ಕೋವಿಡ್ ಹೆಚ್ಚಳ ಸಾಧ್ಯತೆ; ಸಿದ್ಧತೆ ಮಾಡಿಕೊಳ್ಳಿ

ತಾಲೂಕು ಮಟ್ಟದಲ್ಲೂ ಚಿಕಿತ್ಸೆಗೆ ವ್ಯವಸ್ಥೆ

Team Udayavani, Jul 8, 2020, 3:08 PM IST

ಕೋವಿಡ್ ಹೆಚ್ಚಳ ಸಾಧ್ಯತೆ; ಸಿದ್ಧತೆ ಮಾಡಿಕೊಳ್ಳಿ

ಬೆಳಗಾವಿ: ಜುಲೈ ಹಾಗೂ ಆಗಸ್ಟ್‌ ತಿಂಗಳಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ ಹೆಚ್ಚಳವಾಗುವ ಬಗ್ಗೆ ತಜ್ಞರಿಂದ ವರದಿ ಬಂದಿದೆ. ಹೀಗಾಗಿ ಜಿಲ್ಲಾಡಳಿತ ಜಿಲ್ಲೆಯಲ್ಲಿ ವೆಂಟಿಲೇಟರ್‌, ಹಾಸಿಗೆ ಸೇರಿದಂತೆ ಎಲ್ಲ ರೀತಿಯ ಸಿದ್ಧತೆ ಮಾಡಿಕೊಳ್ಳಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ಕಟ್ಟುನಿಟ್ಟಿನ ಸೂಚನೆ ನೀಡಿದರು.

ಜಿಲ್ಲಾ ಪಂಚಾಯತ ಸಭಾಂಗಣದಲ್ಲಿ ಮಂಗಳವಾರ ನಡೆದ ಕೋವಿಡ್‌-19 ಹಾಗೂ ಪ್ರವಾಹ ನಿರ್ವಹಣೆ ಕುರಿತ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿ, ಕೋವಿಡ್ ಸೋಂಕಿತರು ಹೆಚ್ಚಾಗುವ ಸಾಧ್ಯತೆ ಇರುವುದರಿಂದ ಜಿಲ್ಲಾಡಳಿತ, ಆರೋಗ್ಯ ಇಲಾಖೆ, ಪೊಲಿಸ್‌ ಇಲಾಖೆ ಜಾಗರೂಕತೆಯಿಂದ ಕೆಲಸ ಮಾಡಬೇಕು ಎಂದು ಸಚಿವರು ಸೂಚನೆ ನೀಡಿದರು.

ಅಧಿಕಾರಿಗಳು ಮತ್ತು ಸಿಬ್ಬಂದಿ ಕಳೆದ ನಾಲ್ಕು ತಿಂಗಳಿನಿಂದ ಅತ್ಯುತ್ತಮವಾಗಿ ಕೆಲಸ ಮಾಡಿದ್ದಾರೆ. ಮುಂದಿನ ಎರಡು ತಿಂಗಳು ಮಹತ್ವದ ಅವಧಿ ಯಾಗಿದ್ದು, ಅಧಿಕಾರಿಗಳು ಸಭೆ ಕರೆದು ವೈದ್ಯರು, ಅಧಿ ಕಾರಿ, ಸಿಬ್ಬಂದಿಗೆ ಇನ್ನಷ್ಟು ಚುರುಕಿನಿಂದ ಕೆಲಸ ಮಾಡಲು ಪ್ರೋತ್ಸಾಹಿಸಬೇಕು ಎಂದು ಸಲಹೆ ನೀಡಿದರು.

