೇರಿಯ ಸಿಬ್ಬಂದಿಗೆ ಕೋವಿಡ್19 ಪಾಸಿಟಿವ್ ಪತ್ತೆಯಾಗಿದೆ.ಇಂದಿನಿಂದ ಶುಕ್ರವಾರದ ಸಂಜೆವರೆಗೂ ಬೆಂಗಳೂರಿನ ನನ್ನ ಸರ್ಕಾರಿ ಗೃಹ ಕಚೇರಿಯಲ್ಲಿ ನಾನು ಕಾರ್ಯನಿರ್ವಹಿಸಲಿದ್ದು, ಸಾರ್ವಜನಿಕರು ಹಾಗು ನನ್ನ ಹಿತೈಷಿಗಳು ನೇರವಾಗಿ ಬಂದು ಭೇಟಿಯಾಗದೆ, ದೂರವಾಣಿ ಮೂಲಕ ನನ್ನನ್ನ ಸಂಪರ್ಕಿಸಬೇಕೆಂದು ವಿನಂತಿಸಿಕೊಳ್ಳುತ್ತೇನೆ ಎಂದಿದ್ದಾರೆ.
ರಾಜ್ಯಾದ್ಯಂತ ಕೋವಿಡ್-19 ಪಾಸಿಟಿವ್ ಪ್ರಕರಣಗಳು ಹೆಚ್ಚಾಗುತ್ತಿದ್ದು, ರಾಜ್ಯದಲ್ಲಿ ಕೆಲವು ಶಾಸಕರು, ಸಂಸದರು ಹಾಗು ಎಂಎಲ್ ಸಿಗಳಿಗೂ ಕೂಡ ಕೋವಿಡ್-19 ಪತ್ತೆಯಾಗಿದ್ದು, ಆತಂಕ ಸೃಷ್ಟಿಸಿದೆ. ಸಾರ್ವಜನಿಕರು ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿಕೊಂಡು, ಕೇಂದ್ರ ಹಾಗೂ ರಾಜ್ಯ ಸರಕಾರಗಳ ನಿಯಮಾವಳಿಗಳನ್ನು ಪಾಲಿಸಬೇಕೆಂದು ವಿನಂತಿಸಿಕೊಳ್ಳುತ್ತೇನೆ ಎಮದು ಮನವಿ ಮಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.