ನೆಗಡಿ, ಜ್ವರದ ಔಷಧ ತೆಗೆದುಕೊಳ್ಳುತ್ತಿರುವ ಬಗ್ಗೆ ಮೆಡಿಕಲ್‌ ಗಳ ಮೂಲಕ ತಕ್ಷಣ ಮಾಹಿತಿ ಪಡೆದು ಅಂಥವರನ್ನು ಗುರುತಿಸಿ ಪರೀಕ್ಷೆ ನಡೆಸಲು ಕ್ರಮ ಕೈಗೊಳ್ಳಬೇಕು. ಹೋಮ್‌ ಕ್ವಾರಂಟೈನ್‌ನಲ್ಲಿ ಇರುವವರ ಬಗ್ಗೆ ನಿರಂತರ ನಿಗಾ ವಹಿಸಲು ಕ್ರಮ ತೆಗೆದುಕೊಳ್ಳಬೇಕು ಎಂದು ಸಚಿವ ಜಾರಕಿಹೊಳಿ ನಿರ್ದೇಶನ ನೀಡಿದರು.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಶಶಿಕಲಾ ಜೊಲ್ಲೆ ಮಾತನಾಡಿ, ಸೋಂಕಿತರು ಯಾರೂ ಸಮುದಾಯದ ಜತೆ ಬೆರೆಯದಂತೆ ಎಚ್ಚರಿಕೆ ವಹಿಸಬೇಕು. ಗಡಿ ಭಾಗದಲ್ಲಿ ಕಟ್ಟುನಿಟ್ಟಿನ ಆದೇಶ ಪಾಲನೆಯಾಗಬೇಕು ಎಂದರು. ರೈಲ್ವೆ ಇಲಾಖೆ ರಾಜ್ಯ ಸಚಿವ ಸುರೇಶ ಅಂಗಡಿ ಮಾತನಾಡಿ, ರವಿವಾರ ಲಾಕ್‌ ಡೌನ್‌ ಯಶಸ್ವಿಯಾಗಿದ್ದು, ಜನರು ಸ್ವಯಂಪ್ರೇರಣೆಯಿಂದ ಬೆಂಬಲ ನೀಡಿದ್ದಾರೆ. ಜನಪ್ರತಿನಿಧಿ ಗಳೂ ಸ್ವಯಂಪ್ರೇರಣೆಯಿಂದ ಸಾಮಾಜಿಕ ಅಂತರ ಕಾಯ್ದುಕೊಳ್ಳುವ ಮೂಲಕ ಕೋವಿಡ್ ಸೋಂಕು ತಡೆಗಟ್ಟಲು ಸಹಕರಿಸಬೇಕಿದೆ ಎಂದರು.

ರಾಜ್ಯ ತಾಂಡಾ ಅಭಿವೃದ್ಧಿ ನಿಗಮ ಅಧ್ಯಕ್ಷ ಪಿ. ರಾಜೀವ್‌ ಮಾತನಾಡಿ, ಜಿಲ್ಲೆಯಲ್ಲಿ ಒಟ್ಟು ಎಷ್ಟು ವೆಂಟಿಲೇಟರ್‌ ಇವೆ. ಎಷ್ಟು ಬಳಕೆಯಾಗಿದೆ ಎಂಬುದರ ಬಗ್ಗೆ ಮಾಹಿತಿ ಪಡೆದುಕೊಂಡರು. ಶಾಸಕ ಮಹಾಂತೇಶ ಕೌಜಲಗಿ ಮಾತನಾಡಿ, ಮದುವೆ ಮತ್ತಿತರ ಸಮಾರಂಭಗಳಲ್ಲಿ ಅತೀ ಹೆಚ್ಚು ಜನರು ಭಾಗವಹಿಸುತ್ತಿದ್ದಾರೆ. ಹೀಗಾಗಿ ಹೋಮ್‌ ಕ್ವಾರಂಟೈನ್‌ ಇರುವವರ ಮೇಲೆ ನಿಗಾ ವಹಿಸಲು ಸಾಧ್ಯವಾಗುತ್ತಿಲ್ಲ. ಹೋಮ್‌ ಕ್ವಾರಂಟೈನ್‌ ಬದಲು ಅಲ್ಲಿ ಸ್ಥಳೀಯವಾಗಿ ಲಭ್ಯವಿರುವ ಹಾಸ್ಟೆಲ್‌ ಅಥವಾ ಶಾಲಾ ಕಟ್ಟಡಗಳಲ್ಲಿ ಇರಿಸಬೇಕು ಎಂದರು.

ವಿಧಾನ ಪರಿಷತ್‌ ಸರ್ಕಾರದ ಮುಖ್ಯ ಸಚೇತಕ ಮಹಾಂತೇಶ ಕವಟಗಿಮಠ ಮಾತನಾಡಿ, ಸೋಂಕಿತ ಮಹಿಳೆಯರಿಗೆ ಹೆರಿಗೆ ಬಳಿಕ ಯಾವ ರೀತಿ ತಪಾಸಣೆ ಮಾಡಲಾಗುತ್ತಿದೆ. ಜನಿಸಿದ ಮಗುವಿಗೆ ಸೋಂಕು ತಗುಲಿದೆಯೇ ಎಂಬ ಬಗ್ಗೆ ಮಾಹಿತಿ ಪಡೆದುಕೊಂಡರು.

ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಮಾತನಾಡಿ, ಜಿಲ್ಲಾ ಹಾಗೂ ತಾಲೂಕು ಮಟ್ಟದಲ್ಲಿ ಕೋವಿಡ್‌ ಸೋಂಕಿತರಿಗೆ ಚಿಕಿತ್ಸೆ ನೀಡಲು ಸಿದ್ಧತೆ ಮಾಡಿಕೊಳ್ಳಲಾಗಿದೆ. ಸರ್ಕಾರದ ಮಾರ್ಗಸೂಚಿ ಪ್ರಕಾರ ಸೋಂಕಿತರಿಗೆ ಚಿಕಿತ್ಸೆ ಮತ್ತು ಕ್ವಾರಂಟೈನ್‌ ವ್ಯವಸ್ಥೆ ಮಾಡಲಾಗುತ್ತಿದೆ. ಮಹಾರಾಷ್ಟ್ರದಿಂದ ಬರುವ ಮಂದಿಗೆ ಹೊಸ ಮಾರ್ಗಸೂಚಿ ಪ್ರಕಾರ 14 ದಿನಗಳ ಕಾಲ ಹೋಮ್‌ ಕ್ವಾರಂಟೈನ್‌ ಇರಲಿದೆ. ನಿಯಮಾವಳಿ ಉಲ್ಲಂಘಿಸಿ ಮನೆ ಬಿಟ್ಟು ಹೊರ ಬಂದರೆ ಪ್ರಕರಣ ದಾಖಲಿಸಲಾಗುವುದು ಎಂದು ಹೇಳಿದರು.

ಜಿಲ್ಲೆಯ ಎರಡು ಪ್ರಯೋಗಾಲಯಗಳಲ್ಲಿ ಐದು ನೂರು ಮಾದರಿ ತಪಾಸಣೆ ಮಾಡಬಹುದು. ಖಾಸಗಿ ಆಸ್ಪತ್ರೆ ಜತೆಗೂ ಚರ್ಚಿಸಲಾಗಿದ್ದು, ತಪಾಸಣೆ ಸಂಖ್ಯೆ ಹೆಚ್ಚಿಸುವ ನಿಟ್ಟಿನಲ್ಲಿ ಪ್ರಯತ್ನಿಸಲಾಗುತ್ತಿದೆ. ಜಿಲ್ಲೆಯಲ್ಲಿ ಒಟ್ಟು 27 ವೆಂಟಿಲೇಟರ್‌ಗಳಿದ್ದು, ಸದ್ಯಕ್ಕೆ ಕೊರತೆ ಕಂಡುಬಂದಿಲ್ಲ. ಕ್ವಾರಂಟೈನ್‌ ಆ್ಯಪ್‌ ಮೂಲಕ ಹೋಮ್‌ ಕ್ವಾರಂಟೆ„ನ್‌ ಇರುವವರ ಮೇಲೆ ತೀವ್ರ ನಿಗಾ ವಹಿಸಲಾಗುತ್ತಿದೆ. ಅದೇ ರೀತಿ ವಾರ್ಡ್‌ ಮಟ್ಟದ ಸಮಿತಿಗಳನ್ನು ಕೂಡ ರಚಿಸುವ ಮೂಲಕ ಈ ಬಗ್ಗೆ ಇನ್ನಷ್ಟು ಎಚ್ಚರಿಕೆ ವಹಿಸಲಾಗುವುದು ಎಂದು ಜಿಲ್ಲಾ ಧಿಕಾರಿ ಹಿರೇಮಠ ತಿಳಿಸಿದರು.

ಜಿಪಂ ಸಿಇಒ ಡಾ| ರಾಜೇಂದ್ರ ಕೆ.ವಿ. ಮಾತನಾಡಿ, ಹೋಮ್‌ ಕ್ವಾರಂಟೆ„ನ್‌ ಇರುವವರ ಮೇಲೆ ನಿರಂತರ ನಿಗಾ ವಹಿಸಲು ಗ್ರಾಪಂ ಮಟ್ಟದಲ್ಲೇ ತಂಡಗಳನ್ನು ನಿಯೋಜಿಸಲಾಗಿದೆ. ಮುಂಬರುವ ದಿನಗಳಲ್ಲಿ ಪ್ರತಿದಿನ ಒಂದು ಸಾವಿರ ಮಾದರಿ ಪರೀಕ್ಷೆಗೆ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ತಿಳಿಸಿದರು.

ಬಿಮ್ಸ್‌ ನಿರ್ದೇಶಕ ಡಾ| ವಿನಯ ದಾಸ್ತಿಕೊಪ್ಪ ಮಾತನಾಡಿ, ಬಿಡುಗಡೆ ಹೊಂದಿದವರ ಪೈಕಿ ಒಬ್ಬರಿಗೆ ಮಾತ್ರ ಮತ್ತೆ ಸೋಂಕು ಕಂಡು ಬಂದಿದೆ. ಸದ್ಯ 8 ಮಂದಿ ಕೋವಿಡ್ ಗೆ ಬಲಿಯಾಗಿದ್ದಾರೆ ಎಂದರು. ಡಿಎಚ್‌ಒ ಡಾ. ಎಸ್‌.ವಿ. ಮುನ್ಯಾಳ ಮಾತನಾಡಿ, 5 ಸಾವಿರಕ್ಕೂ ಅಧಿ ಕ ವಲಸೆ ಕಾರ್ಮಿಕರಿದ್ದು, ಅವರಿಗೂ ತಪಾಸಣೆಗೆ ಒಳಪಡಿಸಲಾಗಿದೆ. ಎಲ್ಲರ ಫಲಿತಾಂಶ ನೆಗೆಟಿವ್‌ ಬಂದಿದೆ ಎಂದು ವಿವರಿಸಿದರು.

ಎಸ್‌ಪಿ ಲಕ್ಷ್ಮಣ ನಿಂಬರಗಿ ಮಾತನಾಡಿ, ಅಂತರ್‌ ರಾಜ್ಯ ಗಡಿಯಲ್ಲಿ ವಲಸೆ ಕಾರ್ಮಿಕರು ಮತ್ತು ಪ್ರಯಾಣಿಕರ ಮೇಲೆ ಗಡಿಭಾಗದ 40ಕ್ಕೂ ಅಧಿಕ ಗ್ರಾಮಗಳಲ್ಲಿ ಪೊಲಿಸ್‌ ಹಾಗೂ ಗ್ರಾಮಸ್ಥರ ಸಹಭಾಗಿತ್ವದಲ್ಲಿ ನಿಗಾ ವಹಿಸಲಾಗಿದೆ ಎಂದು ಹೇಳಿದರು.

ಸಂಸದ ಅಣ್ಣಾಸಾಹೇಬ ಜೊಲ್ಲೆ, ಶಾಸಕ ಅನಿಲ ಬೆನಕೆ, ಜಿಪಂ ಅಧ್ಯಕ್ಷೆ ಆಶಾ ಐಹೊಳೆ, ಉಪಾಧ್ಯಕ್ಷ ಅರುಣ ಕಟಾಂಬಳೆ, ನಗರ ಪೊಲಿಸ್‌ ಆಯುಕ್ತ ಡಾ. ಕೆ. ತ್ಯಾಗರಾಜನ್‌ ಇತರರು ಇದ್ದರು.

ಮಳೆ-ಬೆಳೆ ಸ್ಥಿತಿಗತಿ ಪರಿಶೀಲನೆ :  ಮಳೆಗಾಲ ಆರಂಭಗೊಂಡಿದ್ದರಿಂದ ರೈತರಿಗೆ ಬಿತ್ತನೆ ಬೀಜ, ಗೊಬ್ಬರಗಳ ಪೂರೈಕೆಗೆ ತೊಂದರೆಯಾಗಬಾರದು. ಅಲ್ಲದೇ ರೈತರಿಗೆ ಸಿಗಬೇಕಿರುವ ಪರಿಹಾರ ಮತ್ತು ಬೆಳೆವಿಮೆ ಸಮರ್ಪಕವಾಗಿ ಒದಗಿಸಬೇಕು ಎಂದು ಸಚಿವ ರಮೇಶ ಜಾರಕಿಹೊಳಿ ಅಧಿಕಾರಿಗಳಿಗೆ ಸೂಚನೆ ನೀಡಿದರು. ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಮಾತನಾಡಿ, ಯೂರಿಯಾ ಗೊಬ್ಬರವನ್ನು ಹೆಚ್ಚಿನ ಪ್ರಮಾಣದಲ್ಲಿ ತರಿಸಿಕೊಂಡು ಅಗತ್ಯವಿರುವ ರೈತರಿಗೆ ವಿತರಿಸಬೇಕು ಎಂದು ತಿಳಿಸಿದರು. ಬೆಳೆಹಾನಿ ಸಮೀಕ್ಷೆ ಸಮರ್ಪಕವಾಗಿ ನಡೆದಿಲ್ಲ. ಮರು ಸಮೀಕ್ಷೆ ಮಾಡುವಂತೆ ಪದೇ ಪದೇ ಮನವಿ ಮಾಡಿಕೊಂಡರೂ ಸರಿಯಾಗಿ ಸ್ಪಂದಿಸುತ್ತಿಲ್ಲ ಎಂದು ಶಾಸಕರಾದ ಮಹಾಂತೇಶ ಕೌಜಲಗಿ, ಮಹಾಂತೇಶ ದೊಡಗೌಡ್ರ ಹಾಗೂ ದುರ್ಯೋಧನ ಐಹೊಳೆ ಅಸಮಾಧಾನ ವ್ಯಕ್ತಪಡಿಸಿದರು. ಶಾಸಕರು ಅಸಮಾಧಾನ ವ್ಯಕ್ತಪಡಿಸಿದ್ದಕ್ಕೆ ಸ್ಪಂದಿಸಿದ ಸಚಿವರು, ಈ ಬಗ್ಗೆ ತಕ್ಷಣವೇ ಮರುಪರಿಶೀಲಿಸಬೇಕು ಎಂದು ತಿಳಿಸಿದರು. ಬೆಳೆಹಾನಿ ಕುರಿತು ಸರ್ಕಾರದ ಮಾರ್ಗಸೂಚಿ ಪ್ರಕಾರ ಪರಿಶೀಲಿಸಿ ಕ್ರಮಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಹಿರೇಮಠ ತಿಳಿಸಿದರು.

ಪ್ರವಾಹ ನಿರ್ವಹಣೆ- ಪೂರ್ವಸಿದ್ಧತೆಗೆ ಸೂಚನೆ :  ಮಹಾರಾಷ್ಟ್ರದಲ್ಲಿ ಮಳೆ  ಜಾಸ್ತಿಯಾಗುತ್ತಿರುವುದಿಂದ ನದಿ ತೀರದ ಗ್ರಾಮಗಳಲ್ಲಿ ಪ್ರತಿದಿನ ಪರಿಸ್ಥಿತಿ ನಿಗಾವಹಿಸಬೇಕು. ತುರ್ತು ಪರಿಸ್ಥಿತಿ ನಿರ್ವಹಿಸಲು ಅಗತ್ಯವಿರುವ ಬೋಟ್‌ ಮತ್ತಿತರ ಸಲಕರಣೆಗಳನ್ನು ಸಿದ್ಧವಾಗಿಟ್ಟುಕೊಳ್ಳಬೇಕು ಎಂದು ಸಚಿವ ರಮೇಶ ಜಾರಕಿಹೊಳಿ ತಿಳಿಸಿದರು. ಕೋವಿಡ್‌ ಹಿನ್ನೆಲೆಯಲ್ಲಿ ಕಟ್ಟಡ ಕಾರ್ಮಿಕರು, ಅಗಸರು, ಕ್ಷೌರಿಕರು ಹಾಗೂ ಚಾಲಕರಿಗೆ ಸರ್ಕಾರ ಘೋಷಿಸಿರುವ ಸಹಾಯಧನ ಈಗಾಗಲೇ ಅನೇಕರಿಗೆ ಜಮಾ ಮಾಡಲಾಗಿದ್ದು, ಉಳಿದವರಿಗೆ ಕೂಡಲೇ ನೇರವಾಗಿ ಜಮಾ ಮಾಡಲಾಗುವುದು ಎಂದು ಜಿಲ್ಲಾಧಿಕಾರಿ ಹಿರೇಮಠ ತಿಳಿಸಿದರು.

ಟಾಪ್ ನ್ಯೂಸ್

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

nagavalli bangale kannada movie

Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು

ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Namma Santhe: ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Belagavai: ಆಟೋಗೆ ಕಾರು ಟಚ್ ಆಗಿದ್ದಕ್ಕೆ ಮಾಜಿ ಶಾಸಕರ ಹ*ತ್ಯೆ!

Belagavai: ಆಟೋ ಚಾಲಕನ ಜತೆ ಜಗಳ ಬೆನ್ನಲ್ಲೇ ಗೋವಾ ಮಾಜಿ ಶಾಸಕ ಸಾವು!

Belgavi: ಬೆಳಗಾವಿ ಪ್ರಾದೇಶಿಕ ಆಯುಕ್ತರ ವಿರುದ್ಧ ರಾಜ್ಯಪಾಲರಿಗೆ ಶಾಸಕ ಅಭಯ ದೂರು

Belgavi: ಬೆಳಗಾವಿ ಪ್ರಾದೇಶಿಕ ಆಯುಕ್ತರ ವಿರುದ್ಧ ರಾಜ್ಯಪಾಲರಿಗೆ ಶಾಸಕ ಅಭಯ ದೂರು

Belegavi: ಗದ್ದೆಗೆ ಹೊತ್ತಿದ್ದ ಬೆಂಕಿ ಆರಿಸಲುಹೋಗಿ ಸುಟ್ಟು ಕರಕಲಾದ ರೈತ

Belegavi: ಗದ್ದೆಗೆ ಹೊತ್ತಿದ್ದ ಬೆಂಕಿ ಆರಿಸಲುಹೋಗಿ ಸುಟ್ಟು ಕರಕಲಾದ ರೈತ

Belagavi: Rpe, mrder have increased due to the court system: Muthalik

Belagavi: ನ್ಯಾಯಾಲಯ ವ್ಯವಸ್ಥೆಯಿಂದಲೇ ಅತ್ಯಾ*ಚಾರ, ಕೊ*ಲೆ ಹೆಚ್ಚಾಗಿದೆ: ಮುತಾಲಿಕ್

Belagavi: Return to public life in two weeks: Minister Lakshmi Hebbalkar

Belagavi: ಎರಡು ವಾರಗಳಲ್ಲಿ ಸಾರ್ವಜನಿಕ ಜೀವನಕ್ಕೆ ವಾಪಸ್: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

MUST WATCH

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

udayavani youtube

ಮುಕೇಶ್ ಅಂಬಾನಿ ಕುಟುಂಬದ ನಾಲ್ಕು ತಲೆಮಾರು ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ

ಹೊಸ ಸೇರ್ಪಡೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

18

Uv Fusion: ಗೆಳೆತನವೆಂಬ ನಿಸ್ವಾರ್ಥ ಬಾಂಧವ್ಯ

17

Uv Fusion: ಎಡವುದು ಕೂಡ ಒಳ್ಳೆಯದೇ ಒಮ್ಮೊಮ್ಮೆ…

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.